ಮಾಲೂರು: ತಾಲೂಕಿನ ಬೆಳ್ಳಾವಿ ಗ್ರಾಮದಲ್ಲಿ ಕಾರ್ತಿಕ ಮಾಸದ ಕೊನೆಯ ಸೋಮವಾರ ಸಂಜೆ 5.30 ರಿಂದ 9 ಗಂಟೆಯವರೆಗೆ ಕಾರ್ತಿಕ ದೀಪೋತ್ಸವ ಸಮಾರಂಭದಲ್ಲಿ ಜೆಎಸ್ಎಸ್ ಪಬ್ಲಿಕ್ ಸ್ಕೂಲ್ ಕೋ ಆರ್ಡಿನೇಟರ್ ಮಹೇಶ್ವರಪ್ಪ ಮತ್ತು ಮಾಲೂರು ತಾಲೂಕಿನ ವಿಧಾನಸಭಾ ಕ್ಷೇತ್ರದ ಮುಂದಿನ ಜೆಡಿಎಸ್ ಅಭ್ಯರ್ಥಿ ರಾಮೇಗೌಡರು ಮತ್ತು ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಸಿಎಸ್ ವೆಂಕಟೇಶರವರು ಹಾಗೂ ಹುಣಸಮಾರನಹಳ್ಳಿ ಸಂಸ್ಥಾನಮಠದ ಪರಮಪೂಜ್ಯ ಗುರುನಂಜೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಉಪಾಧ್ಯಕ್ಷರಾದ ಶ್ರೀಮತಿ ಮಂಜುಳ ರವರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಮಾಡಿಕೊಟ್ಟರು.
ಈ ಸಮಾರಂಭದಲ್ಲಿ ಅಪಾರ ಭಕ್ತ ಸಮೂಹ ಶ್ರೀ ಮಠದಲ್ಲಿ ಸೇರಿ ಕಾರ್ತಿಕದ ಕತ್ತಲೆಯನ್ನು ದೀಪ ಹಚ್ಚುವ ಮುಖಾಂತರ ಬೆಳಕು ಮೂಡಿಸಿದರು. ಶ್ರೀಮಠದ ಕಾರ್ಯಕ್ರಮಕ್ಕೆ ಸ್ಪಂದಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತಾ ಮುಂದಿನ ಅಭಿವೃದ್ಧಿಯ ಕಾರ್ಯದಲ್ಲಿ ತಾವೆಲ್ಲರೂ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದ್ದಕ್ಕೆ ನಿಮಗೆಲ್ಲ ಶುಭ ಹಾರೈಕೆಗಳು ಎಂದು ಮಹಾಂತ ಶಿವಾಚಾರ್ಯ ಸ್ವಾಮಿಗಳು ಸಂಸ್ಥಾನ ಮಠ ಬೆಳ್ಳಾವಿ ಇವರು ತಿಳಿಸಿದರು.
ಈ ಸಂದರ್ಭದಲ್ಲಿ ಅಪಾರ ಭಕ್ತವೃಂದ ಹಾಗೂ ಶ್ರೀ ಮಹಾಂತ ಶಿವಾಚಾರ್ಯ ಸ್ವಾಮೀಜಿಗಳು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…