ಸುರಪುರ:ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕೋವಿಡ್ ಲಸಿಕೆ ಪ್ರಗತಿ ಪರಿಶೀಲನಾ ಸಭೆ

0
20

ಸುರಪುರ: ನಗರದ ತಹಸೀಲ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ:ರಾಗಪ್ರಿಯ ಆರ್ ಅವರ ನೇತೃತ್ವದಲ್ಲಿ ಕೋವಿಡ್ ಲಸಿಕೆ ವಿತರಣೆ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಾಯಿತು.ಸಭೆಯಲ್ಲಿ ಸುರಪುರ ಮತ್ತು ಹುಣಸಗಿ ತಾಲೂಕಿನ ಕಂದಾಯ ಮತ್ತು ಗ್ರಾಮ ಪಂಚಾಯತಿ ಹಾಗು ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು,ಇಡೀ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯಲ್ಲಿ ಉತ್ತಮವಾಗಿ ಕಾಮರ್ಯನಿರ್ವಹಿಸಲಾಗಿದೆ.ಆದರೆ ಕಕ್ಕೇರಾ ಪುರಸಭೆ ವ್ಯಾಪ್ತಿಯಲ್ಲಿ ಇನ್ನೂ ಪ್ರಗತಿ ಆಗಬೇಕಿದೆ ಎಂದರು.ಅಲ್ಲದೆ ಎರಡೂ ತಾಲೂಕಿನ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಂದಾಯ ಅಧಿಕಾರಿಗಳು ಹಾಗು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗು ಗ್ರಾಮ ಲೆಕ್ಕಾಧಿಕಾರಿಗಳನ್ನು ಕರೆದು ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಆದ ಲಸಿಕೆ ವಿತರಣೆಯನ್ನು ಎಲ್ಲರಿಗೂ ತಿಳಿಸುವ ಜೊತೆಗೆ ಇನ್ನೂ ಆಗಬೇಕಾದ ವಿತರಣೆ ಕುರಿತು ಖಡಕ್ ಸೂಚನೆ ನೀಡಿದರು.ಮುಂದಿನ ದಿನಗಳಲ್ಲಿ ಲಸಿಕೆ ವಿತರಣೆಯನ್ನು ತುಂಬಾ ಗಂಭೀರವಾಗಿ ತೆಗೆದುಕೊಳ್ಳಿ ಪ್ರತಿ ಗ್ರಾಮ ಪಂಚಾಯತಿಯಲ್ಲಿ ಶೇ ೧೦೦ ರಷ್ಟು ಪ್ರಗತಿ ಬೇಕು ಎಂದು ತಿಳಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಇಂದುಮತಿ ಪಾಟೀಲ್,ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ:ನಾಗರಾಜ ಪಾಟೀಲ್, ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ಹಣಮಗೌಡ ಪಾಟೀಲ್,ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಹಾಗು ಸುರಪುರ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ,ಹುಣಸಗಿ ತಹಸೀಲ್ದಾರ್ ಅಶೋಕ ಸುರಪುರ,ಗ್ರೇಡ-೨ ತಹಸೀಲ್ದಾರ್ ಸೂಫಿಯಾ ಸುಲ್ತಾನ, ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ.ನಾಯಕ,ಪೊಲೀಸ್ ಇನ್ಸ್ಪೇಕ್ಟರ್ ಸುನೀಲಕುಮಾರ್ ಮೂಲಿಮನಿ,ಬಿಇಒ ಮಹಾದೇವರಡ್ಡಿ,ಅಕ್ಷರದಾಸೋಹ ಎಡಿ ಮೌನೇಶ ಕಂಬಾರ,ಸಿಡಿಪಿಒ ಲಾಲಸಾಬ್ ಪೀರಾಪುರ ಸೇರಿದಂತೆ ಕೃಷಿ,ತೋಟಗಾರಿಗೆಕೆ,ಕಂದಾಯ ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here