ಸುರಪುರ: ತಾಲೂಕಿನ ದೇವರಗೋನಾಲ ಗ್ರಾಮದಲ್ಲಿನ ಸರಕಾರಿ ಶಾಲೆಗೆ ಶಿಕ್ಷಕರನ್ನು ನೇಮಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಸಾರಥ್ಯದಲ್ಲಿ ಸಂಘಟನೆಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಶಿವಮೋನಯ್ಯ ಎಲ್.ಡಿ.ನಾಯಕ ಮಾತನಾಡಿ,ದೇವರಗೋನಾಲ ಗ್ರಾಮದಲ್ಲಿ ೫೩೯ ಮಕ್ಕಳಿದ್ದಾರೆ,ಆದರೆ ಇಷ್ಟು ಮಕ್ಕಳಿಗೆ ಕಲಿಸಲು ಕೇವಲ ೪ ಜನ ಮಾತ್ರ ಶಿಕ್ಷಕರಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಈ ಶಾಲೆಗೆ ಇನ್ನೂ ೧೦ ಜನ ಶಿಕ್ಷಕರು ಬೇಕು ಮತ್ತು ಈಗಿರುವ ಶಾಲಾ ಕೋಣೆಗಳು ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿವೆ ಆದ್ದರಿಂದ ಕೂಡಲೇ ೧೩ ಕೋಣೆಗಳ ಶಾಲೆಯನ್ನು ನಿರ್ಮಿಸುವಂತೆ ಆಗ್ರಹಿಸಿದರು.
ಒಂದುವೇಳೆ ಈ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಸಂಘಟನೆಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿ ನಂತರ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘಟನೆಯ ಅನೇಕ ಜನ ಮುಖಂಡರು ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…