ಕಲಬುರಗಿ: ಪುನೀತ್ ರಾಜಕುಮಾರ ಕೇವಲ ನಟರಾಗಿರದೇ ಒಬ್ಬ ಹೃದಯವಂತ, ಸಾಮಾಜಿಕ ಕಳಕಳಿ ಹೊಂದಿದ್ದರು. ಅವರನ್ನು ಕಳೆದುಕೊಂಡ ಕರುನಾಡಿಗೆ ತುಂಬಲಾಗದ ನಷ್ಟವಾಗಿದೆ ಎಂದು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೀಲಕಂಠರಾವ್ ಮೂಲಗೆ ವಿಷಾದಿಸಿದರು.
ನಗರದ ಸೂಪರ್ ಮಾರ್ಕೆಟ್ ಸಿಟಿ ಬಸ್ ನಿಲ್ದಾಣದ ಆವರಣದಲ್ಲಿ ಹೆಚ್. ಶಿವರಾಮೇಗೌಡರ ಕರವೇ ಹಮ್ಮಿಕೊಂಡಿದ್ದ ಪುನೀತ್ ಸ್ಮರಣಾರ್ಥ ಅನ್ನ ಸಂತರ್ಪಣೆ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಪುನೀತ್ ಅವರು ಪ್ರತಿ ಕನ್ನಡಿಗನಿಗೂ, ಕನ್ನಡ ನಟರಿಗೂ ಆದರ್ಶಪ್ರಾಯರಾಗಿದ್ದಾರೆ. ಅವರ ಹೃದಯವಂತಿಕೆ, ಸಜ್ಜನಿಕೆಯನ್ನು ಇತರರು ಅಳವಡಿಸಿಕೊಳ್ಳಬೇಕು. ಅವರ ಜೀವನ ಎಲ್ಲರಿಗೂ ಆದರ್ಶವಾಗಿದೆ ಎಂದರು.
ರಂಗಾಯಣ ನಿರ್ದೇಶಕ ಪ್ರಭಾಕರ್ ಜೋಶಿ ಮಾತನಾಡಿ, ಬೆಳ್ಳಿ ತೆರೆಯ ನಟರಾಗಿದ್ದ ಪುನೀತ್ ಅವರ ಮನಸ್ಸು ಮತ್ತು ವಿಚಾರಗಳು ಬಂಗಾರದಂತಿದ್ದವು ಎಂದರು.
ಈ ಸಂದರ್ಭದಲ್ಲಿ ಬೀದಿ ವ್ಯಾಪಾರಿಗಳ ಸಂಘಟನೆ ಅಧ್ಯಕ್ಷರಾದ ಜಗನ್ನಾಥ ಸೂರ್ಯವಂಶಿ, ಚಲನಚಿತ್ರ ನಿರ್ಮಾಪಕ ಶರಣು ಕಾಳೆ, ಕರವೇ ಜಿಲ್ಲಾಧ್ಯಕ್ಷ ಮಂಜುನಾಥ ನಾಲವಾರಕರ್, ಪದಾಧಿಕಾರಿಗಳಾದ ರವಿ ವಾಲಿ, ಪ್ರಲ್ಹಾದ್ ಹಡಗಿಲಕರ್, ದೀಪಕ ಶಹಾಪುರಕರ್, ಯಲ್ಲಯ್ಯ ಗುತ್ತೇದಾರ ಇನ್ನಿತರರಿದ್ದರು.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…