ಬಿಸಿ ಬಿಸಿ ಸುದ್ದಿ

ಕನ್ನಡ ರಾಜ್ಯೋತ್ಸವದ ಜೊತೆಗೆ ಪುನೀತ್ ನುಡಿ ನಮನ ಕಾರ್ಯಕ್ರಮ

ತೊರ‍್ನಹಳ್ಳಿ: ಮಾಲೂರು ತಾಲ್ಲೂಕಿನ ಕಸಬಾ ಹೋಬಳಿ ತೊರ‍್ನಹಳ್ಳಿ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಆಟೋ ಚಾಲಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಪುನೀತ್ ರಾಜಕುಮಾರ್ ರವರಿಗೆ ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಕನ್ನಡಿಗನ, ಕರುನಾಡಿದ ಹೆಮ್ಮೆಯ ದಿನ ಕನ್ನಡ ರಾಜ್ಯೋತ್ಸವ. ಪ್ರತಿ ವರ್ಷ ನವೆಂಬರ್ 1ರಂದು ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ.ಕನ್ನಡದ ಇತಿಹಾಸ, ಮಹತ್ವ, ಹೋರಾಟಗಳ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಹಾಗೂ ಕರ್ನಾಟಕದ ಏಕೀಕರಣಕ್ಕೆ ಹೋರಾಡಿದ ಮಹನೀಯರನ್ನು ಸ್ಮರಿಸುವ ಉದ್ದೇಶದಿಂದ ಕನ್ನಡ ರಾಜ್ಯೋತ್ಸವ ಅತ್ಯಂತ ಮಹತ್ವವನ್ನು ಪಡೆದುಕೊಂಡಿದೆ. ಎಂದು ರಾಮಕೃಷ್ಣರವರು ತಿಳಿಸಿದರು.

ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದ ಜೊತೆಗೆ ಕರುನಾಡಿನ ಹೆಮ್ಮೆಯ ನಾಯಕ ನಟ ಪುನೀತ್ ರಾಜಕುಮಾರ್ ರವರಿಗೆ ನಮನಗಳನ್ನು ಈ  ಸಲ್ಲಿಸಲಾಯಿತು. ಕನ್ನಡನಾಡು ಒಬ್ಬ ಉತ್ತಮ ನಟನನ್ನು ಕಳೆದುಕೊಂಡಿದೆ, ಕನ್ನಡನಾಡು ನುಡಿಗೆ ಡಾ. ರಾಜಕುಮಾರ್ ಮನೆತನದ ಕೊಡುಗೆ ಅಪಾರವಾಗಿದೆ ಎಂದು ಭುವನೇಶ್ವರಿ ಕಲಾ ಸಂಘದ ಅಧ್ಯಕ್ಷ ಮಾಳಿಗಾಚಾರ್ ತಿಳಿಸಿದರು.

ಈ ಸಂದರ್ಭದಲ್ಲಿ ಊರಿನ ಜನರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ಕನ್ನಡ ಧ್ವಜಗಳನ್ನು ಹಾಗೂ ಪುನೀತ್ ರಾಜಕುಮಾರ್ ಭಾವಚಿತ್ರವನ್ನು ಆಟೋಗಳಲ್ಲಿ ಕಟ್ಟಿ ಊರೆಲ್ಲ ಮೆರವಣಿಗೆ ಮಾಡಲಾಯಿತು.

ಈ ಸಂದರ್ಭದಲ್ಲಿ ತೊರ‍್ನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಮುನಿಯಪ್ಪ, ಸದಸ್ಯರಾದ ಸಿ.ವಿ.ವೆಂಕಟರಮಣಪ್ಪ, ಕರವೇ ತಾಲ್ಲೂಕು ಸಂಘಟನಾ ಕಾರ್ಯದರ್ಶಿ ರಾಮಕೃಷ್ಣಪ್ಪ, ಆಟೋ ಘಟಕದ ಕಾರ್ಯದರ್ಶಿ ಮುನಿನಾರಾಯಣಪ್ಪ, ಗೌರವಾಧ್ಯಕ್ಷ ವೆಂಕಟರಮಣಪ್ಪ, ಖಜಾಂಚಿ ಪೆರುಮಾಳಪ್ಪ, ಕಾರ್ಯದರ್ಶಿ ನಜೀರ್, ಉಪಾಧ್ಯಕ್ಷ ಅನ್ವರ್, ಆಟೋ ಸಲ್ಲಪ್ಪ, ಕರವೇ ಯುವ ಘಟಕದ ಅಧ್ಯಕ್ಷ ಕೀರ್ತಿ, ಉಪಾಧ್ಯಕ್ಷ ಗೌತಮ್, ಭುವನೇಶ್ವರಿ ಕಲಾ ಸಂಘದ ಅಧ್ಯಕ್ಷ ಮಾಳಿಗಾಚಾರ್, ದಿವಾಕರ್, ವೆಂಕಟೇಶ್, ಹಾಗೂ ಗ್ರಾಮಸ್ಥರು, ಕರವೇ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

6 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

16 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

16 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

16 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago