ಬಿಸಿ ಬಿಸಿ ಸುದ್ದಿ

ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿರುವ ಪಕ್ಷದಿಂದ ಅಭಿವೃದ್ದಿ ಬಯಸುವುದು ಸಾಧ್ಯವಿಲ್ಲ: ಯು.ಬಸವರಾಜ

ಜಾಲಹಳ್ಳಿ: ಕಳೆದ 7 ವರ್ಷಗಳಿಂದ ದೇಶದ ಜನತೆಗೆ ಸುಳ್ಳು ಹೇಳುವ ಮೂಲಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ಅಭಿವೃದ್ಧಿ ಬಯಸುವುದು ಸಾಧ್ಯವಿಲ್ಲ ಎಂದು ಭಾರತ ಕಮ್ಯೂನಿಸ್ಟ್‌( ಮಾರ್ಕ್ಸ್ ವಾದಿ) ಪಕ್ಷದ ರಾಜ್ಯ ಕಾರ್ಯದರ್ಶಿ ಯು.ಬಸವರಾಜ ಆರೋಪಿಸಿದ್ದಾರೆ.

ಮಂಗಳವಾರ ಪಟ್ಟಣದಲ್ಲಿ ಆಯೋಜಿಸಿದ್ದ ರಾಯಚೂರು ಜಿಲ್ಲಾ ಮಟ್ಟದ 13ನೇ ಸಮ್ಮೇಳನದ ಬಹಿರಂಗ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಜನತೆ ಪ್ರತೀ ವರ್ಷ 35 ಲಕ್ಷ ಕೋಟಿ ರೂಪಾಯಿ ಯಂತೆ ಕಳೆದ 7 ವರ್ಷಗಳಿಂದ ಸುಮಾರು 250 ಲಕ್ಷ ಕೋಟಿ ರೂಪಾಯಿ ಹಣ ತೆರಿಗೆ ಪಾವತಿಸಿದ್ದಾರೆ. ಜನತೆಗೆ ಅನುಕೂಲವಾಗುವಂತಹ ಯಾವ ಕೆಲಸ ಮಾಡಿದ್ದಾರೆ ಎಂದು ಅವರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದರು.

2014 ರ ಚುನಾವಣಾ ಪ್ರನಾಳಿಕೆಯಲ್ಲಿ ನೀಡಿದ್ದ ವರ್ಷಕ್ಕೆ ಎರಡು ಕೋಟಿ ಉದ್ಯೋಗ, ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂಪಾಯಿ, ಬಡವರಿಗೆ ವಸತಿ, ಮಹಿಳೆರಿಗೆ ರಕ್ಷಣೆ ಸೇರಿದಂತೆ ಯಾವುದೇ ಬೇಡಿಕೆಗಳನ್ನು ಈಡೇರಿಸಿಲ್ಲವೆಂದು ಆರೋಪಿಸಿದರು

ಪ್ರಪಂಚದಲ್ಲಿಯೇ ಅಪೌಷ್ಟಿಕತೆಯಿಂದ ಬಳಲುತ್ತಿರುವ 107 ದೇಶಗಳಲ್ಲಿ ಭಾರತಕ್ಕೆ 101 ಸ್ಥಾನ ಇದೆ. ದೇಶದಲ್ಲಿ ಪ್ರತೀ ನಿಮಿಷಕ್ಕೆ 12 ಜನ ಹಸಿವುನಿಂದ ಸಾವನ್ನಾಪ್ಪುತ್ತಿದ್ದಾರೆ.

ದೇಶವನ್ನು ಆಳುತ್ತಿರುವು ಬಿಜೆಪಿ ಪಕ್ಷಕ್ಕೆ ನಾಚಿಕೆ ಆಗಬೇಕು. ದೇಶದ ಜನರಲ್ಲಿ ಖರೀದಿ ಮಾಡುವ ಶಕ್ತಿ ಕಳೆದಕೊಂಡಿದ್ದಾರೆ. ಈಗಾಗಿ ಸುಮಾರು 18 ಲಕ್ಷ ಕೈಗಾರಿಕೆಗಳು ಮುಚ್ಚಿವೆ. ಅದರಲ್ಲಿ ದುಡಿಯುತ್ತಿರುವ ಜನ ಬೀದಿಗೆ ಬಂದಿದ್ದಾರೆ ಎಂದು ತಿಳಿಸಿದರು.

ಇಂತಹ ಅನೇಕ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಮುಂದಿನ ಮೂರು ವರ್ಷಗಳ ವರೆಗೆ ಪಕ್ಷದ ಹೇಗೆ ಬಡವರ ಮಧ್ಯೆ ಕೆಲಸ ಮಾಡುವ ಬಗ್ಗ ಚರ್ಚಿಸಲಾಗುತ್ತದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಜನರ ಸಮಸ್ಯೆ ಗಳನ್ನು ಪರಿಹರಿಸುವ ಯಾವುದೇ ಕಾಳಜಿ ಇಲ್ಲವಾಗಿದೆ ಎಂದು ಆರೋಪಿಸಿದರು.

ಪಟ್ಟಣದ ನಿಜ ಶರಣ ಅಂಬಿಗೇರ ಚೌಡಯ್ಯ ಭವನದಿಂದ ರಂಗನಾಥ ಸ್ವಾಮಿ ಮೈದಾನದ ವರೆಗೆ ಮೆರವಣಿಗೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ರಾಜ್ಯ ಸಮಿತಿ ಸದಸ್ಯ ನಿತ್ಯಾನಂದ ಸ್ವಾಮಿ, ಜಿಲ್ಲಾ ಸಮಿತಿ ಕಾರ್ಯದರ್ಶಿ ಕೆ.ಜಿ. ವಿರೇಶ, ಎಚ್.ಪದ್ಮಾ, ನರಸಣ್ಣ ನಾಯಕ, ಶೇಕ್ಷಾ ಖಾದ್ರಿ, ಶರಣಬಸವ, ಕರಿಯಪ್ಪ ಅಚ್ಚೋಳ್ಳಿ, ಗಿರಿಯಪ್ಪ ಪೂಜಾರಿ, ಶಬ್ಬೀರ್ ಅಹ್ಮದ್, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

12 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

21 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

21 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

22 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago