ಶಹಾಬಾದ: ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಅವಿರತವಾಗಿ ಶ್ರಮಿಸಬೇಕೆಂದು ರಾಜ್ಯ ಮಹಿಳಾ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಶಶಿಕಲಾ.ವಿ.ತೆಂಗಳಿ ಹೇಳಿದರು.
ಅವರು ಬುಧವಾರ ಭಂಕೂರ ಗ್ರಾಮದ ದೇವಿ ಕಲ್ಯಾಣ ಮಂಟಪದಲ್ಲಿ ಚಿತ್ತಾಪೂರ ಬಿಜೆಪಿ ಮಂಡಲದಿಂದ ಆಯೋಜಿಸಲಾದ ಬಿಜೆಪಿ ಮಂಡಲ 2ನೇ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಬಿಜೆಪಿಯಲ್ಲಿ ಕೆಲಸ ಮಾಡುವ ಸಾಮನ್ಯ ಕಾರ್ಯಕರ್ತನಿಗೂ ಉನ್ನತವಾದ ಸ್ಥಾನಮಾನಗಳನ್ನು ನೀಡಿದೆ.ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸುವ ಏಕೈಕ ಪಕ್ಷವೆಂದರೆ ಬಿಜೆಪಿ ಎಂದರು. ಕೇಂದ್ರದ ಮೋದಿ ಸರ್ಕಾರದ ಜನಪರವಾದ ಯೋಜನೆಗಳಾದ ಉಚಿತ ಗ್ಯಾಸ ಸಂಪರ್ಕ ಯೋಜನೆ, ಜನಧನ್ ಯೋಜನೆ, ಬೆಳೆ ವಿಮಾ ಯೋಜನೆ, ಕಿಸಾನ ಸಮ್ಮಾನ ಯೋಜನೆ, ಸುಕನ್ಯಾ ಸಮೃದ್ಧಿ ಯೋಜನೆ, ಅಟಲ್ ಪಿಂಚಣಿ ಯೋಜನೆ, ಕೋವಿಡ್ ಸಮಯದಲ್ಲಿ ಎಲ್ಲರಿಗೂ ಧೈರ್ಯ ತುಂಬುವುದರ ಜತೆಗೆ ನಿಯಂತ್ರಣ ಮಾಡಿರುವುದು ಸೇರಿದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರ ಬಿಜೆಪಿ ಸರ್ಕಾರದ ಸಾಧನೆಗಳನ್ನು ಜನರ ಮನಕ್ಕೆ ಮುಟ್ಟಿಸುವ ಕಾರ್ಯವಾಗಬೇಕಿದೆ. ಅಲ್ಲದೇ ಪಕ್ಷದ ಧ್ಯೇಯ ಉದ್ದೇಶಗಳಿಗೆ ಬದ್ಧರಾಗಿ ಪಕ್ಷದ ಸಂಘಟನೆ ಕೈಗೊಳ್ಳಬೇಕು ಎಂದರು.
ಅರುಣ ಬಿನ್ನಾಡೆ ಮಾತನಾಡಿ, ಪ್ರತಿಯೊಂದು ಗ್ರಾಮದಲ್ಲಿ ಮತ್ತು ನಗರದಲ್ಲಿ ಒಗ್ಗಟ್ಟಾಗಿ ಬಿಜೆಪಿ ಪಕ್ಷವನ್ನು ಬೆಳಸಬೇಕು. ಪಕ್ಷಕ್ಕಾಗಿ ದುಡಿಯಬೇಕು. ನಿಮ್ಮ ವಾರ್ಡ ಮಟ್ಟದಲ್ಲಿ ಬಿಜೆಪಿ ಸಾಧನೆ ಬಗ್ಗೆ ಜನರಿಗೆ ಮನವರಿಕೆ ಮಾಡಬೇಕು.ಮುಂಬರುವ ಎಮ್‍ಎಲ್‍ಸಿ, ತಾಪಂ, ಜಿಪಂ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಬೇಕು.ಅದಕ್ಕಾಗಿ ನಾವೆಲ್ಲರೂ ಪಕ್ಷವನ್ನು ಬೇರು ಮಟ್ಟದಿಂದ ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಸಂಘಟನೆಯಲ್ಲಿ ತೊಡಗಬೇಕೆಂದು ತಿಳಿಸಿದರು.
ಚಿತ್ತಾಪೂರ ಮಂಡಲದ ಅಧ್ಯಕ್ಷ ನೀಲಕಂಠ ಪಾಟೀಲ, ಜಿಲ್ಲೆಯ ಹಿಂದುಳಿದ ವರ್ಗದ ಅಧ್ಯಕ್ಷ ಮಲ್ಲಿಕಾರ್ಜುನ ಎಮ್ಮಿಗನೂರ, ಜಿಲ್ಲೆಯ ಓಬಿಸಿ ಮೋರ್ಚಾ ಉಪಾಧ್ಯಕ್ಷ ಬಸವರಾಜ ಬೆಣ್ಣೂರ್,ಮುಖಂಡರಾದ ಬಸವರಾಜ ಶಿವಗೋಳ, ಬಸವರಾಜ ಇಂಗಿನ, ಶರಣಪ್ಪ ನಾಟೀಕಾರ, ಶರಣಗೌಡ ಪಾಟೀಲ, ನಿವೆದಿತ ದಯೆಂಡೆ, ಬೀಮರೆಡ್ಡಿ ಕುರಾಳ,ಚಿತ್ತಾಪೂರ ಮಂಡಲ ಪ್ರಧಾನ ಕಾರ್ಯದರ್ಶಿ ನಾಗರಾಜ ಹೂಗಾರ, ಭಂಕೂರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಲ್ಲಾಲಿಂಗ ನಾಗೂರ ಸೇರಿದಂತೆ ಅನೇಕ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…