ಕಲಬುರಗಿ: ಕಲಬುರಗಿಯಲ್ಲಿ ಅತ್ಯಂತ ಕಡಿಮೆ ಸಂಖ್ಯೆಯಲ್ಲಿರುವ ವಾಲ್ಮೀಕಿ ನಾಯಕ ಸಮಾಜವನ್ನು ಒಗ್ಗೂಡಿಸಿ ಹೋರಾಟಗಳು, ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸುತ್ತಾ ಬರುತ್ತಿರುವ ಸಮಾಜದ ಮುಖಂಡರ, ನೌಕರರ ಸಂಘದ ಕಾರ್ಯ ಅತ್ಯಂತ ಶ್ಲಾಘನೀಯ ಎಂದು ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಭೀಮರಾಜ ಹವಲ್ದಾರ ಹೇಳಿದರು.
ಕಲಬುರಗಿಯ ವಿಶ್ವೇಶ್ವರಯ್ಯ ಭವನದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರಕಾರಿ ನೌಕರರ ಸಂಘ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕರ ಸಂಘದಿಂದ ಭಾನುವಾರ ಹಮ್ಮಿಕೊಂಡಿದ್ದ 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತಿ, ಪದೋನ್ನತಿ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ನಮ್ಮ ನಾಯಕ ಸಮಾಜವನ್ನು ಜಾಗೃತಗೊಳಿಸಲು ವಿಶೇಷ ಉಪನ್ಯಾಸ, ವಿದ್ಯಾಭ್ಯಾಸ ವಿಚಾರ ಸಂಕಿರಣಗಳನ್ನು ಹಮ್ಮಿಕೊಳ್ಳಬೇಕು. ಇದಕ್ಕೆ ನಾನು ಬೆನ್ನೆಲುಬಾಗಿ ಕಾರ್ಯನಿರ್ವಹಿಸುವೆ ಎಂದು ಭರವಸೆ ನೀಡಿದರು.
ಜಿಲ್ಲೆಯಲ್ಲಿ ವಾಲ್ಮೀಕಿ ಭವನ ಇಲ್ಲದಿರುವುದರಿಂದ ಸಾಕಷ್ಟು ಸಮಸ್ಯೆಯಾಗುತ್ತಿದೆ. ವಾಲ್ಮೀಕಿ ಭವನಕ್ಕೆ ಹಾಗೂ ಸಮಾಜದ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಶ್ರಮಿಸಲಾಗುವುದು ಎಂದರು.
ಕೇಂದ್ರೀಯ ವಿವಿ ಪ್ರಾಧ್ಯಾಪಕ ಡಾ.ವಿಜಯಕುಮಾರ ವಿಶ್ವಮಾನವ ಮಾತನಾಡಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸರಕಾರಗಳು ಹಲವು ಸೌಲಭ್ಯಗಳನ್ನು ಕಲ್ಪಿಸುತ್ತಿದೆ. ಜಾಗೃತರಾಗಿ ಸೌವಲತ್ತುಗಳನ್ನು ಸದುಪಯೋಗಪಡೆಸಿಕೊಂಡು ಉನ್ನತ ಶಿಕ್ಷಣ ಹಾಗೂ ಸ್ಥಾನಮಾನಗಳಿಸಬೇಕು ಎಂದರು. ವಾಲ್ಮೀಕಿ ನಾಯಕ ಸಮಾಜದ ಪ್ರತಿಭಾವಂತರನ್ನು ಸಮಾಜವೇ ಗುರುತಿಸಿ ಪ್ರೋತ್ಸಾಹಿಸುವುದು, ಸಂಘಟಿಸುವುದು ಅಪರಾಧವೇನು ಅಲ್ಲ. ಎಸ್ಟಿ ಸಮಾಜದಿಂದ ಎಲ್ಲ ಸೌಲಭ್ಯ ಪಡೆದು ಬೆಳೆದ ಮೇಲೆ ಸಮಾಜದಿಂದ ಹಿಂಜರಿಯಬಾರದು ಎಂದರು.
ಗುಪ್ತಚರ ಇಲಾಖೆ ಡಿವೈಎಸ್ಪಿ ಚಂದ್ರಶೇಖರ ನಾಯಕ ಮಾತನಾಡಿ, ಸಮಾಜದವರು ತಮ್ಮ ಮಕ್ಕಳನ್ನು ಕನಿಷ್ಠ ಪದವಿಯವರಿಗಾದರೂ ಓದಿಸಬೇಕು. ಇದರಿಂದ ಅವರಿಗೆ ತಮ್ಮ ಹಕ್ಕು, ಸೌಲಭ್ಯ ಹಾಗೂ ತಮ್ಮ ಗುರಿಯ ಬಗ್ಗೆ ಅರಿವಿಗೆ ಬರಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಸಂಘದ ವಿಭಾಗೀಯ ಅಧ್ಯಕ್ಷ ನಂದಕುಮಾರ ಮಾಲಿಪಾಟೀಲ ಅಧ್ಯಕ್ಷತೆ ವಹಿಸಿದ್ದರು. ನೌಕರರ ಸಂಘದ ವಿಭಾಗೀಯ ಅಧ್ಯಕ್ಷ ಮಾನಪ್ಪ ನಾಯಕ ಪ್ರಾಸ್ತಾವಿಕ ಮಾತನಾಡಿದರು. ವಾಲ್ಮೀಕಿ ನಾಯಕ ಸಮಾಜದ ಜಿಲ್ಲಾಧ್ಯಕ್ಷ ಶರಣು ಸುಬೇದಾರ, ಎಚ್.ಬಿ.ಬಂಡಿ, ಗುರುರಾಜ ದೊರೆ, ಮುಖಂಡರಾದ ಚನ್ನಪ್ಪ ಸುರಪುರಕರ್, ಅಮರೇಶ ಗೋವಾ ಹೋಟೆಲ್, ಭೀಮರಾವ್ ದೊರೆ, ದೇವಿಂದ್ರಪ್ಪ ದೊರೆ, ಸಾಯಿಬಗೌಡ ಪಾಟೀಲ್, ಡಾ.ಲಕ್ಷ್ಮಣ ಬೋಸ್ಲೆಘಿ, ಅಶೋಕ ಕಾಳಮಂದರಗಿ ಸೇರಿ ಇತರರಿದ್ದರು. ರಂಗನಾಥ ದೊರೆ ನಿರೂಪಿಸಿದರು. ಪಡಿಯಪ್ಪ ನಾಯಕ ವಂದಿಸಿದರು.
ಸಾಧಕರಿಗೆ ಸನ್ಮಾನ: ಪತ್ರಕರ್ತ ಪ್ರಕಾಶ ದೊರೆ, ಗ್ರಾಪಂ ಉಪಾಧ್ಯಕ್ಷೆ ಸುಮಾಲತಾ ಎಸ್.ಸುಬೇದಾರ, ಭೂಪಾಲ ತೆಗನೂರ ಗ್ರಾಪಂ ಉಪಾಧ್ಯಕ್ಷೆ ಲಕ್ಷ್ಮಿಬಾಯಿ ಹುಸೇನಪ್ಪ ನಾಯ್ಕೋಡಿ ಸೇರಿ ಹಲವು ಸಾಧಕರಿಗೆ ಸನ್ಮಾನ ಹಾಗೂ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…