ಬೆಂಗಳೂರು: ಗ್ರಾಹಕರಿಗೆ ಅತ್ಯುತ್ತಮ ಸೇವೆಯನ್ನು ನೀಡಬೇಕು ಎನ್ನುವ ಉದ್ದೇಶದಿಂದ ಪ್ರಾರಂಭವಾಗಿರುವ ಸ್ವರ್ಣಭಾರತಿ ಸಹಕಾರಿ ಬ್ಯಾಂಕ್, ಕೋವಿಡ್ ಸಾಂಕ್ರಾಮಿಕದ ಸಂಕಷ್ಟದ ನಡುವೆಯೂ 1 ಕೋಟಿ 23 ಲಕ್ಷ ರೂಪಾಯಿಗಳ ನಿವ್ವಳ ಲಾಭಗಳಿಸಿದೆ. ಅಲ್ಲದೆ, ಈ ಬಾರಿ ನಮ್ಮ ಗ್ರಾಹಕರಿಗೆ ಶೇಕಡಾ 7.50 ರಷ್ಟು ಡಿವೆಡೆಂಟ್ ಘೋಷಿಸಿದ್ದೇವೆ ಎಂದು ಸ್ವರ್ಣಭಾರತಿ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಾ. ಪಿ ಎಲ್ ವೆಂಕಟರಾಮರೆಡ್ಡಿ ತಿಳಿಸಿದ್ದಾರೆ.
ಸ್ವರ್ಣಭಾರತಿ ಸಹಕಾರಿ ಬ್ಯಾಂಕಿನ 23 ನೇ ವಾರ್ಷಿಕ ಮಹಾಸಭೆ ಯಲ್ಲಿ ಈ ಬಗ್ಗೆ ಬ್ಯಾಂಕಿನ ಅಧ್ಯಕ್ಷರಾದ ಡಾ. ಪಿ.ಎಲ್ ವೆಂಕಟರಾಮರೆಡ್ಡಿಯವರು ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಶೇಕಡಾ 17 ರಷ್ಟು ಪ್ರಗತಿಯನ್ನು ಬ್ಯಾಂಕ್ ಸಾಧಿಸಿದೆ. ಪ್ರಸ್ತುತ 10 ಸಾವಿರಕ್ಕೂ ಹೆಚ್ಚು ಸದಸ್ಯರನ್ನು ಹೊಂದುವ ಮೂಲಕ ಬೆಂಗಳೂರು ನಗರದಲ್ಲಿ ಗ್ರಾಹಕರ ಸ್ನೇಹಿಯಾದ ಸಹಕಾರಿ ಬ್ಯಾಂಕುಗಳಲ್ಲಿ ಒಂದು ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ರೂ. 176.36 ಕೋಟಿಗೂ ಹೆಚ್ಚು ದುಡಿಯುವ ಬಂಡವಾಳ ಹೊಂದಿದೆ. ನೆಟ್ ಎನ್‌ಪಿಎ ಶೇಡಕಾ 4.87 ಕ್ಕೆ ಇಳಿಕೆಯಾಗಿದ್ದು 1.23 ಕೋಟಿಗಳಷ್ಟು ಲಾಭವನ್ನು ಗಳಿಸಿದೆ. ಲೋಕ್ಕಪರಿಶೋಧನಾ ವರ್ಗೀಕರಣದಲ್ಲಿ ಬ್ಯಾಂಕು “ಏ” ಶ್ರೇಣಿಯನ್ನು ಪಡೆದು ಸಾರ್ವಜನಿಕರ ವಿಶ್ವಾಸಗಳಿಸಿದೆ. ಅಲ್ಲದೆ, ಶೇಕಡಾ 7.50 ರಷ್ಟು ಡಿವಿಡೆಂಟ್ ನ್ನು ನಮ್ಮ ಬ್ಯಾಂಕಿನ ಗ್ರಾಹಕರುಗಳಿಗೆ ಘೋಷಿಸಲಾಗಿದೆ ಎಂದು ಹರ್ಷವ್ಯಕ್ತಪಡಿಸಿದರು.
ಇದೇ ಸಂಧರ್ಭದಲ್ಲಿ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ಬ್ಯಾಂಕಿನ ಗ್ರಾಹಕರ ಮಕ್ಕಳಿಗೆ ಪ್ರೋತ್ಸಾಹ ಧನವನ್ನು ನೀಡಿ ಸನ್ಮಾನಿಸಲಾಯಿತು.
ಸಭೆಯಲ್ಲಿ ಸ್ವರ್ಣಭಾರತಿ ಸಹಕಾರ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಟಿ ಎನ್ ಚೌಡಪ್ಪನವರು, ನಿರ್ದೇಶಕರುಗಳಾದ ಕೆ. ನರಸಿಂಹ ಮೂರ್ತಿ, ಟಿ ಸತೀಶ್ ಬಾಬು, ಆರ್ ಹರೀಶ್, ಡಾ. ಲತಾ ನಾರಾಯಣ್, ಕೆ ನಾರಾಯಣಸ್ವಾಮಿ, ಬಿ ನಾಗರಾಜ, ಜಿ.ಎಂ ರವೀಂದ್ರ, ಡಿ.ಬಿ ಶರತ್ ಕುಮಾರ್, ಸಿ ವೆಂಕಟೇಶ್, ಎನ್. ನಾಗರಾಜ್, ಜೆ.ಕೆ ರಾಮಕೃಷ್ಣ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ ಮತ್ತು ಗ್ರಾಹಕರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…