ಬಿಸಿ ಬಿಸಿ ಸುದ್ದಿ

ನಿರಗುಡಿ ಗೆಲುವಿಗೆ ಮತ ನೀಡಲು ಮನವಿ

ಕಲಬುರಗಿ:ಇದೇ ತಿಂಗಳ 21 ರಂದು ನಡೆಯಲಿರುವ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಸಾಹಿತಿ,ಲೇಖಕ ಬಿ.ಹೆಚ್.ನಿರಗುಡಿ ಅವರನ್ನು ಮತ ನೀಡಿ ಗೆಲ್ಲಿಸಬೇಕು ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಹಾಗೂ ಗೌರವಾಧ್ಯಕ್ಷ ಡಾ.ಎ.ಎಸ್.ಭದ್ರಶೆಟ್ಟಿ ಅವರು ಮನವಿ ಮಾಡಿದ್ದಾರೆ.

ನಿರಗುಡಿ ಅವರು ಒಳ್ಳೆಯ ಸಾಹಿತಿ ಹಾಗೂ ಲೇಖಕರಾಗಿ ಸುಮಾರು 25 ಪುಸ್ತಕಗಳನ್ನು ರಚಿಸಿದ್ದಾರೆ.ಅನೇಕ ಕವನಗಳನ್ನು ಬರೆದಿದ್ದಾರೆ.ಇದಲ್ಲದೆ ನೂರಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಯುವ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.

ಹತ್ತಾರು ಸಾಹಿತಿಗಳಿಗೆ ವೇದಿಕೆ ನೀಡಿದ್ದಾರೆ. ಸರಳ ಹಾಗೂ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿರುವ ನಿರಗುಡಿ ಅವರು ಅಧ್ಯಕ್ಷರಾದರೆ ಕನ್ನಡ ಭವನದಲ್ಲಿ ವರ್ಷವಿಡೀ ಸಾಂಸ್ಕೃತಿಕ ಕಾರ್ಯಕ್ರಮ ಜರುಗುತ್ತವೆ.ಮತದಾರರು ಈ ಬಾರಿ ಬದಲಾವಣೆ ಬಯಸಿದ್ದಾರೆ.

ನಿರಗುಡಿ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರು, ಹಿರಿಯ ಸಾಹಿತಿಗಳು ಲೇಖಕರು,ಸಂಘ ಸಂಸ್ಥೆಗಳು, ಶಿಕ್ಷಕರು,ಉಪನ್ಯಾಸಕು, ಹೋರಾಟಗಾರರು, ಬುದ್ಧಿ ಜೀವಿಗಳು ಸೇರಿದಂತೆ ಅನೇಕರು ಈಗಾಗಲೇ ಅವರ ಗೆಲುವಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.ಜಾತ್ಯಾತೀತ ಮನೋಭಾವ ಹೊಂದಿರುವ ನಿರಗುಡಿ ಅವರಿಗೆ ಮತ ನೀಡಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

emedialine

Recent Posts

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

6 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

6 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

6 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

17 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

17 hours ago

ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆಗೊಳ್ಳುವ ಚಲನ ಚಿತ್ರ ಸ್ಕ್ರೀನ್

ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…

17 hours ago