ಕಲಬುರಗಿ: ಪ್ರಶಾಂತ್ ಕಲ್ಲೂರ್ ನೇತೃತ್ವದ ವೀರಶೈವ ಲಿಂಗಾಯತ ಯುವ ವೇದಿಕೆಯು ಕಳೆದ ಒಂದು ದಶಕದಿಂದ ಸಮುದಾಯ ಸಂಘಟನೆಯಲ್ಲಿ ನಿರಂತರವಾಗಿ ಕಾರ್ಯ ನಿರ್ಮಿಸಿಕೊಂಡು ಬರುತ್ತಿದೆ. ಅದರ ಭಾಗವಾಗಿ ಬರುವ ೨೯ ೧೧ ೨೦೨೧ ರಂದು ಕಾರ್ತಿಕ್ ಮಾಸದ ಕೊನೆಯ ಸೋಮವಾರ ದಂದು ಶ್ರೀ ಕ್ಷೇತ್ರ ಸಿದ್ದಗಂಗಾ ಮಠದಲ್ಲಿ ಭುವನದ ಭಾಗ್ಯ ಕರ್ನಾಟಕ ರತ್ನ ಪದ್ಮಭೂಷಣ ತ್ರಿವಿಧ ದಾಸೋಹಿ ಡಾಕ್ಟರ್ ಶ್ರೀಶ್ರೀಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಗದ್ದುಗೆಗೆ ಲಕ್ಷ ಪುಷ್ಪ ಬಿಲ್ವಾರ್ಚನೆ ಕಾರ್ಯಕ್ರಮ ಹಾಗೂ ಶ್ರೀಗಳ ಗದ್ದುಗೆಗೆ ಹೆಲಿಕಾಪ್ಟರ್ ಮುಖಾಂತರ ಪುಷ್ಪಾರ್ಚನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸೋಮವಾರ ಬೆಳಗ್ಗೆ ೫:೩೦ ರಿಂದ ಪುಷ್ಪ ಬಿಲ್ವಾರ್ಚನೆ ೧೨:೩೦ಕ್ಕೆ ಮಹಾಮಂಗಳಾರತಿ ೧ ಘಂಟೆಗೆ ಪೂಜ್ಯರ ಗದ್ದುಗೆಗೆ ಹೆಲಿಕಾಪ್ಟರ್ ಮುಖಾಂತರ ಪುಷ್ಪಾರ್ಚನೆ ಕಾರ್ಯಕ್ರಮ ನೆರವೇರಿಸಲಾಗುವುದು ಪೂಜ್ಯರ ಗದ್ದುಗೆಯ ಮುಂಭಾಗದಲ್ಲಿ ೪೫ ಅಡಿಯ ಪೂಜ್ಯರ ಕಟೌಟ್ ನಿಲ್ಲಿಸಲಾಗುವುದು ಈ ಬಾರಿಯ ವಿಶೇಷತೆ.
ಪ್ರಸಕ್ತ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಶ್ರೀ ಕ್ಷೇತ್ರ ತುಮಕೂರು ಸಿದ್ದಗಂಗಾ ಮಠ ಅವರು ವಹಿಸಲಿದ್ದು, ಸುತ್ತೂರು ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಕಾರ್ಯಕ್ರಮಕ್ಕೆ ಆಗಮಿಸಲಿದ್ದು, ರಾಜ್ಯದ ನಾನಾ ಭಾಗಗಳಿಂದ ೫೦ಕ್ಕೂ ಹೆಚ್ಚು ಹರಗುರು ಚರಮೂರ್ತಿಗಳು ಭಾಗವಹಿಸಲಿದ್ದಾರೆ ರಾಜಕಾರಣಿಗಳು ಸಿನಿಮಾ ಕಲಾವಿದರು ಸಮಾಜಸೇವಕರು ಶ್ರೀ ಸಿದ್ದಗಂಗಾ ಮಠದ ಸದ್ಭಕ್ತರು ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಲಿರುವ ಐತಿಹಾಸಿಕ ಕಾರ್ಯಕ್ರಮ ಇದ್ದಾಗಿದೆ ಇ ಐತಿಹಾಸಿಕ ಕಾರ್ಯಕ್ರಮಕ್ಕೆ ಕಲಬುರ್ಗಿ ಜಿಲ್ಲೆಯ ಶ್ರೀ ಸಿದ್ದಗಂಗಾ ಮಠದ ವಿದ್ಯಾರ್ಥಿಗಳು, ಭಕ್ತ ವೃಂದ ಭಾಗಿಯಾಗಬೇಕೆಂದು ವೀರಶೈವ ಲಿಂಗಾಯತ ಯುವ ವೇದಿಕೆ ಜಿಲ್ಲಾ ಸಮಿತಿಯ ಜಿಲ್ಲಾಧ್ಯಕ್ಷ ದಯಾನಂದ ಎಂ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…