ಬಿಸಿ ಬಿಸಿ ಸುದ್ದಿ

ಮಳಿಗೆ ಉದ್ಘಾಟನೆ ಮೂಲಕ ಮತದಾನ ಜಾಗೃತಿ

ಕಲಬುರಗಿ: ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಮೂಡಿಸುವ ಮತ್ತು ಪ್ರಜಾಪ್ರಭುತ್ವದ ಡೊಡ್ಡ ಹಬ್ಬದಲ್ಲಿ ಸಕ್ರೀಯವಾಗಿ ಪ್ರತಿ ಪ್ರಜೆಯೂ ಪಾಲ್ಗೊಳ್ಳಬೇಕೆಂಬ ಉದ್ದೇಶದಿಂದ ಕಲಬುರಗಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸ್ಥಾಪಿಸಲಾದ ಮತದಾರ ಜಾಗೃತಿ ಅಭಿಯಾನ ಮಳಿಗೆಯನ್ನು ರವಿವಾರ ಜಿಲ್ಲಾ ಚುನಾವಣಾಧಿಕಾರಿ ಆರ್.ವೆಂಕಟೇಶ ಕುಮಾರ ಉದ್ಘಾಟಿಸಿದರು.

ಮಳಿಗೆಯನ್ನು ವೀಕ್ಷಿಸಿದ ನಂತರ ಮಾತನಾಡಿದ ಜಿಲ್ಲಾ ಚುನಾವಣಾಧಿಕಾರಿ ಆರ್.ವೆಂಕಟೇಶ ಕುಮಾರ ಅವರು, ಪ್ರಸಕ್ತ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದು ಎಂಬುದು ಚುನಾವಣಾ ಆಯೋಗದ ಧ್ಯೇಯವಾಗಿದೆ. ಈ ನಿಟ್ಟಿನಲ್ಲಿ ಮತದಾರರಿಗೆ ಶಿಕ್ಷಣ, ಜಾಗೃತಿ ಮೂಡಿಸಲು ಹತ್ತಾರು ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಅದಕ್ಕೆ ಹೊಸದಾಗಿ ಈ ಜಾಗೃತಿ ಅಭಿಯಾನ ಸೇರ್ಪಡೆಯಾಗಿದೆ.

ಮೂರು ದಿನ ಮಳಿಗೆ ಪ್ರದರ್ಶನ:- ಏಪ್ರಿಲ್ ೧೪ ರಿಂದ ೧೬ರ ವರೆಗೆ ಮೂರು ದಿನಗಳ ಕಾಲ ಬೆಳಿಗ್ಗೆ ೮ ರಿಂದ ರಾತ್ರಿ ೮ ಗಂಟೆ ವರೆಗೆ ಜಾಗೃತಿ ಅಭಿಯಾನದ ಪ್ರದರ್ಶನ ಮಳಿಗೆ ಸಾರ್ವಜನಿಕರು ಮತ್ತು ಪ್ರಯಾಣಿಕರ ವೀಕ್ಷಣೆಗೆ ಮುಕ್ತವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಭೇಟಿ ನೀಡಬೇಕು. ಏಪ್ರಿಲ್ ೨೩ ರಂದು ನಡೆಯುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಕರೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ.ರಾಜಾ ಪಿ., ಮಹಾನಗರ ಪಾಲಿಕೆಯ ಆಯುಕ್ತೆ ಫೌಜಿಯಾ ಬಿ. ತರನ್ನುಮ, ಸಹಾಯಕ ಆಯುಕ್ತ ರಾಹುಲ ತುಕಾರಾಮ ಪಾಂಡ್ವೆ, ಐ.ಎ.ಎಸ್. ಪ್ರೊಬೇಷನರಿ ಸ್ನೇಹಲ್ ಸುಧಾಕರ ಲೋಖಂಡೆ, ಈ.ಕ.ರ.ಸಾ.ಸಂಸ್ಥೆಯ ಅಧಿಕಾರಿಗಳು ಇದ್ದರು.

ಗಮನ ಸೆಳೆದ ರೇಖಾಚಿತ್ರಗಳು:- ಮಳಿಗೆಯಲ್ಲಿ ಈ ಬಾರಿ ರೇಖಾಚಿತ್ರದಿಂದ ಮೂಡಿಸಲಾದ ಚಿತ್ರಗಳು ನೋಡುಗರ ಗಮನ ಸೆಳೆದವು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ಅವರ ಓದು ವ್ಯಕ್ತಿತ್ವವನ್ನು ರೂಪಿಸುತ್ತದೆ ಮತದಾನ ದೇಶವನ್ನು ರೂಪಿಸುತ್ತದೆ ತಪ್ಪದೆ ಮತದಾನ ಮಾಡಿ, ಚಿತ್ರನಟಿ ಪ್ರಣಿತ ಸುಭಾಷ ಅವರ ಮತದಾನ ಮಾಡಿದರೆ ಹೆಣ್ಣು ತೆರೆಯುವುದು ದೇಶದ ಕಣ್ಣು ಎಂಬ ಸಂದೇಶಗಳು ಸಾರ್ವಜನಿಕರ ಮನ ಮುಟ್ಟುವಂತಿವೆ. ಇನ್ನು ಇದೇ ಮೊದಲ ಬಾರಿಗೆ ಚುನಾವಣಾ ಅಕ್ರಮಗಳಿಗೆ ಕಡಿವಾಣ ಹಾಕಲು ಆಯೋಗವು ಸಿ ವಿಜಿಲ್ ಆಪ್ ಹಾಗೂ ಚುನಾವಣಾ ಆಪ್ ಸಹ ಅಭಿವೃದ್ಧಿಪಡಿಸಿದ್ದು, ಅದರ ಕಾರ್ಯನಿರ್ವಹಣೆ ಬಗ್ಗೆಯೂ ಇಲ್ಲಿ ಪ್ರಸ್ತುತಪಡಿಸಲಾಗಿದೆ. ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹೊರತರಲಾದ ರೇಖೆಗಳಲ್ಲಿ ಚುನಾವಣೆ-೨೦೧೯ ಎಂಬ ಕಿರು ಹೊತ್ತಿಗೆ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಕರಪತ್ರಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

8 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

10 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

17 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

17 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

17 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago