ಸುರಪುರ: ನಗರದ ಸರ್ಕಾರಿ ಬಾಲಕರ ಪ್ರೌಢ ಶಾಲೆಯಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಫೀಟ್ ಇಂಡಿಯಾ ಸಪ್ತಾಹ ಕಾರ್ಯಕ್ರಮ ನಡೆಸಲಾಯಿತು.
ಶನಿವಾರ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಪ ಪ್ರಾಚಾರ್ಯ ಯಲ್ಲಪ್ಪ ಕಾಡ್ಲೂರ್ ಮಾತನಾಡಿ,ಪ್ರಧಾನ ಮಂತ್ರಿಯವರು ಹಾಗು ಕೇಂದ್ರ ಸರಕಾರ ೭೫ನೇ ಸ್ವಾತಂತ್ರ್ಯ ಮಹೋತ್ಸವದ ಸಂದರ್ಭದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಫಿಟ್ ಇಂಡಿಯಾ ಸಪ್ತಾಹ ಕಾರ್ಯಕ್ರಮವನ್ನು ಆಚರಿಸುವಂತೆ ಆದೇಶಿಸಿದ ಪ್ರಯುಕ್ತವಾಗಿ ಎಲ್ಲೆಡೆಯು ಕಾರ್ಯಕ್ರಮವನ್ನು ನಡೆಸುತ್ತಿದ್ದು,ಅದರಂತೆ ನಮ್ಮ ಶಾಲೆಯಲ್ಲಿ ಆರು ಕಾರ್ಯಕ್ರಮಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ಕೌಶಲ್ಯ ಬೆಳೆಸುವ ಮತ್ತು ದೈಹಿಕ ಹಾಗು ಮಾನಸಿಕ ಆರೋಗ್ಯದಾಯಕ ಮನೋಭಾವ ಬೆಳವಣಿಗೆ ಹಾಗು ದೇಶಪ್ರೇಮ ಬೆಳೆಸುವಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ನಂತರ ಶಾಲೆಯ ಎಲ್ಲಾ ಶಿಕ್ಷಕರು ಹಾಗು ವಿದ್ಯಾರ್ಥಿಗಳು ಫಿಟ್ ಇಂಡಿಯಾ ಸಪ್ತಾಹದ ಅಂಗವಾಗಿ ’ನಾವು ಪ್ರತಿದಿನ ದೈಹಿಕ ಚಟುವಟಿಕೆಗಳಲ್ಲಿ ಮತ್ತು ಕ್ರೀಡೆಗಳಲ್ಲಿ ಭಾಗವಹಿಸುವುದರ ಮೂಲಕ ಆರೋಗ್ಯಕರ ಮತ್ತು ಸದೃಢವಾದ ಸಮಾಜ ನಿರ್ಮಾಣ ಮಾಡುತ್ತೇವೆ ಅಲ್ಲದೆ ಇತರರನ್ನು ಸಹ ಕ್ರೀಡೆಗಳಲ್ಲಿ ಭಾಗವಹಿಸುವಂತೆ ಮಾಡಿ ಅವರನ್ನು ದೈಹಿಕ ಮತ್ತು ಮಾನಸಿಕವಾಗಿ ಸದೃಢಗೊಳಿಸಲು ಸಹಕಾರಿಯಾಗುತ್ತೇವೆಂದು’ ಪ್ರತಿಜ್ಞೆ ಬೋಧಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದೈಹಿಕ ಶಿಕ್ಷಕರಾದ ನಿಂಗಪ್ಪ ಪೂಜಾರಿ ಮತ್ತು ಜೋಗಪ್ಪ ವೇದಿಕೆ ಮೇಲಿದ್ದರು.ಶಿಕ್ಷಕರಾದ ವಸಂತಕುಮಾರ ಕೆ.ಎಲ್ ಸ್ವಾಗತಿಸಿದರು,ಲಕ್ಷ್ಮಣ ಬಿರಾದಾರ ನಿರೂಪಿಸಿದರು,ಜಯರಾಮ್ ಚವ್ಹಾಣ್ ವಂದಿಸಿದರು.ಶಾಲೆಯ ಎಲ್ಲಾ ಶಿಕ್ಷಕರು ಹಾಗು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…