ಆಳಂದ: ಶಾಲೆಗಳ ಮಧ್ಯಾಹ್ನದ ಬಿಸಿಯೂಟಕ್ಕೆ ರಾಜ್ಯ ಸರ್ಕಾರದ ಮೊಟ್ಟೆ ಮತ್ತು ಬಾಳೆ ಹಣ್ಣು ವಿತರಣೆ ಕಾರ್ಯಕ್ಕೆ ಪಟ್ಟಣದ ಹತ್ತ್ಯಾನಗಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಷರ ದಾಸೋಹ ತಾಲೂಕು ಅಧಿಕಾರಿ ಡಾ| ರಾಜಕುಮಾರ ಪಾಟೀಲ ಅವರು ಬುಧವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ರಾಜ್ಯ ಏಳು ಜಿಲ್ಲೆಗಳಲ್ಲಿ ಡಿಸೆಂಬರ್‌ನಿಂದ ಮಾರ್ಚ್ ತಿಂಗಳವರೆಗೆ ಸೇರಿ ೪೬ ದಿನಗಳ ಕಾಲ ಶಾಲಾ ಮಕ್ಕಳು ಪೌಷ್ಠಿಕ ಆಹಾರ ನೀಡುವ ಉದ್ದೇಶದಿಂದ ಮಧ್ಯಾಹ್ನದ ಬಿಸಿಯೂಟದ ಜೊತೆ ವಾರದ ಮೂರು ದಿನ ವಿದ್ಯಾರ್ಥಿಗಳಿಗೆ ಬೇಡಿಕೆಯಂತೆ ಬಾಳೆ ಹಣ್ಣು ಅಥವಾ ಮೊಟ್ಟೆ ನೀಡಲಾಗುತ್ತಿದೆ. ೧ರಿಂದ ೮ನೇ ತರಗತಿ ಶಾಲೆಯ ವಿದ್ಯಾರ್ಥಿಗಳಿಗೆ ಅಪೌಷ್ಠಿಕತೆ ಮತ್ತು ರಕ್ತ ಹೀನತೆ ಹಾಗೂ ಬಹುಪೋಷಕಾಂಶಗಳ ನೂನ್ಯತೆ ಹೊಗಲಾಡಿಸುವ ಉದ್ದೇಶದಿಂದ ಸರ್ಕಾರ ಈ ಯೋಜನೆ ಜಾರಿಗೆ ತಂದಿದೆ ಎಂದರು.
ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಬಾಳೆ ಹಣ್ಣು ನೀಡಲಾಗುತ್ತದೆ. ಶಾಲೆಗಳಲ್ಲಿ ಸಂಬಂಧಿತರು ಮಕ್ಕಳಿಗೆ ಸಮರ್ಪಕವಾಗಿ ತಪ್ಪದೆ ಊಟದ ಜೊತೆಗೆ ಬಾಳೆ ಹಣ್ಣು ಅಥವಾ ಮೊಟ್ಟೆ ಒದಗಿಸಬೇಕು ಎಂದು ಅವರು ಸಲಹೆ ನೀಡಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ಧರಾಮ ಪಾಟೀಲ ಅವರು ಮಾತನಾಡಿ, ಶೈಕ್ಷಣಿಕ ಅಭಿವೃದ್ಧಿಗಾಗಿ ಶಾಲಾ ಮಕ್ಕಳಿಗೆ ಸರ್ಕಾರ ನೀಡುತ್ತಿರುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿ ಮಕ್ಕಳ ಆರೋಗ್ಯ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಪಾಲಕರು ಮತ್ತು ಶಿಕ್ಷಕರು ಶ್ರಮಿಸಬೇಕು ಎಂದು ಅವರು ಹೇಳಿದರು.
ಸಿಆರ್‌ಪಿ ದತ್ತಪ್ಪ ಸುಳ್ಳನ, ಮುಖ್ಯ ಶಿಕ್ಷಕಿ ಜಯಶ್ರೀ ಪಾಟೀಲ, ಶಿಕ್ಷಕ ಸಿದ್ಧರಾಮ ಶಹಾಪೂರೆ, ಪ್ರಕಾಶ ಸೂರವಾಸೆ, ಜಯಶ್ರೀ ನಾಗೂರೆ ಸೇರಿದಂತೆ ಸಿಬ್ಬಂದಿಗಳು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…