ಬ್ರಿಟಿಷ ಸಾಮ್ರಾಜ್ಯದ ಎದೆ ನಡುಗಿಸಿದ ನಾಡಿನ ಗಂಡುಗ ರಾಯಣ್ಣ

ಹಾವೇರಿ: ೧೮೫೭ ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೂ ಮುನ್ನವೇ ಬ್ರಿಟಿ? ಸಾಮ್ರಾಜ್ಯದ ಎದೆ ನಡುಗಿಸಿದ, ತನ್ನ ಅಪಾರ ಶೌರ್ಯ ಪರಾಕ್ರಮಗಳಿಂದ ಬ್ರಿಟಿ?ರಿಗೆ ಸವಾಲಾಗಿ ನಿಂತು ಕ್ರಾಂತಿಯ ರಣಕಹಳೆ ಮೊಳಗಿಸಿದ ಕನ್ನಡ ನಾಡಿನ ಗಂಡುಗಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಎಂದು ಸಂಗೋಳಿ ರಾಯಣ್ಣ ಯುವ ಘರ್ಜನೆ ಜಿಲ್ಲಾಧ್ಯಕ್ಷ ಬಸವರಾಜ ಮದ್ರಕಿ ಹೇಲಿದರು.

ಅವರು ನಗರದಲ್ಲಿ ಕುರುಬ ಸಮಾಜದ ವತಿಯಿಂದ ಆಯೋಜಿಸಲಾದ ಕ್ರಾಂತಿವೀರ ಸಂಗೋಳಿ ರಾಯಣ್ಣ ಯುವಕರ ಸಂಘ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಬಹುತೇಕರಿಗೆ ತಿಳಿಯದ ಅಚ್ಚರಿಯೆಂದರೆ, ನಮ್ಮ ರಾಯಣ್ಣ ಹುಟ್ಟಿದ್ದು ಆಗಸ್ಟ್ ೧೫ ರಂದು ಮತ್ತು ದೇಶಕ್ಕಾಗಿ ಬಲಿದಾನಗೈದದ್ದು ಜನವರಿ ೨೬ (೧೫ ಆಗಸ್ಟ್ ೧೭೯೮ – ೨೬ ಜನವರಿ ೧೮೩೧). ಒಂದು ಸ್ವಾತಂತ್ರ್ಯ ದಿನ , ಮತ್ತೊಂದು ಗಣರಾಜ್ಯ ದಿನ. ಎರಡೂ ದಿನಗಳೂ ಭಾರತೀಯರ ಪಾಲಿಗೆ ಅವಿಸ್ಮರಣೀಯ ದಿನಗಳು. ಬ್ರಿಟಿ?ರ ದಬ್ಬಾಳಿಕೆಯನ್ನು ಮೆಟ್ಟಿನಿಂತು ಕೆಚ್ಚೆದೆಯಿಂದ ಅವರ ವಿರುದ್ಧ ಸಮರ ಸಾರಿದ ಕನ್ನಡದ ವೀರವನಿತೆ ಕಿತ್ತೂರ ರಾಣಿ ಚೆನ್ನಮ್ಮಳ ಬಲಗೈ ಬಂಟ ರಾಯಣ್ಣ.ದೇಶಕ್ಕಾಗಿ ಅವನ ತ್ಯಾಗ ಅವಿಸ್ಮರಣಿಯವಾದುದು.ಅವರ ಹೆಸರಿನಲ್ಲಿ ಸಂಘ ಸ್ಥಾಪನೆಯಾಗಿದ್ದು, ಇದನ್ನು ಸಮಾಜದ ಒಳತಿಗೆ ಕಾರ್ಯನಿರ್ವಹಿಸಲಿ ಎಂದು ಹೇಳಿದರು.

ಕುರುಬ ಸಮಾಜದ ಅಧ್ಯಕ್ಷ ಮಲ್ಕಣ್ಣ ಮುದ್ದಾ ಮಾತನಾಡಿ, ತನ್ನವರದೇ ಮೋಸಕ್ಕೆ ಒಳಗಾಗಿ ಚೆನ್ನಮ್ಮ ಬ್ರಿಟಿ?ರ ಸೆರೆಗೆ ಸಿಕ್ಕಾಗ ಕಿತ್ತೂರಿನ ಪರವಾಗಿ ಕ್ರಾಂತಿ ಕಹಳೆ ಮೊಳಗಿಸಿದ ಗಂಡುಗಲಿ ರಾಯಣ್ಣ. ಕಿತ್ತೂರು ಚೆನ್ನಮ್ಮನ ಸೇನೆಯ ಅಧಿಪತಿಯಾಗಿದ್ದ ರಾಯಣ್ಣ ಒಂದು ದೊಡ್ಡ ದೇಶಭಕ್ತರ ಪಡೆಯನ್ನೇ ಕಟ್ಟಿದ್ದ. ಅದೇ ರೀತಿ ರಾಯಣ್ಣ ಸಂಘದವರು ಯುವ ಪಡೆ ಕಟ್ಟಿ ಉತ್ತಮ ಮಾರ್ಗದಲ್ಲಿ ಸಾಗಲಿ.ದುಶ್ಚಟಗಳಿಂದ ದೂರವಿದ್ದು, ಸಮಾಜಮುಖಿ ಕಾರ್ಯದಲ್ಲಿ ಪಾಗೊಳ್ಳುವಂತರಾಗಲಿ ಎಂದು ಹೇಳಿದರು.

ಹೊನಗುಂಟಾದ ಪೂಜ್ಯ ಪದ್ಮಣಪ್ಪ ಮುತ್ಯಾ ಉದ್ಘಾಟಿಸಿದರು. ಕುರುಬ ಗೊಂಡ ಸಮಾಜದ ಅಧ್ಯಕ್ಷ ಸಾಯಬಣ್ಣ ಕೊಲ್ಲೂರ್,ನಿಂಗಣ್ಣ ಪೂಜಾರಿ,ಮರಲಿಂಗ ಕಮರಡಗಿ, ಸುರೇಶ ಗಿರಣಿ, ಸುನೀಲ ಪೂಜಾರಿ,ದತ್ತಾ ಪಂಡ್,ಅನೀಲ ದೊಡ್ಮನಿ, ಮಂಜುನಾಥ ದೊಡ್ಮನಿ, ಶ್ರೀಕಾಂತ ಕಟ್ಟಿ, ಸಂಗಣ್ಣ ಕಂಠಿಕಾರ, ವಿಜಯಕುಮಾರ ಕಂಠಿಕಾರ,ಯಲ್ಲಾಲಿಂಗ ಕರಗಾರ ಸೇರಿದಂತೆ ಅನೇಕರು ಇದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420