ಬಿಸಿ ಬಿಸಿ ಸುದ್ದಿ

ಜಾರಕಿಹೊಳಿ ಬ್ರದರ್ಸ್ V/s ಲಕ್ಷೀ ಹೆಬ್ಬಾಳ್ಕರ್ ಚುನಾವಣೆ ಆಗಿದೆ ಬೆಳಗಾವಿ ವಿಧಾನ ಪರಿಷತ್ ಚುನಾವಣೆಯೂ..!

  • # ಕೆ.ಶಿವು.ಲಕ್ಕಣ್ಣವರ

ಬೆಳಗಾವಿ, ನವೆಂಬರ್ 24: ಕರ್ನಾಟಕದ ರಾಜಕಾರಣ ಒಂದು ತೂಕವಾದರೆ, ಗಡಿ ಜಿಲ್ಲೆ ಬೆಳಗಾವಿ ರಾಜಕಾರಣದ್ದೇ ಮತ್ತೊಂದು ತೂಕವಾಗಿದೆ. ಇಲ್ಲಿ ಕುಟುಂಬ ರಾಜಕಾರಣ ಬಹಳ ಸದ್ದು ಮಾಡುತ್ತಿದೆ. ಇಲ್ಲಿ ಏನೇ ರಾಜಕೀಯ ಸುದ್ದಿಗಳಾದರೂ ಅದು ಪ್ರತಿಷ್ಠೆಗಾಗಿ ನಡೆದಿರುತ್ತದೆ. ಸದ್ಯ ವಿಧಾನ ಪರಿಷತ್ ಚುನಾವಣೆಯೂ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದರಿಂದಾಗಿ ಬೆಳಗಾವಿ ಕ್ಷೇತ್ರದ ಚುನಾವಣಾ ಕಣ ಕುತೂಹಲಕ್ಕೆ ಕಾರಣವಾಗಿದೆ.

ಲಖನ್ ಜಾರಕಿಹೊಳಿ ಬೆಳಗಾವಿ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರವನ್ನು ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಅಮರನಾಥ ಜಾರಕಿಹೊಳಿ ಮತ್ತು ಅಂಬಿರಾವ್ ಪಾಟೀಲ್ ಮುಂತಾದವರೂ ಉಪಸ್ಥಿತರಿದ್ದರು.

ಬೆಳಗಾವಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ನ 2 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣಾ ಕಾಳಗ ಭಾರೀ ಸದ್ದು ಮಾಡುತ್ತಿದೆ. ಕಾಂಗ್ರೆಸ್ ಪಕ್ಷದಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮತ್ತು ಸಹೋದರ ಚನ್ನರಾಜ್ ಹಟ್ಟಿಹೊಳಿ, ಬಿಜೆಪಿ ಪಕ್ಷದಿಂದ ಮಹಾಂತೇಶ ಕವಟಗಿಮಠ ನಾಮಪತ್ರ ಸಲ್ಲಿಸಿದ್ದಾರೆ. ಮತ್ತೊಂದೆಡೆ ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ನಾಮಪತ್ರ ಸಲ್ಲಿಸುವ ಮೂಲಕ ಬೆಳಗಾವಿಯಲ್ಲಿ ಮತ್ತೊಂದು ರಾಜಕೀಯ ಪ್ರತಿಷ್ಠೆಯ ಜಿದ್ದಾಜಿದ್ದಿ ಕಾಣಬಹುದು.

# ಲಖನ್ ಬೆನ್ನಿಗೆ ಜಾರಕಿಹೊಳಿ ಸಹೋದರರು: ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಹೊರತುಪಡಿಸಿ ಉಳಿದೆಲ್ಲ ಜಾರಕಿಹೊಳಿ ಸಹೋದರರು ಲಖನ್ ಬೆನ್ನಿಗೆ ನಿಂತಿದ್ದಾರೆ. ಸತೀಶ್ ಜಾರಕಿಹೊಳಿ ಮಾತ್ರ ಕುಟುಂಬಕ್ಕಿಂತ ಪಕ್ಷವೇ ಮುಖ್ಯ ಎಂದಿದ್ದಾರೆ.

ಇದೇ ವೇಳೆ ತಮ್ಮ ಲಖನ್‌ಗೆ ಟಾಂಗ್ ನೀಡಿರುವ ಸತೀಶ್ ಜಾರಕಿಹೊಳಿ, ಸಿಂಗಲ್ ಅಭ್ಯರ್ಥಿ, ಸಿಂಗಲ್ ಮತ ಎಂಬುದೂ ಕೂಡ ಕಾಂಗ್ರೆಸ್ ತತ್ವ. ಇದೇ ಲಖನ್ ಮತ್ತು ರಮೇಶ್ ಜಾರಕಿಹೊಳಿ ಲೋಕಸಭಾ ಉಪ ಚುವಾವಣೆಯಲ್ಲಿ ನನ್ನ ವಿರುದ್ಧ ಹಣ ಹಂಚಿ ನನ್ನನ್ನು ಸೋಲಿಸಿದ್ದಾರೆ. ಆ ನೋವು ನಮಗೆ ಹಾಗೂ ನಮ್ಮ ಕಾರ್ಯಕರ್ಯರಿಗೂ ಇದೆ. ಲಖನ್ ಜಾರಕಿಹೊಳಿ ಚುನಾವಣೆ ನಿಲ್ಲೋದು ಡೌಟು. ಪಕ್ಷದ ವರಿಷ್ಠರು ಒಳ್ಳೆಯ ಅವಕಾಶ ಕೊಡ್ತಿವಿ ಅಂದ್ರೆ ವಾಪಸ್ ಪಡೆಯುತ್ತಾರೆ. ಲಖನ್ ಜಾರಕಿಹೊಳಿ ಜೊತೆಗೆ ಮಾತನಾಡುವ ಪ್ರಶ್ನೆ ಇಲ್ಲ ಎಂದಿದ್ದಾರೆ ಸತೀಶ್ ಜಾರಕಿಹೊಳಿಯವರು.

# ಕಾಂಗ್ರೆಸ್​ ಸೋಲಿಸುವುದೇ ಗುರಿ ಎಂದ ರಮೇಶ್ ಜಾರಕಿಹೊಳಿಯೂ-: ಸತೀಶಣ್ಣ ಸೇರಿದಂತೆ ಎಲ್ಲರ ಆಶೀರ್ವಾದ ನಮ್ಮ ಮೇಲೆ ಇದೆ. ನಾವೇ ಗೆಲ್ಲೋದು ಎನ್ನುವ ಮೂಲಕ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಉಳಿದ ಜಾರಕಿಹೊಳಿ ಸಹೋದರರಿಗೆ ಟಾಂಗ್ ನೀಡಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿಯನ್ನು ಶತಾಯ ಗತಾಯ ಸೋಲಿಸಲು ರಮೇಶ್​ ಜಾರಹೊಳಿ ಪಣ ತೊಟ್ಟಿದ್ದಾರೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಕಿರಿಯ ಸಹೋದರ ಲಖನ್ ಜಾರಕಿಹೊಳಿಯನ್ನು ಎರಡನೇ ಪ್ರಾಶಸ್ತ್ಯ ಮತಕ್ಕಾಗಿ ಕಣಕ್ಕಿಳಿಸಿದ್ದಾರೆ. ನಾವು ಲಖನ್‌ಗೆ ಬಿಜೆಪಿ ಟಿಕೆಟ್ ಕೇಳಿಲ್ಲ. ನಮ್ಮ ಮೊದಲ ಆದ್ಯತೆ ನಮ್ಮ ಪಕ್ಷದ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಗೆಲ್ಲಬೇಕು. ಎರಡನೇಯದು ಕಾಂಗ್ರೆಸ್ ಅಭ್ಯರ್ಥಿ ಸೋಲಬೇಕು. ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಏನೇನು ಮಾಡಬೇಕು ಎಂಬುದನ್ನು ಚರ್ಚಿಸಲು ದೆಹಲಿಗೆ ಹೋಗುತ್ತಿದ್ದೇನೆ ಎಂದಿದ್ದರು ರಮೇಶ್ ಜಾರಕಿಹೊಳಿಯು.

# ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಯಾರ ಕೈ ಹಿಡಿಯಲಿದ್ದಾರೆಯೂ..?: ಇದೇ ವೇಳೆ ವಿಧಾನ ಪರಿಷತ್ ಚುನಾವಣೆ ಹೆಬ್ಬಾಳ್ಕರ್ V/S ಜಾರಕಿಹೊಳಿ ಚುನಾವಣೆಯೇ ಎಂಬ ಪ್ರಶ್ನೆಗೆ ಕೆರಳಿದ ರಮೇಶ್ ಜಾರಕಿಹೊಳಿ ಥೂ.. ಥೂ.. ಎನ್ನುವ ಮೂಲಕ ಕಿಡಿಕಾರಿದರು. ಇನ್ನು ಲಖನ್ ನಾಮಪತ್ರ ಹಿಂಪಡೆಯುತ್ತಾರೆ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಲಖನ್ ಜಾರಕಿಹೊಳಿ, ಸತೀಶ್ ಏನೇ ಹೇಳಿದರೂ ನಮ್ಮ‌ ಅಣ್ಣ, ನಾನು ನಾಮಪತ್ರ ಹಿಂಪಡೆಯುವ ಚಾನ್ಸ್ ಇಲ್ಲ ಎಂದರು.

ಲಖನ್ ಎಂಟ್ರಿಯಿಂದ ಎಲ್ಲ ಕ್ಷೇತ್ರಗಳಿಗಿಂತ ಬೆಳಗಾವಿ ಕ್ಷೇತ್ರದ ರಾಜಕೀಯ ಎಲ್ಲರ ಗಮನ ಸೆಳೆದಿದೆ. ಯಾರು ಗೆಲ್ಲುತ್ತಾರೆ ಎಂಬ ರಾಜಕೀಯ ಲೆಕ್ಕಾಚಾರಗಳೂ ಜೋರಾಗಿವೆ. ಆದರೆ ಮತದಾರರಾದ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಯಾರ ಕೈ ಹಿಡಿಯಲಿದ್ದಾರೆ ಎಂಬುದಕ್ಕೆ ಫಲಿತಾಂಶದ ದಿನದವರೆಗೂ ಕಾಯಲೇಬೇಕಿದೆ. ಲಖನ್ ಜಾರಕಿಹೊಳಿ ಕಾಂಗ್ರೆಸ್‌ಗೆ ಪೆಟ್ಟು ಕೊಡ್ತಾರಾ, ಬಿಜೆಪಿಯ ಮತ ಪೆಟ್ಟಿಗೆಗೆ ಕೈ ಹಾಕುತ್ತಾರಾ ಎನ್ನುವುದರ ಮೇಲೆ ಫಲಿತಾಂಶ ಅವಲಂಬಿತವಾಗಿದೆ.

# ಡಿಸೆಂಬರ್ ‌10 ರಂದು ಮತದಾನವೂ: ಕರ್ನಾಟಕ ವಿಧಾನ ಪರಿಷತ್​ಗೆ ಚುನಾವಣೆ ಘೋಷಣೆಯಾಗಿದ್ದು, 2022 ರ ಜನವರಿ 5 ರಂದು 25 ಪರಿಷತ್​ ಸದಸ್ಯರ ಅಧಿಕಾರ ಅವಧಿ ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ತೆರವಾಗಲಿರುವ 25 ವಿಧಾನ ಪರಿಷತ್ ಸ್ಥಾನಗಳಿಗೆ ಡಿಸೆಂಬರ್ ‌10 ರಂದು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಡಿ.10 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 14 ಕ್ಕೆ ಮತ ಎಣಿಕೆ ನಡೆದು, ಫಲಿತಾಂಶ ಹೊರ ಬೀಳಲಿದೆ. ನವೆಂಬರ್ 16 ರಂದು ಅಧಿಸೂಚನೆ ಹೊರಡಿಸಲಾಗಿದ್ದು, ನವೆಂಬರ್ 23 ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿತ್ತು. # ವಿಧಾನ ಪರಿಷತ್ ಚುನಾವಣೆಯೂ..!
ಟಿಕೆಟ್ ಘೋಷಣೆಗೂ ಮುನ್ನ ಮತಬೇಟೆ ಆರಂಭಿಸಿದ ಜಾರಕಿಹೊಳಿ‌ ಬ್ರದರ್ಸೂ–ವಿಧಾನ ಪರಿಷತ್ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಚನ್ನರಾಜ ಹಟ್ಟಿಹೊಳಿ ಪರ ಸತೀಶ್ ಜಾರಕಿಹೊಳಿ ಮತಬೇಟೆ ನಡೆಸಿದ್ರೆ, ಮಹಾಂತೇಶ ಕವಟಗಿಮಠ ಮತ್ತು ಲಖನ್ ಜಾರಕಿಹೊಳಿ ಪರ ರಮೇಶ್ ಜಾರಕಿಹೊಳಿ ಮತಯಾಚನೆ ಮಾಡುತ್ತಿದ್ದಾರೆ.

ಟಿಕೆಟ್ ಘೋಷಣೆ ಮುನ್ನವೇ ಬೆಳಗಾವಿಯಲ್ಲಿ ವಿಧಾನ ಪರಿಷತ್ ಚುನಾವಣೆ ಅಖಾಡ‌ ರಂಗೇರಿದೆ. ಜಾರಕಿಹೊಳಿ‌ ಬ್ರದರ್ಸ್ ಚುನಾವಣಾ ಅಖಾಡಕ್ಕೆ ಧುಮುಕಿದ್ದು, ಅಭ್ಯರ್ಥಿ ಪರ ಮತಬೇಟೆ ಆರಂಭಿಸಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಮಣಿಸಲು ರಮೇಶ್ ಜಾರಕಿಹೊಳಿ‌ ಫೀಲ್ಡ್‌ಗಿಳಿದಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ರಮೇಶ್ ಜಾರಕಿಹೊಳಿ ಗ್ರಾಮ ಪಂಚಾಯತ್ ಸದಸ್ಯರ ಸಭೆ ನಡೆಸಿ, ಮಹಾಂತೇಶ ಕವಟಗಿಮಠ ಮತ್ತು ಲಖನ್ ಜಾರಕಿಹೊಳಿ ಪರ ಮತ ಯಾಚನೆ ಮಾಡಿದರು. ಈ ವೇಳೆ ರಮೇಶ್ ಜಾರಕಿಹೊಳಿಗೆ ಎಂಇಎಸ್ ಮಾಜಿ ಶಾಸಕ ಅರವಿಂದ ಪಾಟೀಲ್ ಸಾಥ್ ನೀಡಿದರು.

ಮತ್ತೊಂದೆಡೆ, ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ ಪರ ಸತೀಶ್ ಜಾರಕಿಹೊಳಿ ಮತಯಾಚನೆ ಮಾಡುತ್ತಿದ್ದಾರೆ. ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ಗ್ರಾಮ್ ಪಂಚಾಯತ್ ಸದಸ್ಯರ ಸಭೆಯಲ್ಲಿ ಚನ್ನರಾಜ ಹಟ್ಟಿಹೊಳಿ ಭಾಗಿಯಾಗಿದ್ದರು.

ಬೆಳಗಾವಿ ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಎರಡು ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಎರಡು ಸ್ಥಾನಗಳ ಪೈಕಿ ಒಂದು ಸ್ಥಾನಕ್ಕೆ ಚನ್ನರಾಜ ಹಟ್ಟಿಹೊಳಿಯನ್ನು ಅಭ್ಯರ್ಥಿಯನ್ನಾಗಿಸಲು ಕಾಂಗ್ರೆಸ್ ತೀರ್ಮಾನಿಸಿದೆಯೂ..!ಏನೇ ಆಗಲಿ ಈ ವಿಧಾನ ಪರಿಷತ್ ಚುನಾವಣೆಯು ಲಕ್ಷೀ ಹೆಬ್ಬಾಳಕರ್ ಮತ್ತು ಜಾರಕಿಹೊಳಿ ಬ್ರದರ್ಸ್ ನ ನಡುವಿನ ಪಂದ್ಯವಾಗಿದೆಯೂ..!

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

12 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

22 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

22 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

22 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago