ಕಲಬುರಗಿ: ವಿಧಾನ ಪರಿಷತ್ ಚುನಾವಣೆ ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಒಗ್ಗಟಿನಿಂದ ಶ್ರಮಿಸಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಕಾರಣವಾಗಬೇಕು ಎಂದು ಮಹಾಗಾಂವ ಬಿಜೆಪಿ ಮುಖಂಡರಾದ ಮಲ್ಲಿಕಾರ್ಜುನ ಮರತೂರಕರ್ ಹೇಳಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಡಿಸೆಂಬರ್ 10ರಂದು ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಯ ಮತದಾರರು ಕಲಬುರಗಿ ಹಾಗೂ ಯಾದಗಿರಿ ವಿಧಾನ ಪರಿಷತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ಜಿ ಪಾಟೀಲ್ ಅವರಿಗೆ ಮತವನ್ನು ಹಾಕಿ ಜಿಲ್ಲೆಯಾದ್ಯಂತ ಪ್ರಚಂಡ ಬಹುಮತದಿಂದ ಆರಿಸಿ ತರಬೇಕು ಎಂದು ಅವರು ಸ್ಥಳೀಯ ಸಂಸ್ಥೆಯ ಮತ ಬಾಂಧವರಲ್ಲಿ ಮನವಿ ಮಾಡಿಕೊಂಡರು.
ಯಾದಗಿರಿ ಹಾಗೂ ಕಲಬುರಗಿ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಯಾಗಿ ನಿಂತಿರುವ ಬಿಜೆಪಿ ಅಭ್ಯರ್ಥಿ ಬಿ.ಜಿ.ಪಾಟೀಲ್ ಅವರು ಆಡಳಿತ ಕ್ಷೇತ್ರದಲ್ಲಿ ಹಾಗೂ ರಾಜಕೀಯವಾಗಿ ಬಹಳ ನಿಷ್ಠಾವಂತರೂ ಹಾಗೂ ಚತುರರೂ ಆಗಿದ್ದಾರೆ.ಯಾವಾಗಲೂ ಜನಸಾಮಾನ್ಯರ ನಡುವೆ ಇರುವ ಇವರು ಜನರ ಕಷ್ಟ ಕಾರ್ಪಣ್ಯಗಳನ್ನು ಅರಿತು ಕೊಂಡವರಾಗಿದ್ದಾರೆ.
ಆಯಾ ಜಿಲ್ಲೆಗಳ ಪದಾಧಿಕಾರಿಗಳೊಂದಿಗೆ ನಿರಂತರ ಸಂಪರ್ಕ ಸಾಧಿಸಿ ಅಲ್ಲಿ ಚುನಾವಣೆ ಸಂಬಂಧಪಟ್ಟಂತೆ ಯಾವ ರೀತಿ ಕೆಲಸಗಳು ನಡೆಯುತ್ತಿವೆ ಎಂಬುದನ್ನು ಅರಿತುಕೊಳ್ಳಬೇಕು. ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು.ಇಂತಹ ಮಾನ್ಯರಿಗೆ ಮತದಾರರು ಕೈ ಹಿಡಿಯುವ ಮೂಲಕ ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಿ ವಿಧಾನ ಪರಿಷತ್ತಿಗೆ ಕಳಿಸಿ ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ಅಭಿವೃದ್ಧಿ ಪಥದಲ್ಲಿ ಸಾಗಲು ತಾವೆಲ್ಲರೂ ಕಾರಣಿಭೂತರಾಗಬೇಕು ಎಂದು ಅವರು ಮನವಿ ಮಾಡಿಕೊಂಡರು.