ಸುರಪುರ: ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರ ತನಿಖೆ ನಡೆಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಸಾರಥ್ಯದಲ್ಲಿ ಸಂಘಟನೆಯಿಂದ ಒತ್ತಾಯಿಸಲಾಗಿದೆ.
ನಗರದ ತಹಸೀಲ್ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿದ ಮುಖಂಡರು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಶಿವಮೋನಯ್ಯ ಎಲ್.ಡಿ.ನಾಯಕ ಮಾತನಾಡಿ,ತಾಲೂಕಿನ ಬಾದ್ಯಾಪುರ, ದೇವಿಕೇರಾ, ತಿಂಥಣಿ,ಖಾನಾಪುರ ಎಸ್.ಹೆಚ್,ಮಾಲಗತ್ತಿ ಹಾಗು ಪೇಠ ಅಮ್ಮಾಪುರ ಗ್ರಾಮ ಪಂಚಾಯತಿಗಳಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೃಷಿ ಹೊಂಡ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆಸಲಾಗಿದೆ.
ಆದ್ದರಿಂದ ಈ ಎಲ್ಲಾ ಪಂಚಾಯತಿಗಳಲ್ಲಿ ಸೂಕ್ತ ತನಿಖೆ ನಡೆಸಿ ಇದಕ್ಕೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಅಲ್ಲದೆ ದೇವರಗೋನಾಲ ಗ್ರಾಮದಲ್ಲಿ ಸುಮಾರು ಎರಡು ಕೋಟಿ ರೂಪಾಯಿಗಳಲ್ಲಿ ಮನೆ ಮನೆಗೆ ನಳಗಳ ಜೋಡಣೆ ಕಾಮಗಾರಿ ನಡೆಸಲಾಗುತ್ತಿದೆ.ಆದರೆ ದೇವರಗೋನಾಲ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಗಿಂತಲೂ ಸಾರ್ವಜನಿಕ ಶೌಚಾಲಯದ ಸಮಸ್ಯೆ ತುಂಬಾ ಇದೆ.ಆದ್ದರಿಂದ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ನಂತರ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿಯವರಿಗೆ ಮನವಿ ಸಲ್ಲಸಿದರು.
ಈ ಸಂದರ್ಭದಲ್ಲಿ ಸುರಪುರ ತಾಲೂಕು ಕಾರ್ಯದರ್ಶಿ ತಿಮ್ಮನಗೌಡ ಪೊಲೀಸ್ ಪಾಟೀಲ್,ಹುಣಸಗಿ ತಾಲೂಕು ಅಧ್ಯಕ್ಷ ಬಸನಗೌಡ ಮಾಲಿ ಪಾಟೀಲ್,ದೇವರಗೋನಾಲ ಗ್ರಾಮ ಶಾಖೆ ಅಧ್ಯಕ್ಷ ಮಲ್ಲಿಕಾರ್ಜುನ,ನಿಂಗರಾಜ ಚೌಡೇಶ್ವರಿಹಾಳ,ಮಾನಯ್ಯ ದೇವರಗೋನಾಲ,ದೇವಿಂದ್ರಪ್ಪ ನಾಯಕ ಕರಡಿಗುಡ್ಡ,ಪ್ರಭು ನಾಯಕ ಸಿದ್ದಾಪುರ ಬಿ,ಮೌನೇಶ,ಕಿಶೋರ,ಶರೀಫ್,ತಿಮ್ಮನಗೌಡ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…