ಕಲಬುರಗಿ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಕಲಬುರಗಿ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಪವಾಡ ಬಯಲು ಕಾರ್ಯಕ್ರಮ ನವೆಂಬರ್ 25ರಂದು 10.30ಕ್ಕೆ ನಗರದ ಕರ್ನಾಟಕ ಪೀಪಲ್ಸ್ ಎಜುಕೇಶನ್ ಸೊಸೈಟಿಯ ಸಿದ್ಧಾರ್ಥ ಕಾನೂನು ಮಹಾವಿದ್ಯಾಲಯದಲ್ಲಿ ನಡೆಯಲಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರ ಶಾಬಾದಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಸ್ತುರಿ-ಧುತ್ತರಗಿ ಕೋರಣೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಮಾಜಿ ಉಪಸಭಾಪತಿ ಬಿ.ಆರ್. ಪಾಟೀಲ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಪರಿಷತ್ ರಾಜ್ಯಾಧ್ಯಕ್ಷ ಡಾ. ಹುಲಿಕಲ್ ನಟರಾಜ ಪವಾಡ ಬಯಲು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಕರ್ನಾಟಕ ಪೀಪಲ್ಸ್ ಎಜುಕೇಶನ್ ಸೊಸೈಟಿ ಸಂಸ್ಥಾಪಕ ಕಾರ್ಯದರ್ಶಿ ಡಾ. ಮಾರುತಿರಾವ ಡಿ. ಮಾಲೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದರು.
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯ ಉಪಾಧ್ಯಕ್ಷ ವಿಶ್ವಾರಾಧ್ಯ ಸತ್ಯಂಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ ದಾನಿ ಬಾಬುರಾವ, ರಾಜ್ಯ ನಿರ್ದೇಶಕರಾದ ಶರಣಬಸವ ಕಲ್ಲಾ, ರೇಣುಕಾ ಸಿಂಗೆ ಅತಿಥಿ ಆಗಮಿಸಲಿದ್ದಾರೆ. ರವೀಂದ್ರ ಶಾಬಾದಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವಿವರಿಸಿದರು.
ಪರಿಷತ್ ಉಪಾಧ್ಯಕ್ಷ ನೀಲಕಂಠ ಅವಂಟಿ, ಪ್ರಧಾನ ಕಾರ್ಯದರ್ಶಿ ಡಾ. ಶಿವರಂಜನ್ ಸತ್ಯಂಪೇಟೆ, ಖಜಾಂಚಿ ಹಣಮಂತರಾಯ ಐನೂಲಿ, ಸಹಕಾರ್ಯದರ್ಶಿ ಪರಮೇಶ್ವರ ಶೆಟಕಾರ, ಅಯ್ಯಣ್ಣ ನಂದಿ ಇದ್ದರು.