ಬಿಸಿ ಬಿಸಿ ಸುದ್ದಿ

ಆಲ್ದಾಳ ಗ್ರಾಮ ಪಂಚಾಯತಿ ಅವ್ಯವಹಾರ ತನಿಖೆಗಾಗಿ ಪ್ರತಿಭಟನೆ: ರಾಜು ಕಟ್ಟಿಮನಿ

ಸುರಪುರ: ತಾಲೂಕಿನ ಆಲ್ದಾಳ ಗ್ರಾಮ ಪಂಚಾಯತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ ಅವ್ಯವಹಾರ ತನಿಖೆಗಾಗಿ ತಾಲೂಕು ಪಂಚಾಯತಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಅಂಬೇಡ್ಕರ್ ಸೇನೆ ಜಿಲ್ಲಾಧ್ಯಕ್ಷ ರಾಜು ಕಟ್ಟಿಮನಿ ಆರೋಪಿಸಿದರು.

ನಗರದಲ್ಲಿ ಸುದ್ದಿಗಾರರನ್ನು ಭೇಟಿ ಮಾಡಿ ಮಾತನಾಡಿ,ಆಳ್ದಾಳ ಗ್ರಾಮ ಪಂಚಾಯತಿಯಲ್ಲಿ ಪಿಡಿಓ,ಜೆಇ ಮತ್ತು ಕಂಪ್ಯೂಟರ್ ಆಪರೇಟರ್ ಅವರುಗಳಿಂದ ಭಾರಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಆರೋಪಿಸಿದರು.ಅಲ್ಲದೆ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ಹೆಸರಲ್ಲಿ ನಕಲಿ ಜಾಬ್ ಕಾರ್ಡ್‌ಗಳನ್ನು ಸೃಷ್ಟಿಸಿ ಸುಮಾರು ೮ ಲಕ್ಷ ರೂಪಾಯಿಗಳಷ್ಟು ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ.

ಇದರ ಬಗ್ಗೆ ಈಗಾಗಲೇ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದಾಖಲೆಗಳ ಸಮೇತ ಮನವಿ ಸಲ್ಲಿಸಿ ಕ್ರಮಕ್ಕೆ ಒತ್ತಾಯಿಸಲಾಗಿದೆ.ಆದರೆ ತಿಂಗಳು ಕಳೆದರು ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ.ಆದ್ದರಿಂದ ಇದೇ ತಿಂಗಳು ೧೬ ನೇ ತಾರೀಖು ತಾಲೂಕು ಪಂಚಾಯತಿ ಮುಂದೆ ಪ್ರತಿಭಟನೆ ನಡೆಸಲಾಗುವುದು,ಆಗಲೂ ಕ್ರಮ ಕೈಗೊಳ್ಳದಿದ್ದಲ್ಲಿ ಜಿಲ್ಲಾ ಪಂಚಾಯತಿ ಮುಂದೆಯೂ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.೧೬ನೇ ತಾರೀಖಿನೊಳಗೆ ತಾಲೂಕು ಪಂಚಾಯತಿ ಇಒ ಅವರು ತನಿಖೆ ನಡೆಸಿ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಯಲಿದೆ ಎಂದು ತಿಳಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

2 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

12 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

12 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

12 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago