ಸುರಪುರ: ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ ನಾರಾಯಣ ಗೌಡ ಬಣದಿಂದ ನಾಲ್ವಡಿ ಶ್ರೀ ರಾಜಾ ವೆಂಕಟಪ್ಪ ನಾಯಕ ನಾಟ್ಯ ಹವ್ಯಾಸಿ ಕಲಾವಿದರ ಸಾಂಸ್ಕೃತಿಕ ಸಂಘ (ರಿ) ಕಬಾಡಗೇರಾ ಸುರಪುರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಾದಗಿರಿ ಇವರ ಸಹಯೋಗದಲ್ಲಿ17ನೇ ವರ್ಷದ ಕರವೇ ರಾಜ್ಯೋತ್ಸವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಾಸಕ ನರಸಿಂಹ ನಾಯಕ (ರಾಜೂಗೌಡ) ಉದ್ಘಾಟಿಸಿದರು.
ದೇವಾಪುರ ಜಡಿಶಾಂತಲಿಂಗೇಶ್ವರ ಹಿರೇಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ. ಲಕ್ಷ್ಮೀಪುರ ಶ್ರೀ ಗಿರಿಮಠದ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ. ಸಿದ್ದರಾಮಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ) ತಾಯಿ ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಕರವೇ ರಾಜ್ಯಾ ಪ್ರಧಾನ ಸಂಚಾಲಕ ಬಸವರಾಜ ಪಡುಕೋಟೆ. ಜಿಲ್ಲಾಧ್ಯಕ್ಷ ಬೀಮು ನಾಯಕ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆ ಮೇಲೆ ಮುಖಂಡರಾದ ರಾಜಾ ಮುಕುಂದ ನಾಯಕ. ಕಿಶೋರಚಂದ್ ಜೈನ್. ಸಯ್ಯದ್ ಖಾದ್ರಿ. ಬಲಭೀಮ ನಾಯಕ ಬೈರಿಮಡ್ಡಿ.ಶರಣು ನಾಯಕ ಬೈರಿಮಡ್ಡಿ. ಮಹೇಶ್ ಪಾಟೀಲ.ವೇಣುಮಾದವ ನಾಯಕ. ನರಸಿಂಹಕಾಂತ ಪಂಚಮಗಿರಿ. ವಿಶೇಷವಾಗಿ ಸರಿಗಮಪ ಖ್ಯಾತಿಯ ಸುನೀಲ್ ಗಜಗೊಂಡ. ಸಾಕ್ಷಿ ಕಲ್ಲೊರ್. ಹಾಗೂ ಜ್ಞಾನೇಶ ಭಾಗವಹಿಸಿ ತಮ್ಮ ಗಾಯನದ ಮೂಲಕ ಎಲ್ಲರನ್ನು ರಂಜಿಸಿದರು. ಕರವೇ ತಾಲೂಕು ಘಟಕ ಅಧ್ಯಕ್ಷ ವೆಂಕಟೇಶ ನಾಯಕ ಬೈರಿಮಡ್ಡಿ. ಭೀಮು ನಾಯಕ ಮಲ್ಲಿಬಾವಿ.ವೆಂಕಟೇಶ ಪ್ಯಾಪಿಲಿ. ಹಣಮಗೌಡ ಶಖಾಪುರ.ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಕರವೇ ಕಾರ್ಯಕರ್ತರು ಹಾಗೂ ಕನ್ನಡಾಭಿಮಾನಿಗಳು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…