ಬೆಳಗಾವಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಎಂದಿನಂತೆ ಬಿಜೆಪಿ ವಿರುದ್ಧ ಹರಿಹಾಯ್ದರು. ಈ ವೇಳೆ ಬಾಯಿ ತಪ್ಪಿ ಸಾಲಮನ್ನಾ ಮಾಡಿದ್ದು ನರೇಂದ್ರ ಮೋದಿ ಎಂದು ಹೇಳಿದರಾದರೂ, ತಕ್ಷಣವೇ ಅದನ್ನು ತಿದ್ದಿಕೊಂಡರು.
ಸಾಲಮನ್ನಾ ಮಾಡಿದ್ದು ಮನಮೋಹನ್ ಸಿಂಗ್ ಎಂದು ಹೇಳಿದರು. ಐದು ರಾಜ್ಯಗಳಲ್ಲಿ ಸೋತ ಬಳಿಕ ಕೃಷಿ ಕಾಯ್ದೆ ವಾಪಸ್ ಪಡೆಯಲಾಗಿದೆ ಎಂದು ಟೀಕಿಸಿದರು. ಕೃಷಿ ಕಾಯ್ದೆ ವಿರೋಧಿಸಿ ನಡೆದ ಹೋರಾಟದಲ್ಲಿ 700 ರೈತರು ಮೃತಪಟ್ಟರು. ಅವರ ಸಾವುಗಳಿಗೆ ನರೇಂದ್ರ ಮೋದಿ. ಅವರಿಗೆ ರೈತರ ಬಗ್ಗೆ ಕಾಳಜಿಯಾಗಲಿ, ಅವರ ಬಗ್ಗೆ ಮಾತನಾಡುವ ನೈತಿಕತೆಯಾಗಲಿ ಇಲ್ಲ. ನಾನು ಕೊಟ್ಟ ಕ್ಷೀರ ಭಾಗ್ಯ, ಇಂದಿರಾ ಕ್ಯಾಂಟೀನ್, ಶಾದಿ ಭಾಗ್ಯ ನಿಲ್ಲಿಸಿದ್ದಾರೆ ಎಂದೂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
2023 ರಲ್ಲಿ ನಮ್ಮ ಪಕ್ಷ ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಬರುತ್ತೆ. ಅದನ್ನು ಯಾರಿಂದಲೂ ತಪ್ಪಿಸಲು ಆಗುವುದಿಲ್ಲ. ರಾಜ್ಯದ ಜನ ಈ ಸರ್ಕಾರ ಯಾವಾಗ ತೊಲಗುತ್ತೋ ಎಂದು ಶಾಪ ಹಾಕುತ್ತಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಗಿದೆ. ಈ ಅವಧಿಯಲ್ಲಿ ಇಬ್ಬರು ಮುಖ್ಯಮಂತ್ರಿಗಳನ್ನು ಕಾಣಬೇಕಾಯಿತು. ಅಧಿಕಾರಕ್ಕೆ ಬಂದ ನಂತರ ಇವರು ಒಂದೇ ಒಂದು ಕೆಲಸವನ್ನಾದರೂ ಮಾಡಿದ್ದಾರಾ? ನಾನು ಮುಖ್ಯಮಂತ್ರಿ ಆಗಿದ್ದಾಗ ವರ್ಷಕ್ಕೆ 3 ಲಕ್ಷ ಮನೆ ಕೊಟ್ಟಿದ್ದೆ. ನಮ್ಮ ಸರ್ಕಾರವಿದ್ದಾಗ 7 ಕೆಜಿ ಅಕ್ಕಿ ಕೊಡ್ತಿದ್ದೆ, ಈಗ 5 ಕೆಜಿ ಕೊಡ್ತಿದ್ದಾರೆ ಎಂದು ಟೀಕಿಸಿದರು.
ನಾವು ಘೋಷಿಸಿದ ಕಾರ್ಯಕ್ರಮಗಳಿಗೆ ಇವರು ಗುದ್ದಲಿ ಪೂಜೆ ಮಾಡ್ತಿದ್ದಾರೆ. ವಿವೇಕರಾವ್ ಪಾಟೀಲ್ ಗೆ ಸಿದ್ದರಾಮಯ್ಯ ಟಿಕೆಟ್ ಕೊಡದೇ ಮೋಸ ಮಾಡಿದ್ರು ಅಂತಾ ರಮೇಶ್ ಜಾರಕಿಹೊಳಿ ಹೇಳ್ತಿದ್ದಾರೆ. ನಮ್ಮ ಅಭ್ಯರ್ಥಿ ವಿರುದ್ಧ ವಿವೇಕರಾವ್ ಪಾಟೀಲ್ ಗೆದ್ದರಾದರೂ, ಗೆದ್ದ ಬಳಿಕ ಅವರು ನಮ್ಮ ಪಕ್ಷಕ್ಕೆ ಬರಲಿಲ್ಲ. ಪಕ್ಷಕ್ಕೆ ಬರದೇ ಇರುವವರಿಗೆ ಟಿಕೆಟ್ ಕೊಡಬೇಕೆ? ಅವರು ರಮೇಶ್ ಜಾರಕಿಹೊಳಿ ಅನುಯಾಯಿ. ನಿಮಗೆ ಅಷ್ಟೊಂದು ಪ್ರೀತಿ ಇದ್ದಿದ್ದರೆ ತಮ್ಮನ ಬದಲು ವಿವೇಕರಾವ್ ಪಾಟೀಲರನ್ನೇ ನಿಲ್ಲಿಸಬೇಕಿತ್ತು. ಕಾಂಗ್ರೆಸ್‌ನಿಂದ ಮೂವರು ಕುರುಬರಿಗೆ ಟಿಕೆಟ್ ಕೊಟ್ಟಿದ್ದೇವೆ. ನೀವು ಎಷ್ಟು ಜನರಿಗೆ ಟಿಕೆಟ್ ಕೊಟ್ಟಿದೀರಿ ಎಂದು ಪ್ರಶ್ನಿಸಿದರು.
ಸ್ವಾರ್ಥಕ್ಕಾಗಿ, ಹೆದರಿಸಿ ರಾಜಕಾರಣ ಮಾಡುವುದಲ್ಲ. ಸ್ವಾತಂತ್ರ್ಯಕ್ಕಾಗಿ ಒಬ್ಬರಾದರೂ ಹುತಾತ್ಮರಾಗಿದ್ದಾರಾ? ಬಿಜೆಪಿಯವರು ನಮಗೆ ದೇಶ ಭಕ್ತಿ ಹೇಳಿಕೊಡ್ತಿದ್ದಾರೆ. ಗಾಂಧೀಜಿಯವರನ್ನು ಕೊಂದು ಹಾಕಿದವರು ಇದೇ ಆರ್ಎಸ್ಎಸ್ನವರು. ಗೋಡ್ಸೆ ಪಳೆಯುಳಿಕೆಗಳೇ ಈಗಿನ ಆರ್‌ಎಸ್‌ಎಸ್, ಬಿಜೆಪಿಯವರು. ನರೇಂದ್ರ ಮೋದಿ ಆರ್ಎಸ್ಎಸ್ನಿಂದ ಬಂದವರು. ಈ ಬಸವರಾಜ ಬೊಮ್ಮಾಯಿ ಆರ್ಎಸ್ಎಸ್ನಿಂದ ಬಂದಿಲ್ಲ. ಲಾಟರಿ ಹೊಡೆದು ಮುಖ್ಯಮಂತ್ರಿ ಆಗಿದ್ದಾರೆ. ಇವರನ್ನು ಕಿತ್ತು ಹಾಕಲು ಈಶ್ವರಪ್ಪ ಮಾತಾಡ್ತಿದ್ದಾನೆ ಎಂದು ಏಕವಚನದಲ್ಲಿ ಟೀಕಿಸಿದರು..
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…