ಬಿಸಿ ಬಿಸಿ ಸುದ್ದಿ

ವೈಜ್ಞಾನಿಕತೆ ಮೈಗೂಡಿಸಿಕೊಂಡು ಮೂಢನಂಬಿಕೆಯ‌‌ ಸಂಕೋಲೆಯಿಂದ ಹೊರಬನ್ನಿ: ಡಾ.‌ ಹುಲಿಕಲ್ ನಟರಾಜ

ಕಲಬುರಗಿ: ನಗರದ ಪ್ರತಿಷ್ಠಿತ ಹೈ.ಕ.ಶಿಕ್ಷಣ ಸಂಸ್ಥೆಯ ಶ್ರೀಮತಿ ವಿ.ಜಿ.ಮಹಿಳಾ ಪದವಿ ಮಹಾವಿದ್ಯಾಲಯದ ವಿಜ್ಞಾನ ಪೋರಂ,ರಾಷ್ಟ್ರೀಯ ಸೇವಾ ಯೋಜನೆಯ ಅ ಮತ್ತು ಬ ಘಟಕಗಳು ಹಾಗೂ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು (ರಿ) ಕಲಬುರಗಿ ಇವರ ಸಹಯೋಗದೊಂದಿಗೆ ಪವಾಡ ರಹಸ್ಯ ಬಯಲು ಕಾರ್ಯಕ್ರಮ ಗುರುವಾರ ಆಯೋಜಿಸಲಾಗಿತ್ತು.
ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯಾಧ್ಯಕ್ಷ ಡಾ.ಹುಲಿಕಲ್ ನಟರಾಜ್ ಅವರು ವೈಜ್ಞಾನಿಕತೆ, ವೈಚಾರಿಕತೆಯನ್ನು ಅಳವಡಿಸಿಕೊಳ್ಳಳಬೇಕು ಎಂದು ವಿದ್ಯಾರ್ಥಿನೀಯರಿಗೆ ಕಿವಿ ಮಾತು ಹೇಳಿದರು.
ಮುಂದುವರೆದು ಮಾತನಾಡಿದ ಅವರು ಕಾಲೇಜಿನ ವಿಜ್ಞಾನ ಪೊರಂ ಹಾಗೂ ಎನ್.ಎಸ್.ಎಸ್.ಘಟಕಗಳು ಇಂತಹ ವೈಚಾರಿಕ ಕಾರ್ಯವನ್ನು ಆಯೋಜಿಸಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿ ಅಂಧಕಾರ,ಅಜ್ಞಾನ ಮೂಢನಂಬಿಕೆ ಹೊಡೆದೊಡಿಸಲು ಎಲ್ಲರು ಸೇರಿ  ಪ್ರಯತ್ನಿಸೋಣ ಎಂದು ಹಲವು ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಿಸುತ್ತಾ ತಮ್ಮ ಉಪನ್ಯಾಸ ವನ್ನು ನೀಡಿದರು.
ಕ.ರಾ.ವೈ.ಸ.ಪರಿಷತ್ತು ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀ ರವಿಂದ್ರ ಶಾಬಾದಿ, ಪ್ರಧಾನ ಕಾರ್ಯದರ್ಶಿ ಡಾ.ಶಿವರಂಜನ ಸತ್ಯಂಪೇಟೆ, ಡಾ.ವೀಣಾ ಹೆಚ್, ಪ್ರೊ.ರವೀಂದ್ರ ವೈ. ಎನ್.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಡಾ.ರಾಜೇಂದ್ರ ಬಿ.ಕೊಂಡಾ ವಹಿಸಿಕೊಂಡಿದ್ದರು. ಎನ್.ಎಸ್.ಎಸ್. ಘಟಕದ ಕಾರ್ಯಕ್ರಮಾಧಿಕಾರಿ ಡಾ.ಮಹೇಶ ಗಂವ್ಹಾರ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಡಾ.ಶಾಂತಾ ಮಠ ನಿರೂಪಿಸಿದರು. ಪ್ರೊ.ಶಿವಲೀಲಾ ಧೋತ್ರೆ ವಂದಿಸಿದರು.
ಮಹಾವಿದ್ಯಾಲಯದ ಬೋಧಕ,ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು, ಪರಿಷತ್ತಿನ ಸದಸ್ಯರು ಭಾಗವಹಿದ್ದರು ಎಂದು ಡಾ.ಮೋಹನರಾಜ ಪತ್ತಾರ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

21 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago