ಸುರಪುರ: ಕರ್ನಾಟಕ ಸರಕಾರದ ಕಾರ್ಮಿಕ ಇಲಾಖೆಯಡಿ ನೊಂದಾಯಿತವಾದ ಹಾಗು ಇಂಡಿಯನ್ ಫೆಡರೇಶನ್ ಆಫ್ ವರ್ಕಿಂಗ್ ಜರ್ನಾಲಿಸ್ಟ್ ಯೂನಿಯನ್ ಸಂಯೋಜಿತ ಸಂಸ್ಥೆ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಯಾದಗಿರಿ ಜಿಲ್ಲಾ ಘಟಕದ ಉದ್ಘಾಟನೆ ಹಾಗು ಪತ್ರಿಕಾ ದಿನಾಚರಣೆಯನ್ನು ತಾಲ್ಲೂಕಿನ ಕಕ್ಕೇರಾದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೆಜೆಯು ರಾಜ್ಯಾಧ್ಯಕ್ಷ ಬಿ.ನಾರಾಯಣ,ಕೊಡೆಕಲ್ ದುರುದುಂಡೇಶ್ವರ ಮಠದ ಶಿವಕುಮಾರ ಮಹಾಸ್ವಾಮಿ, ತಹಸೀಲ್ದಾರ ಸುರೇಶ ಅಂಕಲಗಿ,ಕರವೇ ಉ.ಕ ಅಧ್ಯಕ್ಷ ಶರಣು ಗದ್ದುಗೆ,ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಿ.ಎಮ್.ಜಗದೀಶ ಹಿರೇಮಠ,ಪುರಸಭೆ ಮುಖ್ಯಾಧಿಕಾರಿ ಆದಪ್ಪ ಸುರಪುರಕರ್,ಕೆಜೆಯು ಜಿಲ್ಲಾಧ್ಯಕ್ಷ ಡಿ.ಸಿ.ಪಾಟಿಲ,ಗೌರವಾಧ್ಯಕ್ಷ ವೀರಣ್ಣ ಕಲಕೇರಿ ಸೇರಿದಂತೆ ಜಿಲ್ಲೆಯ ವಿವಿಧ ಪತ್ರಿಕೆಗಳ ವರದಿಗಾರರು ಮತ್ತಿತರೆ ಗಣ್ಯರು ಹಾಗು ಕೆಜೆಯುನ ಜಿಲ್ಲಾ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಜಿಲ್ಲೆಯ ಎಲ್ಲಾ ಮಾದ್ಯಮ ಮಿತ್ರರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕೆಜೆಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ದೊರೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.