ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗೋಷ್ಠಿಯಲ್ಲಿ ಶನಿವಾರ ನೀಡಿದ ಪ್ರತಿಕ್ರಿಯೆ:
ಬೆಂಗಳೂರು: ಬಿಟ್ ಕಾಯಿನ್ ಪ್ರಕರಣವನ್ನು ಕಾಂಗ್ರೆಸ್ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ, ‘ನಾನು ಎಲ್ಲಿಗೂ ಓಡಿ ಹೋಗುವುದಿಲ್ಲ, ನಾವೆಲ್ಲರೂ ಇಲ್ಲೇ ಇರುತ್ತೇವೆ. ನಾವು ನಿಮ್ಮಿಂದ ಸಾಧ್ಯವಾದಷ್ಟು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದೇವೆ. ಸಮಯ ಬಂದಾಗ ನಾವು ಆ ಬಗ್ಗೆ ಮಾತನಾಡುತ್ತೇವೆ’ ಎಂದು ಉತ್ತರಿಸಿದರು.
ದಾಖಲೆ ಬಿಡುಗಡೆ ಮಾಡುತ್ತೇವೆ ಎನ್ನುತ್ತಿದ್ದೀರಿ, ನಾವು ಕಾಯುತ್ತಿದ್ದೇವೆ ಎಂಬ ಪ್ರಸ್ತಾಪಕ್ಕೆ, ‘ಈ ಪ್ರಕರಣದ ವಿಚಾರವಾಗಿ ಒಂದೊಂದೇ ಮಾಹಿತಿ ಹೊರಬರುತ್ತಿದೆಯಲ್ಲ. ಸರ್ಕಾರ ತನ್ನ ನಿಲುವು ಬದಲಿಸಿದೆ. ಅವರು ಏನೆಲ್ಲ ವಶಪಡಿಸಿಕೊಂಡಿದ್ದಾರೋ ಈಗ ಅದರ ದಾಖಲೆಯೇ ಇಲ್ಲವೆಂದು ಮಾಹಿತಿ ತಿರುಚುತ್ತಿದ್ದಾರೆ ಎಂಬ ಮಾಧ್ಯಮ ವರದಿ ನೋಡಿದ್ದೇನೆ. ಅದರಲ್ಲೇ ನಿಮಗೆ ಉತ್ತರ ಸಿಗುತ್ತದೆ’ ಎಂದರು.
ಕಾಂಗ್ರೆಸ್ ನವರು ದಾಖಲೆ ಕೊಟ್ಟು ಮಾತನಾಡಲಿ ಎಂಬ ಬಿಜೆಪಿ ಹೇಳಿಕೆಗೆ, ‘ಮಾಹಿತಿ, ದಾಖಲೆಗಳನ್ನು ಜನರ ಮುಂದಿಡುವುದು ಸರ್ಕಾರದ ಕೆಲಸ. ಅವರು ಯಾವ ದಾಖಲೆ ಕೊಟ್ಟಿದ್ದಾರೋ ಅದರ ಆಧಾರದ ಮೇಲೆ ನಾವು ಮಾತನಾಡುತ್ತಿದ್ದೇವೆ. ನಾನು ನಿನ್ನೆ ಅದರ ಆಧಾರದ ಮೇಲೆ ಮಾತನಾಡಿದ್ದೇನೆ. ಈಗ ಅವರು ನಮ್ಮ ಬಳಿ ದಾಖಲೆ ಇಲ್ಲ ಎಂದು ಹೇಳುತ್ತಿದ್ದಾರೆ. ಪ್ರಕರಣದಲ್ಲಿ ದಾಖಲಾಗಿರುವ ಚಾರ್ಜ್ ಶೀಟ್ ದಾಖಲೆ ಕೇಳಿದ್ದೇನೆ. ನಿಮ್ಮ ಹೋಂವರ್ಕ್ ನಡೆದಂತೆ ನಮ್ಮದೂ ನಡೆಯುತ್ತಿದೆ’ ಎಂದು ಪ್ರತಿಕ್ರಿಯಿಸಿದರು.
ಬಿಟ್ ಕಾಯಿನ್ ವಿಚಾರವನ್ನು ನಿರ್ಲಕ್ಷಿಸಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ ಎಂಬುದಕ್ಕೆ, ‘ನಾನು ಸರಿಯಾದ ಮಾಹಿತಿ ಇಲ್ಲದೆ ಮಾತನಾಡುವುದಿಲ್ಲ. ಬೇರೆಯವರ ಬಗ್ಗೆ ನನಗೆ ಗೊತ್ತಿಲ್ಲ. ಕೆಪಿಸಿಸಿ ಸರಿಯಾದ ದಾಖಲೆ ಇದ್ದರೆ ಮಾತ್ರ ಮಾತನಾಡುತ್ತದೆ’ ಎಂದು ಹೇಳಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…