ಕೊಪ್ಪಳ–ರಾಯಚೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರಯೂ..! ಮತ್ತು ಹೊಸಮುಖಗಳ ಪೈಪೋಟಿಯೂ..!!

  • # ಕೆ.ಶಿವು.ಲಕ್ಕಣ್ಣವರ

ಕೊಪ್ಪಳ–ರಾಯಚೂರು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಕ್ಷೇತ್ರದಿಂದ ಹಿಂದೊಮ್ಮೆ ಬಿಜೆಪಿ ಜಯ ಸಾಧಿಸಿದ್ದು ಹೊರತುಪಡಿಸಿದರೆ, ಕಾಂಗ್ರೆಸ್‌ ಪಕ್ಷವೇ ಇದನ್ನು ತನ್ನ ಭದ್ರಕೋಟೆ ಮಾಡಿಕೊಂಡಿದೆ. ಈ ಸಲವೂ ಎರಡೂ ಪಕ್ಷಗಳ ಮಧ್ಯೆ ನೇರ ಪೈಪೋಟಿ ಏರ್ಪಟ್ಟಿದೆ.

ಮತದಾರರು ಪಕ್ಷ ಅಥವಾ ಅಭ್ಯರ್ಥಿಗೆ ಒಲವು ತೋರಿ ಮತ ಕೊಡುತ್ತಾರೆ ಎಂಬ ವಾತಾವರಣ ಕಾಣುತ್ತಿಲ್ಲ. ಸ್ಥಳೀಯ ಸಂಸ್ಥೆಗಳಿಗೆ ಪಕ್ಷದ ಚಿಹ್ನೆಯಿಂದ ಆಯ್ಕೆಯಾದವರನ್ನು ಮನವೊಲಿಸಿ ಹಿಡಿದಿಟ್ಟುಕೊಳ್ಳುವ ಅನಿವಾರ್ಯತೆ ಎದುರಾಗಿದೆ.

‘ವಿಧಾನ ಪರಿಷತ್‌ ಚುನಾವಣೆಯಲ್ಲಿ ಯಾವುದೇ ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಸದಸ್ಯ ಸುಮ್ಮನೇ ಮತ ಹಾಕುವುದಿಲ್ಲ. ಸದಸ್ಯರು  ತಮ್ಮ ಒಂದು ಮತಕ್ಕೆ ಎಷ್ಟು ಹಣ ಸಿಗುತ್ತದೆ ಎಂಬ ಲೆಕ್ಕಾಚಾರ ಹಾಕುತ್ತಿದ್ದಾರೆ. ಈ ಚುನಾವಣೆಯ ಗೆಲುವು ಹಣದಿಂದ ನಿರ್ಧಾರವಾಗುತ್ತದೆ’ ಎಂಬ ಮಾತುಗಳೂ ಜೋರಾಗಿ ಕೇಳಿಬರುತ್ತಿವೆಯೂ.

‘ಹಣವೊಂದೇ ಮಾನದಂಡ ವಾಗದು. ಸಮಸ್ಯೆಗಳಿಗೆ ಯಾರು, ಹೇಗೆ ಸ್ಪಂದಿಸುವರು ಎಂಬುದನ್ನೂ ಮತದಾರರು ನೋಡುತ್ತಾರೆ. ವಿಧಾನ ಪರಿಷತ್ತಿಗೆ ಆಯ್ಕೆಯಾದವರು, ಮತ್ತೆ ಮತ್ತೇ ಮತದಾರರ ಎದುರು ಬರುವುದಿಲ್ಲ. ಈಗಲೇ ಅಭ್ಯರ್ಥಿಗಳು ತಮ್ಮೆಲ್ಲ ಶಕ್ತಿ, ಸಾಮರ್ಥ್ಯ ಪ್ರದರ್ಶಿಸಬೇಕು’ ಎಂದು ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಹೇಳುತ್ತಾರೆ.

# ಪ್ರತಿಸ್ಪರ್ಧಿಗಳಿಬ್ಬರೂ ಕೋಟ್ಯಾಧೀಶರೂ: ಕೊಪ್ಪಳ–ರಾಯಚೂರು ಎರಡೂ ಜಿಲ್ಲೆಗಳ ವ್ಯಾಪ್ತಿಯ ವಿಧಾನ ಪರಿಷತ್‌ ಕ್ಷೇತ್ರಕ್ಕೆ ನಾಲ್ವರು ಆಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಶರಣಗೌಡ ಬಯ್ಯಾಪುರ ಮತ್ತು ಬಿಜೆಪಿ ಅಭ್ಯರ್ಥಿ ವಿಶ್ವನಾಥ.ಎ.ಬನಹಟ್ಟಿ ಅವರ ಮಧ್ಯೆ ನೇರ ಹಣಾಹಣಿ ಇದೆ. ಆಸ್ತಿ ವಿವರದ ಪ್ರಕಾರ, ಇಬ್ಬರೂ ಕೋಟ್ಯಧೀಶರು. ಜನಹಿತ ಪಾರ್ಟಿ ಅಭ್ಯರ್ಥಿ ತಿರುಪತಿ ನರಸಪ್ಪ ಮತ್ತು ಪಕ್ಷೇತರ ಅಭ್ಯರ್ಥಿ ನರೇಂದ್ರ ಆರ್ಯರೂ ಕಣದಲ್ಲಿದ್ದಾರೆ. ಆದರೆ ಇವರು ಆಟಕುಂಟು ಲೆಕ್ಕಕ್ಕಿಲ್ಲದವರು.!

ಉದ್ಯಮಿ ವಿಶ್ವನಾಥ ಬನಹಟ್ಟಿ ಅವರು ದೇವದುರ್ಗ ಶಾಸಕ ಶಿವನಗೌಡ ನಾಯಕ ಅವರ ಸೂಚಿತ ಅಭ್ಯರ್ಥಿ ಎಂಬುದು ಸ್ಪಷ್ಟ. ‘ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆಯದ ವ್ಯಕ್ತಿಗೆ ಟಿಕೆಟ್‌ ನೀಡಲಾಗಿದೆ’ ಎಂಬ ಚರ್ಚೆಯೂ ಬಿಜೆಪಿ ನಾಯಕರಲ್ಲಿ ನಡೆದಿದೆ.

ಕಾಂಗ್ರೆಸ್‌ ಅಭ್ಯರ್ಥಿ ಶರಣಗೌಡ ಬಯ್ಯಾಪುರ ಅವರು, ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ಅವರ ಸಹೋದರನ ಪುತ್ರ. ಸಹಕಾರ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಅವರಿಗೆ ರಾಜಕೀಯ ಅನುಭವ ಇದೆ.

ಎರಡೂ ಜಿಲ್ಲೆಗಳ 12 ಶಾಸಕರ ಪೈಕಿ ಐವರು ಶಾಸಕರು ಹಾಗೂ ಇಬ್ಬರು ಸಂಸದರು ಬಿಜೆಪಿಯಿಂದ ಆಯ್ಕೆಯಾದವರು. ಐವರು ಶಾಸಕರು ಕಾಂಗ್ರೆಸ್‌ನವರು. ಇಬ್ಬರು ಜೆಡಿಎಸ್‌ ಶಾಸಕರಿದ್ದು, ಇವರು ಯಾರನ್ನು ಬೆಂಬಲಿಸುತ್ತಾರೆ ಎಂಬುದೇ ಸ್ಪಷ್ಟವಾಗಿಲ್ಲ.

# ಸ್ಪರ್ಧೆಗೆ ನಿರಾಕರಣೆಯೂ: ವಿಧಾನ ಪರಿಷತ್ತಿನ ಕಾಂಗ್ರೆಸ್ ಸದಸ್ಯ ಬಸವರಾಜ ಪಾಟೀಲ ಇಟಗಿ ಅವರು ಮತ್ತೆ ಸ್ಪರ್ಧಿಸಲು ನಿರಾಕರಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಪರ ಈಗ ಪ್ರಚಾರ ನಡೆಸಿದ್ದಾರೆ. ‘ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ಸಾಕಷ್ಟು ಅನುದಾನ ಬರುವುದಿಲ್ಲ. ವಿಧಾನ ಪರಿಷತ್‌ ಸದಸ್ಯನಾಗಿ ಸಮಸ್ಯೆಗಳಿಗೆ ಸ್ಪಂದಿಸದೇ ಇರಲು ನನ್ನಿಂದ ಆಗುವುದಿಲ್ಲ. ಹೀಗಾಗಿ ಟಿಕೆಟ್‌ ಬೇಡ ಎಂದು ವರಿಷ್ಠರಿಗೆ ಮೊದಲೇ ತಿಳಿಸಿದ್ದೆ’ ಎಂದು ಅವರು ನಮ್ಮ ಸುದ್ದಿಜಾಲಕ್ಕೆ ಪ್ರತಿಕ್ರಿಯಿಸಿದರು.

emedialine

Recent Posts

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

2 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

7 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

7 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

9 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

20 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420