ಆಳಂದ: ತಾಂಡಾ ಅಭಿವೃದ್ಧಿ ನಿಗಮದಿಂದ (ಕೆಆರ್‍ಐಡಿಎಲ್), ಕ್ಷೇತ್ರಕ್ಕೆ ಮಂಜೂರಾದ 3.50ಕೋಟಿ ರೂಪಾಯಿ ಕಾಮಗಾರಿ ಮಾಡದೆ ಹಣ ಲೂಟಿಮಾಡಿದ್ದಾರೆ. ಸಂಬಂಧಿತ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜರುಗಿಸಬೇಕು ಎಂದು ಶಾಸಕ ಸುಭಾಷ ಗುತ್ತೇದಾರ ಅವರು ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಧಿಕಾರಿಗಳು ಕಾಮಗಾರಿ ಮಾಡದೆ ಬೋಗಸ್ ಬಿಲ್ ಸೃಷ್ಟಿಸಿ ಸಮುದಾಯಕ್ಕೆ ಮೀಸಲಿಟ್ಟ ಅನುದಾನವನ್ನು ಲೂಟಿ ಮಾಡಿ ಸರ್ಕಾರಕ್ಕೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನರಿಗೆ ಮೋಸಮಾಡಿದ್ದಾರೆ. ಈ ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ, ಕ್ರಿಮಿನಲ್ ಪ್ರಕರಣ ದಾಖಲಿಸಿ ಸರ್ಕಾರದ ಹಣವನ್ನು ವಸೂಲಿಮಾಡಿಕೊಂಡು ಅವರ ಮೇಲೆ ಕಾಅನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಕ್ಷೇತ್ರಲ್ಲಿ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದಿಂದ ್ಲ ಬಂದ ಅನುದಾನದಲ್ಲಿ ಯಾವುದೇ ಮೂಲಸೌಕರ್ಯಗಳನ್ನು ಮಾಡದೆ ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದರು.
ಲಾಡಚಿಂಚೋಳಿ ತಾಂಡಾ ಗ್ರಾಮದ ಸಂಪರ್ಕ ರಸ್ತೆಗೆ 48.78 ಲಕ್ಷ, ಹೀಗೆ ಧುತ್ತರಗಾಂವ ತಾಂಡಾ, ನಿಂಬರಗಾ ತಾಂಡಾ, ಧರಿ ತಾಂಡಾ, ದಣ್ಣೂರ ತಾಂಡಾ, ಕೊರಳ್ಳಿ ಹೀಗೆ ಒಟ್ಟು ಕಾಮಗಾರಿ 3.50 ಕೋಟಿ ಮೊತ್ತವದಲ್ಲಿ ಪರಿಶಿಷ್ಟ ಜಾರಿ ಮತ್ತು ಪಂಗಡದ ಜನರಿಗೆ ಮೂಲಸೌರ್ಕಗಳನ್ನು ಒದಗಿಸಿ ಅವರಿಗೆ ಮುಖ್ಯವಾಹಿನಿಗೆ ತರಲು ಸರ್ಕಾರಗಳು ಹರಸಹಾಸ ಪಟ್ಟು ಅನುದಾನ ಒದಗಿಸಿದರೂ ಸಹ ಇಂಥ ಭ್ರಷ್ಟ ಅಧಿಕಾರಿಗಳಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ.
ಅಧಿಕಾರಿ ಎಸ್.ಎಂ. ನಾಯಕ, ಮತ್ತು ಎಸ್.ಬಿ.ನಾಗೂರೆ ಅಧಿಕಾರಿಗಳು ಒಂದೇ ಅವಧಿಯಲ್ಲಿ ಕಳೆದ ಜೂನ್ ನಿವೃತ್ತಿಯಾಗಿದ್ದಾರೆ. ನಿವೃತ್ತಿ ಅಂಚಿನಲ್ಲಿ ಅವ್ಯವಹಾರ ಮಾಡಿ ನುಣುಚಿಕೊಳ್ಳಲು ಸಂಚುರೂಪಿಸಿ ಕರ್ತವ್ಯ ಮರೆತ್ತಿದ್ದಾರೆ.
ಅಲ್ಲದೆ ಇನ್ನೂ ಕೆಲವು ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ ಅವರ ಮೇಲೆ ಕ್ರಮ ಜರುಗಿಸಿ ಅನುದಾನವನ್ನು ವಸೂಲಿ ಆಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…