ಬಿಸಿ ಬಿಸಿ ಸುದ್ದಿ

ಒಂದು ಅವಕಾಶ ಕೊಟ್ಟು ನೋಡಿ ಸೇಡಂ ಮಾದರಿ ಕ್ಷೇತ್ರಕ್ಕೆ ಶ್ರಮಿಸುವೆ: ಬಾಲರಾಜ್ ಗುತ್ತೇದಾರ್

ಸೇಡಂ : ಮತಕ್ಷತ್ರದಲ್ಲಿ ಕಾಂಗ್ರೆಸ್, ಬಿಜೆಪಿ ಪಕ್ಷಕ್ಕೆ ಅವಕಾಶ ಕೊಟ್ಟು ಆಡಳಿತ ನೋಡಿದ್ದ್ದಿರಿ. ಒಂದು ಅವಕಾಶ ಜೆಡಿಎಸ್ ಪಕ್ಷಕ್ಕೆ ಕೊಟ್ಟು ನೋಡಿ ರಾಜ್ಯದಲ್ಲಿಯೆ ಮಾದರಿಕ್ಷೇತ್ರ ಮಾಡಿ ತೋರಿಸುತ್ತೇನೆ ಎಂದು ಸೇಡಂ ಮತಕ್ಷೇತ್ರದ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ಹೇಳಿದ್ದರು.

ಸೇಡಂ ಮತಕ್ಷೇತ್ರದ ಬೆನಕನಹಳ್ಳಿ ಗ್ರಾಮದಲ್ಲಿ ವಿವಿಧ ಪಕ್ಷ ತೊರೆದು ಜೆಡಿಎಸ್ ಸೆರ್ಪಡೆ ಸಮಾರಂಭದಲ್ಲಿ ಮಾತನಾಡಿದ ಅವರು ರೈತರಿಗೆ,ವಿದ್ಯಾರ್ಥಿಗಳಿಗೆ , ಬಡವರಿಗೆ,ಕೂಲಿಕಾರ್ಮಿಕರ ಪರವಾಗಿ ಅನೇಕ ಯೋಜನೆಗಳು ಜಾರಿಗೆ ತರುತ್ತೇನೆ. ಮುಂಬರುವ ದಿನಗಳಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ತರಲು 2023 ಕ್ಕೆ ಜೆಡಿಎಸ್ ಪಕ್ಷದ ಗೆಲುವಿಗೆ ಒಗ್ಗೂಡಿ ಶ್ರಮಿಸೋಣ ಜೊತೆಗೆ ಸೇಡಂ ಮತಕ್ಷೇತ್ರದ ನಿರುದ್ಯೋಗಿ ಯುವಕರಿಗೆ ಸ್ಥಳೀಯ ಸಿಮೆಂಟ್ ಕಾರ್ಖಾನೆಗಳಲ್ಲಿ ಉದ್ಯೊಗ ನೀಡಲು ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು, ಇಗಾಗಲೆ ಮತಕ್ಷೇತ್ರದ ಜನರ ಸಮಸ್ಯೆ ಅರಿಯಲು ಕ್ಷೇತ್ರದ 133 ಗ್ರಾಮಗಳಲ್ಲಿ ಪಾದಯಾತ್ರೆ ಕೈಗೊಂಡಿರುವೆ. ಮೊದಲ ಹಂತವಾಗಿ ಸೇಡಂ ಪಟ್ಟಣದ 23 ವಾರ್ಡಗಳಲ್ಲಿ ಈಗಾಗಲೇ ಪಾದಯಾತ್ರೆ ಕೈಗೊಂಡಿದೇನೆ. ಇ ಮೂಲಕ ಜನರಿಗೆ ಮೂಲಭೂತ ಸೌಕರ್ಯ ಒದಗಿಸುವ ಕೆಲಸ ಮಾಡುವೆ ಎಂದರು.

ಈ ಸಂದರ್ಭದಲ್ಲಿ, ಶಿವರಾಮರೆಡ್ಡಿ ಮುದೋಳ, ಜಗನ್ನಾಥ ರೆಡ್ಡಿ ಗೊಟೂರ್, ಶರಣಪ್ಪ ಬಾಲಾನೋರ್, ನಾಗಣ್ಣ ತಳವಾರ್, ಸಾಬಣ್ಣ ಬಂಕಲಗಿ, ಶಿವಪುತ್ರಪ್ಪ ಮೊಘಾ, ಹಣಮಯ್ಯ ಗುತ್ತೇದಾರ, ಶಿವು ಜಾಡರ, ರಿಯಾಜ್ ಪಟೇಲ, ಅರ್ಜುನ, ರಮೇಶ್ ಗುತ್ತೇದಾರ, ರಾಜು, ಶರಣಪ್ಪ ಅವಂಟಿ, ಬಸವರಾಜ ಪೂಜಾರಿ, ಕಾಶಣ್ಣ ಕೋಳಿ, ಅಯ್ಯಪ್ಪ ಮರಗಣಿ, ಮಲ್ಲು ಜೋಗಿ, ಗುಂಡಪ್ಪ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಬೆನಕನಹಳ್ಳಿ ಗ್ರಾಮಕ್ಕೆ ಜೆಡಿಎಸ್ ಪಕ್ಷದ ಸೇರ್ಪಡೆ ಕಾರ್ಯಕ್ರಮಕ್ಕೆ ಆಗಮಿಸಿದ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ಅವರಿಗೆ ಗ್ರಾಮಸ್ಥರು ಗ್ರಾಮದ ಪ್ರಮುಖ ರಸ್ತೆಗಳ ಮೂಲಕ ಭವ್ಯ ಮೆರವಣಿಗೆ ಮಾಡಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

40 mins ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

11 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

11 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

11 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago