ಸೇಡಂ: 2023ಕ್ಕೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಹೆಚ್.ಡಿ. ಕುಮಾರ ಸ್ವಾಮಿ ಅಧಿಕಾರ ಸ್ವಿಕಾರ ಮಾಡುವ ಮೂಲಕ ಜೆಡಿಎಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸೇಡಂ ಮತಕ್ಷೇತ್ರದ ಜೆಡಿಎಸ್ ಮುಖಂಡ ಬಾಲರಾಜ ಗುತ್ತೆದಾರ ವಿಶ್ವಾಸ ವ್ಯಕ್ತಪಡಿಸಿದ್ದರು.
ಸೇಡಂ ಪಟ್ಟಣದ ಜೆಡಿಎಸ್ ಪಕ್ಷದ ಕಛೇರಿಯಲ್ಲಿ ಕೊರಡಂಪಳ್ಳಿ ಗ್ರಾಮದ ಹಿರಿಯರು ಹಾಗೂ ಯುವಕರು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ತೊರೆದು ಬಾಲರಾಜ ಗುತ್ತೆದಾರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ವೇಳೆ ಬಾಲರಾಜ ಗುತ್ತೆದಾರ ಮಾತನಾಡಿ ಸೇಡಂ ಮತಕ್ಷೇತ್ರದಲ್ಲಿ ಅನೇಕ ಯುವಕರು, ಹಿರಿಯರು ನಾವು ಮಾಡುತ್ತಿರವ ಕಾರ್ಯಗಳನ್ನು ಮೆಚ್ಚಿ ಪಕ್ಷಕೆ ಸೇರ್ಪಡೆಆಗುವ ಮೂಲಕ ನಮ್ಮಗೆ ಪ್ರೋತ್ಸಾಹಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಸೇಡಂ ಮತಕ್ಷೇತ್ರದ ನಿರುದ್ಯೋಗಿ ಯುವಕರಿಗೆ ಸ್ಥಳಿಯ ಸಿಮೆಂಟ್ ಕಾರ್ಖಾನೆಗಳಲ್ಲಿ ಉದ್ಯೊಗ ನೀಡಲು ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಜೊತೆಗೆ ಇಗಾಗಲೆ ಜನರ ಸಮಸ್ಯೆ ಅರಿಯಲು ಕ್ಷೇತ್ರದ 133 ಗ್ರಾಮಗಳಲ್ಲಿ ಪಾದಯಾತ್ರೆ ಕೈಗೊಂಡಿರುವೆ. ಮೊದಲ ಹಂತವಾಗಿ ಪಟ್ಟಣದ 23 ವಾರ್ಡಗಳಲ್ಲಿ ಈಗಾಗಲೇ ಪಾದಯಾತ್ರೆ ಕೈಗೊಂಡಿದೇನೆ. ಇ ಮೂಲಕ ಜನರಿಗೆ ಮೂಲಭೂತ ಸೌಕರ್ಯ ಒದಗಿಸುವ ಕೆಲಸ ಮಾಡುವೆ ಎಂದರು.
ಈ ಸಂದರ್ಭದಲ್ಲಿ ಪಕ್ಷದ ಕಾರ್ಯಧ್ಯಕ್ಷರಾದ ಶಿವರಾಮ ರೆಡ್ಡಿ ಮುಧೋಳ, ಜಗನ್ನಾಥ ರೆಡ್ಡಿ ಗೋಟ್ಟೂರ, ಪವನ ಕೇರಿ, ರೇವಣಸಿದ್ದ ಪೂಜಾರಿ, ಬಸವರಾಜ ಸಜ್ಜನ, ಶಂಕರ, ಸೋಮಶೇಖರ ಪೂಜಾರಿ, ವಿಜಯಕುಮಾರ ಐನಾಪೂರ, ಹಣಮಯ್ಯ ಗುತ್ತೇದಾರ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…