ಕಲಬುರಗಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಅಫಜಲಪುರ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಏರ್ಪಡಿಸಲಾದ ಶಾಲೆಕಡೆ ನನ್ನ ನಡೆ ಜನಜಾಗೃತಿ ಜಾಥಾಕ್ಕೆ ಅಫಜಲಪುರ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಸಿವಿಲ್ ನ್ಯಾಯಾಧೀಶ ಅಶೋಕ ಟಿ. ಅವರು ಚಾಲನೆ ನೀಡಿದರು.
ಅಫಜಲಪುರ ತಾಲೂಕು ಆಡಳಿತ, ಕಾನೂನು ಸೇವೆ ಸಮಿತಿ, ತಾಲೂಕು ವಕೀಲರ ಸಂಘ, ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗ, ಕಾರ್ಮಿಕ ಇಲಾಖೆ, ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಘ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಾರ್ಗದರ್ಶಿ ಸಂಸ್ಥೆ, ಸಂಸ್ಕಾರ ಪ್ರತಿಷ್ಠಾನ ಸಂಸ್ಥೆ, ಸಾಮಾಜಿಕ ಪರಿವರ್ತನಾ ಜನಾಂದೋಲನ
ಸಂಸ್ಥೆ, ಡಾನ ಬಾಸ್ಕೋ ಸಂಸ್ಥೆ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಅಫಜಲಪುರ ಶಾಲೆಯ ಮುಖ್ಯ ಗುರುಗಳಾದ ಎಚ್.ಎಸ್. ಪಾಟೀಲ, ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಜಿ. ಪೂಜಾರಿ, ಅಫಜಲಪುರ ತಹಶೀಲ್ದಾರ ಕೆ.ಜಿ. ಪೂಜಾರಿ, ಸಿಡಿಪಿಓ ಶ್ರೀಕಾಂತ ಮೇಂಗಜಿ, ಸಂಸ್ಕಾರ ಪ್ರತಿಷ್ಠಾನ ಸಂಸ್ಥೆಯ ನಿರ್ದೇಶಕ ವಿಠ್ಠಲ ಚಿಕಣಿ ಹಾಗೂ ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ ಹಾಗೂ ಡಾನ ಬಾಸ್ಕೋ ಕ್ರಿಯಾ ಯೋಜನೆಯ ಸಂಯೋಜಕಿ ಗೀತ ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…