ವಿಧಾನ ಪರಿಷತ್ ಪರಿಷತ್ ಚುನಾವಣೆ: ನಾಳೆ ಜೇವರ್ಗಿಯಲ್ಲಿ ಡಾ. ಮಲ್ಲಿಕಾರ್ಜುನ ಖರ್ಗೆ ಪ್ರಚಾರ

0
34

ಜೇವರ್ಗಿ: ಕಲಬುರಗಿ- ಯಾದಗಿರಿ ಸ್ಥಳೀಯ ಸಂಸ್ಥೆಗಳಿಂದ ವಿದಾನ ಪರಿಷತ್‍ಗೆ ನಡೆದಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರದ ಅಖಾಡಕ್ಕೆ ಧುಮುಕಿರುವ ರಾಜ್ಯಸಭೆ ಪ್ರತಿಪಕ್ಷ ನಾಯಕರು ಹಾಗೂ ಕಾಂಗ್ರೆಸ್ ರಾಷ್ಟ್ರೀಯ ಮುಖಂಡರು ಆಗಿರುವ ಡಾ. ಮಲ್ಲಿಕಾರ್ಜುನ ಖರ್ಗೆ ಡಿ. 4 ರ ಶನಿವಾರ ಮಧ್ಯಾಹ್ನ 3 ಗಂಟೆಗೆ ಜೇವರ್ಗಿ ಪಟ್ಟಣದಲ್ಲಿ ಪ್ರಚಾರ  ಸಭೆಯಲ್ಲಿ ಮಾನಾಡಲಿದ್ದಾರೆ.

ಜೇವರ್ಗಿ ಪಟ್ಟಣದ ಭೂತಪೂರ್ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಈ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕಣದಲ್ಲಿರುವ ಹುರಿಯಾಳು ಶಿವಾನಂದ ಪಾಟೀಲ್, ಜೇವರ್ಗಿ ಶಾಸಕರು, ವಿಧಾನಸಭೆಯಲ್ಲಿ ವಿರೋಧ ಪಕ್ಷದ ಮುಖ್ಯ ಸಚೇತಕರೂ ಆಗಿರುವ ಡಾ. ಅಜಯ್ ಸಿಂಗ್ ಸೇರಿದಂತೆ ಪಕ್ಷದ ಜಿಲ್ಲೆಯ ಶಾಸಕರು, ಪ್ರಮುಖರು, ಮುಖಂಡರು, ಹಾಲಿ, ಮಾಜಿ ಶಾಸಕರು, ಸಚಿವರು ಸೇರಿದಂತೆ ಪ್ರಮುಖರನೇಕರು ಭಾಗವಹಿಸುತ್ತಿದ್ದಾರೆ.

Contact Your\'s Advertisement; 9902492681

ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸಂಘಟಿಸಲಾಗಿರುವ ಕಾಂಗ್ರೆಸ್ ಪಕ್ಷದ ಈ ಪ್ರಚಾರ ಸಭೆಲ್ಲಿ ಜೇವರ್ಗಿಯ ಎಲ್ಲಾ ಸ್ಥಳೀಯ ಸಂಸ್ಥೆಗಳಾಗಿರುವ ಗ್ರಾಪಂ, ಪಪಂ, ಪುರಸಭೆ, ನಗರಸಭೆಯ ಸದಸ್ಯರು, ಕಾಂಗ್ರೆಸ್‍ನ ಮುಖಂಡರು, ಹಾಗೂ ಎಲ್ಲಾ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಲ್ಲಿ ತೊಡಗಿಸಿಕೊಂಡಿರುವ ಎಲ್ಲಾ ಪ್ರಮುಖರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here