ಸುರಪುರ: ತಾಲೂಕಿನ ಲಕ್ಷ್ಮೀಪುರ ಗ್ರಾಮಕ್ಕೆ ಬಸವಕಲ್ಯಾಣ ಶಾಸಕ ಶರಣು ಸಲಗರವರು ಭೇಟಿ ನೀಡಿದರು.ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಯುವ ವೇದಿಕೆ ರಾಜ್ಯ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಡೊಣೂರವರ ಮನೆಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಶರಣು ಸಲಗರವರನ್ನು ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ರಾಜಾ ಹನುಮಪ್ಪ ನಾಯಕ (ತಾತಾ),ಕಲಬುರ್ಗಿ ಯಾದಗಿರಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹಾಗೂ ತಾಲೂಕು ವೀರಶೈವ ಲಿಂಗಾಯತ ಸಮಿತಿ ಅಧ್ಯಕ್ಷ ಸುರೇಶ ಸಜ್ಜನ್,ರಾಜಶೇಖರ ಡೊಣೂರ,ಸಿದ್ದನಗೌಡ ಹೆಬ್ಬಾಳ,ದೇವೆಂದ್ರಪ್ಪಗೌಡ ಮಾಲಗತ್ತಿ,ನಾಗಭೂಷಣ ಯಾಳಗಿ,ಭೀಮಾಶಂಕರ ಹಳ್ಳದ್,ಮಲಕಣ್ಣ ಶುಕ್ಲಾ ಸೇರಿದಂತೆ ಚಂದ್ರಶೇಖರ ಡೊಣೂರವರ ಕುಟುಂಬಸ್ಥರು ಹಾಗು ಲಕ್ಷ್ಮೀಪುರ ಗ್ರಾಮಸ್ಥರಿದ್ದರು.