ಭಾಲ್ಕಿ: ಜಗದ್ಗುರು ಡಾ.ಸಂಗನಬಸವ ಸ್ವಾಮೀಜಿ ಅವರು ತಮ್ಮ ಜೀವಿತಾವಧಿಯಲ್ಲಿ ಹಲವು ಮಹತ್ಕಾರ್ಯಗಳ ಮೂಲಕ ಸಮಾಜ ಮತ್ತು ನಾಡಿಗೆ ವಿಶಿಷ್ಟ ಕೊಡುಗೆ ನೀಡಿದ್ದಾರೆ ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.
ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಮಂಗಳವಾರ ನಡೆದ ಗದಗ, ಹೊಸಪೇಟೆ ಕೊಟ್ಟೂರು ಸ್ವಾಮಿ ಸಂಸ್ಥಾನ ಮಠದ ಜಗದ್ಗುರು ಡಾ.ಸಂಗನಬಸವ ಸ್ವಾಮೀಜಿ ಅವರ ನುಡಿನಮನ ಕಾರ್ಯಕ್ರಮದಲ್ಲಿ ಶ್ರೀಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಶಿವಯೋಗ ಮಂದಿರದ ಅಧ್ಯಕ್ಷರಾಗಿ ಉತ್ತರ ಕರ್ನಾಟಕ ಭಾಗದ ಲಕ್ಷಾಂತರ ಬಡ ಮಕ್ಕಳಿಗೆ ಅಕ್ಷರ, ದಾಸೋಹ, ವಸತಿ ನೀಡುವ ಮೂಲಕ ತ್ರೀವಿಧಿ ದಾಸೋಹಿಗಳಾಗಿ ಸಮಾಜಕ್ಕೆ ಅದ್ಭುತ ಕೊಡುಗೆ ನೀಡಿದ್ದರು.
ಜತೆಗೆ ಯುವ ಯತಿಗಳಿಗೆ ಮಾರ್ಗದರ್ಶಕರಾಗಿದ್ದ ಡಾ.ಸಂಗನಬಸವ ಸ್ವಾಮೀಜಿ ಅವರ ನಿಧನದಿಂದ ಸಮಾಜದ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ. ಶ್ರೀಗಳ ಅಗಲಿಕೆಯಿಂದ ಅವರ ಅಪಾರ ಭಕ್ತ ಸಾಗರ ಶೋಕದಲ್ಲಿ ಮೊಳಗಿದೆ. ಶ್ರೀಗಳ ಅಗಲಿಕೆ ದುಖವನ್ನು ತಡೆದುಕೊಳ್ಳುವ ಶಕ್ತಿ ವಿಶ್ವಗುರು ಬಸವಣ್ಣನವರು ಎಲ್ಲರಿಗೂ ಕಲ್ಪಿಸಲಿ ಎಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ್ ಚನಶೆಟ್ಟಿ, ಶಶಿಧರ ಕೋಸಂಬೆ, ಸಂಗಮೇಶ ಮದಕಟ್ಟಿ, ರಾಜಕುಮಾರ ಬಿರಾದಾರ್, ಅಶೋಕ ಬಾವುಗೆ, ಪ್ರಭು ಡಿಗ್ಗೆ, ಸಂಗಮೇಶ ಗುಮ್ಮೆ, ಸೂರ್ಯಕಾಂತ ಸುಂಟೆ, ನಾಗಭೂಷಣ ಮಾಮಡಿ, ಸಂತೋಷ ಬಿಜಿ ಪಾಟೀಲ್, ಕಾಶಿನಾಥ ಲದ್ದೆ, ಸಿದ್ದು ತುಗಶೆಟ್ಟೆ, ಜಾಲೇಂದ್ರ ಭೌರಾ ಸೇರಿದಂತೆ ಹಲವರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…