ಶಹಾಬಾದ : ತ್ರಿಪುರಾ ರಾಜ್ಯದಲ್ಲಿ ಅಮಾಯಕರ ಹಾಗೂ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯವೆಸಗಿರುವುದನ್ನು ಖಂಡಿಸಿ ಶುಕ್ರವಾರ ನಗರದ ಸಿಟಿಜೆನ್ ಕ್ಲಬ್ ಶಹಾಬಾದ ವತಿಯಿಂದ ನಗರದ ಅಂಬೇಡ್ಕರ್ ಪ್ರತಿಮೆಯ ಬಳಿ ಸೇರಿಕೊಂಡು ಪ್ರತಿಭಟನೆ ನಡೆಸಿದರು.
ಕೇಂದ್ರ ಹಾಗೂ ರಾಜ್ಯ ಆಡಳಿತದ ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತರ ಮುಸ್ಲಿಂ ಸಮುದಾಯಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ.ಇದಕ್ಕೆ ತ್ರಿಪುರಾ ಘಟನೆಯೇ ಸಾಕ್ಷಿ.ಕೇಂದ್ರದ ವೈಫಲ್ಯಗಳನ್ನು ಮುಚ್ಚುಕೊಳ್ಳುವುದಕ್ಕೆ ಬಿಜೆಪಿ ಸರಕಾರ ಜನರ ಗಮನ ಬೇರೆಡೆ ಸೆಳೆಯುವುದಕ್ಕೆ ದೇಶದಲ್ಲಿ ಮುಸ್ಲಿಂ ಸಮುದಾಯದವರ ಮೇಲೆ ದೌರ್ಜನ್ಯಗಳು ನಡೆಯುತ್ತಿದೆ.
ಬಿಜೆಪಿ ಸರ್ಕಾರದ ಬಂದ ಮೇಲೆ ಇಂತಹ ಘಟನೆಗಳು ನಡೆಯುತ್ತಿವೆ. ತ್ರಪುರಾದಲ್ಲಿ ಮುಸ್ಲಿಂ ಪ್ರಾರ್ಥನಾ ಸ್ಥಳಗಳ ಮೇಲೆ ದಾಳಿ ನಡೆದಿವೆ.ಮಹಿಳೆಯರ ಮೇಲೆ ಹಲ್ಲೆಗಳಾಗಿವೆ.ಕೂಡಲೇ ಹಲ್ಲೆ ಹಾಘೂ ದಾಳಿಗೆ ಕಾರಣರಾದವರನ್ನು ವಿರುದ್ಧ ಕಠಿಣ ಶಿಕ್ಷೆಗೆ ಒಳಪಡಿಸಬೇಕು.ಅಲ್ಲದೇ ದೌರ್ಜನಕ್ಕೆ ಒಳಗಾದ ಹಾಗೂ ಆಸ್ತಿ ಪಾಸ್ತಿಗೆ ಹಾನಿಯಾದ ಕುಟುಂಬಗಳಿಗೆ ಅಲ್ಲಿನ ಸರ್ಕಾರ ಸೂಕ್ತ ಪರಿಹಾರ ನೀಡಬೇಕು.ತಪ್ಪಿತಸ್ಥರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ನಂತರ ಉಪತಹಸೀಲ್ದಾರ ಮಲ್ಲಿಕಾರ್ಜುನ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಿಟಿಜೆನ್ ಕ್ಲಬ್ ಶಹಾಬಾದ ಅಧ್ಯಕ್ಷ ಯಾಸಿನ್ ಹುಸೇನ ಚಿಟ್,ಜಮೀರ್ ಬೇಗ, ಮಹ್ಮದ್ ಅಜರ್,ಡಾ.ರಶೀದ್ ಮರ್ಚಂಟ, ಉಬೆದುಲ್ಲಾ,ಹಾಷಮ ಖಾನ, ಫಜಲ್ ಪಟೇಲ್,ಜಾಕೀರ ಹುಸೇನ್, ಮುಜೀಬ, ಮುಜಾಹಿದ್ದಿನ್ ಹುಸೇನ್,ರಫಿಕ ಭಾಗಬಾನ, ರಹೀಂಖಾನ ಮದನಿ,ಅಕ್ಬರ್ ಚಿಟ್,ಡಾ.ಅಹ್ಮದ್ ಪಟೇಲ್, ಜಹೀರ ಪಟವೇಗರ್, ಮಹ್ಮದ್ ಇಮ್ರಾನ್, ಮಹ್ಮದ್ ಮುಬೀನ್, ಮಹ್ಮದ್ ಜಾವೀದ್,ನಜೀಬಖಾನ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…