ಕಲಬುರಗಿ/ಜೇವರ್ಗಿ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ವಿಧಾನ ಪರಿಷತ್‍ಗೆ ನಡೆಯುತ್ತಿರೋದು ಸ್ವಾಭಿಮಾನದ ಚುನಾವಣೆ, ಇಲ್ಲಿ ಪಂಚಾಯ್ತಿ, ಪುರಸಭೆ, ನಗರಸಭೆ ಸೇರಿದಂತೆ ಸ್ಥಳೀಯ ಸಸ್ಥೆಗಳ ಸದಸ್ಯ ಮಚದಾರರು ಕೈ ಹಿಡಿಯುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ವಿಧಾನಸಬೆ ವಿರೋಧ ಪಕ್ಷದ ಮುಕ್ಯ ಸಚೇತಕ, ಜೇವರ್ಗಿ ಶಾಸಕರಾದ ಡಾ. ಅಜಯ್ ಸಿಂಗ್ ಕರೆ ನೀಡಿದ್ದಾರೆ.
ಗುರುವಾರ ತಾಲೂಕಿನ ಕೂಡಿ ಗ್ರಾಮದಲ್ಲಿ ಕೂಡಿ, ಕೋಳಕೂರ, ಹರವಾಳ, ಸೊನ್ನ, ಕಲ್ಲಹಂಗರಗಾ ಗ್ರಾಮ ಪಂಚಾಯಿತಿ ಸದಸ್ಯರ ಪ್ರಚಾರ ಸಭೆ ನಡೆಸಿ ಮಾತನಾಡಿದರು.
ಸ್ವಾಭಿಮಾನದ ಚುನಾವಣೆಯಲ್ಲಿ ಹಣ ಕೆಲಸಕ್ಕೆ ಬಾರದು, ಎದುರಾಳಿಗಳ ಯಾವುದೇ ಆಮೀಷಗಳಿಗೆ ಒಳಗಾಗದೇ ಕಾಂಗ್ರೆಸ್ ಅಭ್ಯರ್ಥಿ ಶಿವಾನಂದ ಪಾಟೀಲ ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದರು.
ರಾಜ್ಯ ಹಾಗೂ ಏಕಂದ್ರದಲ್ಲಿ ಬಿಜೆಪಿ ಅದಿಕಾರಕ್ಕೆ ಬಂದಮೇಲೆ ರಾಜ್ಯಕ್ಕೆ, ಜಿಲ್ಲೆಗೆ ಬಂದಿರುವ ಅನೇಕ ಮಹತ್ವದ ಯೋಜನೆಗಳನ್ನು ಕೈಬಿಟ್ಟಿದೆ. ಅಭಿವೃದ್ಧಿ ಅನುದಾನ ನೀಡದೆ ಕಡಿತ ಮಾಡಿದೆ. ಕಾಂಗ್ರೆಸ್ ಶಾಸಕರ ಮತಕ್ಷೇತ್ರಗಳಿಗೆ ಅನುದಾನ ಕಡಿತಗೊಳಿಸಿ ತಾರತಮ್ಮ ಎಸಗಲಾಗುತ್ತಿದೆ. ಅಭಿವೃದ್ಧಿ ವಿರೋಧಿ ಇಂತಹ ಬಿಜೆಪಿ ಪಕ್ಷಕ್ಕೆ ಪರಿಷತ್‍ನಲ್ಲಿ ಸ್ಥಳೀಯ ಂಸಸ್ಥೆಯವರು ಬೆಂಬಲಿಸಲೇಬಾರದು ಎಂದರು.
ಕಾಂಗ್ರೆಸ್ ಅಭ್ಯರ್ಥಿ ಶಿವಾನಂದ ಪಾಟೀಲ ಮಾತನಾಡಿ, ಬಿಜೆಪಿ ನಾಯಕರು ಸಭೆ ಸಮಾರಂಭಗಳಲ್ಲಿ ಕಾಂಗ್ರೆಸ್ ಸಮರ್ಥ ಅಭ್ಯರ್ಥಿಯನ್ನು ಕಣಕಿಳಿಸಿಲ್ಲ ಎಂದು ವ್ಯಂಗ್ಯವಾಡುತ್ತಿದ್ದಾರೆ. ಸಮರ್ಥ ಶಬ್ದದ ಅರ್ಥ ಬಿಜೆಪಿಯವರಿಗೆ ಗೊತ್ತಿಲ್ಲ. ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ತುಲನೆ ಮಾಡಿ ಸೂಕ್ತ ಅಭ್ಯರ್ಥಿಗೆ ಮತ ನೀಡುವಂತೆ ಕೋರಿದರು.
ಜೇವರ್ಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ಧಲಿಂಗರೆಡ್ಡಿ ಇಟಗಿ, ಯಡ್ರಾಮಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರುಕುಂ ಪಟೇಲ ಇಜೇರಿ, ಜಿ.ಪಂ ಮಾಜಿ ಉಪಾದ್ಯಕ್ಷ ಗುರುಲಿಂಗಪ್ಪಗೌಡ ಮಾಲಿಪಾಟೀಲ ಆಂದೋಲಾ, ರಾಜಶೇಖರ ಸೀರಿ, ವಿಜಯಕುಮಾರ ಪಾಟೀಲ ಕಲ್ಲಹಂಗರಗಾ, ಗ್ರಾ.ಪಂ ಅಧ್ಯಕ್ಷರಾದ ಬೈಲಪ್ಪ ನೆಲೋಗಿ, ಆಕಾಶ ಹರವಾಳ, ಗೌರಮ್ಮ ಕೂಡಿ, ಬಾಷಾ ಪಟೇಲ ಬಣಮಿ, ರುಕುಂ ಪಟೇಲ ಕೂಡಿ, ಚಂದ್ರಶೇಖರ ಹರನಾಳ, ಕಾಶಿಂ ಪಟೇಲ ಮುದಬಾಳ, ಶಿವಣ್ಣಗೌಡ ಪಾಟೀಲ ಮಂದರವಾಡ, ಶಿವಶರಣಪ್ಪ ಕೋಬಾಳ, ಬಸವರಾಜ ಕೋಣಿನ್, ಅಜೀತಕುಮಾರ ಪಾಟೀಲ ಮಹೀಮೋದ ನೂರಿ, ನೀಲಕಂಠ ಪಾಟೀಲ ಕಟ್ಟಿಸಂಗಾವಿ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು, ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…