ಬೆಂಗಳೂರು: ನಮ್ಮ ಗ್ರಾಹಕರಿಗೆ ಅತಿ ಉತ್ತಮ ಹಾಗೂ ಹೆಚ್ಚು ಸೇವೆಗಳನ್ನು ನೀಡುವ ಗುರಿಯನ್ನು ಸ್ವರ್ಣ ಭಾರತಿ ಸಹಕಾರ ಬ್ಯಾಂಕು ಹೊಂದಿದೆ *ಎಂದು ಬ್ಯಾಂಕಿನ ಅಧ್ಯಕ್ಷರಾದ ಡಾ. ಪಿ ಎಲ್ ವೆಂಕಟರಾಮ ರೆಡ್ಡಿ ತಿಳಿಸಿದರು.
ಸ್ವರ್ಣಭಾರತಿ ಸಹಕಾರಿ ಬ್ಯಾಂಕಿನ ಮೊದಲ ಏಟಿಎಂ ಉದ್ಘಾಟನೆ ನೆರವೇರಿಸಿ ಮಾತನಾಡಿದ ಸಂಸ್ಥಾಪನ ಅಧ್ಯಕ್ಷರು ಹಾಗೂ ಹಾಲಿ ನಿರ್ದೇಶಕ ಟಿ ಎನ್ ಚೌಡಪ್ಪ, ಇಂದು ನಮ್ಮ ಸಹಕಾರಿ ಬ್ಯಾಂಕಿನ ಮೊದಲ ಏಟಿಎಂ ಗೆ ಚಾಲನೆ ನೀಡಲಾಗಿದೆ. ಇತರೆ ಸಹಕಾರ ಬ್ಯಾಂಕುಗಳಿಗಿಂತಲೂ ಅತಿ ಹೆಚ್ಚು ಹಾಗೂ ಅತ್ಯುತ್ತಮ ಸೇವೆಗಳನ್ನು ನಮ್ಮ ಗ್ರಾಹಕರುಗಳಿಗೆ ನೀಡುವ ನಿಟ್ಟಿನಲ್ಲಿ ನಾವು ಕಾರ್ಯತತ್ಪರರಾಗಿದ್ದೇವೆ. ಇದರ ಮೊದಲ ಹೆಜ್ಜೆಯಾಗಿ ಏಟಿಎಂ ಸೌಲಭ್ಯವನ್ನು ಪ್ರಾರಂಭಿಸಲಾಗಿದೆ ಎಂದರು.
ಸ್ವರ್ಣಭಾರತಿ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಾ. ಪಿ ಎಲ್ ವೆಂಕಟರಾಮ ರೆಡ್ಡಿ ಅವರು ಮಾತನಾಡಿ ಠೇವಣಿಗಳಿಗೆ ಹೆಚ್ಚು ಬಡ್ಡಿಯನ್ನು ನೀಡುವ ಮೂಲಕ ಗ್ರಾಹಕ ಸ್ನೇಹಿ ವಾತಾವರಣವನ್ನು ನಾವುಗಳು ನೀಡುತ್ತಿದ್ದೇವೆ. ತಂತ್ರಜ್ಞಾನ ಅಳವಡಿಸಿಕೊಳ್ಳುವುದರಲ್ಲಿ ನಾವುಗಳ ಮುಂಚೂಣಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಗ್ರಾಹಕ ಸ್ನೇಹೀ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಸ್ವರ್ಣಭಾರತಿ ಸಹಕಾರ ಬ್ಯಾಂಕಿನ ನಿರ್ದೇಶಕರುಗಳಾದ ಕೆ. ನರಸಿಂಹ ಮೂರ್ತಿ, ಟಿ ಸತೀಶ್ ಬಾಬು, ಆರ್ ಹರೀಶ್, ಶ್ರೀಮತಿ ಡಾ|| ಲತಾ ನಾರಾಯಣ್, ಕೆ ನಾರಾಯಣಸ್ವಾಮಿ, ಬಿ ನಾಗರಾಜ, ಜಿ.ಎಂ ರವೀಂದ್ರ, ಡಿ.ಬಿ ಶರತ್ ಕುಮಾರ್, ಸಿ ವೆಂಕಟೇಶ್, ಎನ್. ನಾಗರಾಜ್, ಜೆ.ಕೆ ರಾಮಕೃಷ್ಣ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ ಮತ್ತು ಹಲವು ಗ್ರಾಹಕರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…