ಬಿಸಿ ಬಿಸಿ ಸುದ್ದಿ

ಕೋವಿಡ್‌ ಸಂಕಷ್ಟದಲ್ಲೂ ಸ್ವರ್ಣಭಾರತಿ ಸಹಕಾರ ಬ್ಯಾಂಕ್‌ 1 ಕೋಟಿ 23 ಲಕ್ಷ ಲಾಭ: ಗ್ರಾಹಕರಿಗೆ ಶೇಕಡಾ 7.50 ರಷ್ಟು ಡಿವೆಡೆಂಡ್‌ ಘೋಷಣೆ

ಬೆಂಗಳೂರು: ಗ್ರಾಹಕರಿಗೆ ಅತ್ಯುತ್ತಮ ಸೇವೆಯನ್ನು ನೀಡಬೇಕು ಎನ್ನುವ ಉದ್ದೇಶದಿಂದ ಪ್ರಾರಂಭವಾಗಿರುವ ಸ್ವರ್ಣಭಾರತಿ ಸಹಕಾರಿ ಬ್ಯಾಂಕ್‌, ಕೋವಿಡ್‌ ಸಾಂಕ್ರಾಮಿಕದ ಸಂಕಷ್ಟದ ನಡುವೆಯೂ 1 ಕೋಟಿ 23 ಲಕ್ಷ ರೂಪಾಯಿಗಳ ನಿವ್ವಳ ಲಾಭಗಳಿಸಿದೆ. ಅಲ್ಲದೆ, ಈ ಬಾರಿ ನಮ್ಮ ಗ್ರಾಹಕರಿಗೆ ಶೇಕಡಾ 7.50 ರಷ್ಟು ಡಿವೆಡೆಂಟ್‌ ಘೋಷಿಸಿದ್ದೇವೆ ಎಂದು ಸ್ವರ್ಣಭಾರತಿ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಾ. ಪಿ ಎಲ್‌ ವೆಂಕಟರಾಮರೆಡ್ಡಿ ತಿಳಿಸಿದ್ದಾರೆ.

ಸ್ವರ್ಣಭಾರತಿ ಸಹಕಾರಿ ಬ್ಯಾಂಕಿನ 23 ನೇ ವಾರ್ಷಿಕ ಮಹಾಸಭೆ ಯಲ್ಲಿ ಈ ಬಗ್ಗೆ ಬ್ಯಾಂಕಿನ ಅಧ್ಯಕ್ಷರಾದ ಡಾ. ಪಿ.ಎಲ್‌ ವೆಂಕಟರಾಮರೆಡ್ಡಿಯವರು ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಶೇಕಡಾ 17 ರಷ್ಟು ಪ್ರಗತಿಯನ್ನು ಬ್ಯಾಂಕ್‌ ಸಾಧಿಸಿದೆ. ಪ್ರಸ್ತುತ 10 ಸಾವಿರಕ್ಕೂ ಹೆಚ್ಚು ಸದಸ್ಯರನ್ನು ಹೊಂದುವ ಮೂಲಕ ಬೆಂಗಳೂರು ನಗರದಲ್ಲಿ ಗ್ರಾಹಕರ ಸ್ನೇಹಿಯಾದ ಸಹಕಾರಿ ಬ್ಯಾಂಕುಗಳಲ್ಲಿ ಒಂದು ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ರೂ. 176.36 ಕೋಟಿಗೂ ಹೆಚ್ಚು ದುಡಿಯುವ ಬಂಡವಾಳ ಹೊಂದಿದೆ. ನೆಟ್‌ ಎನ್‌ಪಿಎ ಶೇಡಕಾ 4.87 ಕ್ಕೆ ಇಳಿಕೆಯಾಗಿದ್ದು 1.23 ಕೋಟಿಗಳಷ್ಟು ಲಾಭವನ್ನು ಗಳಿಸಿದೆ. ಲೋಕ್ಕಪರಿಶೋಧನಾ ವರ್ಗೀಕರಣದಲ್ಲಿ ಬ್ಯಾಂಕು “ಏ” ಶ್ರೇಣಿಯನ್ನು ಪಡೆದು ಸಾರ್ವಜನಿಕರ ವಿಶ್ವಾಸಗಳಿಸಿದೆ. ಅಲ್ಲದೆ, ಶೇಕಡಾ 7.50 ರಷ್ಟು ಡಿವಿಡೆಂಟ್‌ ನ್ನು ನಮ್ಮ ಬ್ಯಾಂಕಿನ ಗ್ರಾಹಕರುಗಳಿಗೆ ಘೋಷಿಸಲಾಗಿದೆ ಎಂದು ಹರ್ಷವ್ಯಕ್ತಪಡಿಸಿದರು. ಇದೇ ಸಂಧರ್ಭದಲ್ಲಿ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ಬ್ಯಾಂಕಿನ ಗ್ರಾಹಕರ ಮಕ್ಕಳಿಗೆ ಪ್ರೋತ್ಸಾಹ ಧನವನ್ನು ನೀಡಿ ಸನ್ಮಾನಿಸಲಾಯಿತು.

ಸಭೆಯಲ್ಲಿ ಸ್ವರ್ಣಭಾರತಿ ಸಹಕಾರ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಟಿ ಎನ್‌ ಚೌಡಪ್ಪನವರು, ನಿರ್ದೇಶಕರುಗಳಾದ ಕೆ. ನರಸಿಂಹ ಮೂರ್ತಿ, ಟಿ ಸತೀಶ್‌ ಬಾಬು, ಆರ್‌ ಹರೀಶ್‌, ಡಾ. ಲತಾ ನಾರಾಯಣ್‌, ಕೆ ನಾರಾಯಣಸ್ವಾಮಿ, ಬಿ ನಾಗರಾಜ, ಜಿ.ಎಂ ರವೀಂದ್ರ, ಡಿ.ಬಿ ಶರತ್‌ ಕುಮಾರ್‌, ಸಿ ವೆಂಕಟೇಶ್‌, ಎನ್‌. ನಾಗರಾಜ್‌, ಜೆ.ಕೆ ರಾಮಕೃಷ್ಣ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ ಮತ್ತು ಗ್ರಾಹಕರು ಉಪಸ್ಥಿತರಿದ್ದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

6 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

16 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

16 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

19 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

19 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

19 hours ago