ಕಲಬುರಗಿ: ನನ್ನ ಆರಾಧೀಸ ಬೇಡಿ ನನ್ನ ಅನುಯಾಯಿ ಆಗಿ ಎಂದು ಡಾ. ಬಾಬಾ ಸಾಹೇಬ್ ಭೀಮರಾವ ಅಂಬೇಡ್ಕರ್ ಹೇಳಿದ್ದಾರೆ ಆದರೆ ನಾವು ಇಂದು ಅವರನ್ನು ಆರಾಧನೆ ಮಾಡುತ್ತಿದ್ದೇವೆ ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ಗ್ರಂಥಾಲಯದ ಮುಖ್ಯ ಗ್ರಂಥಪಾಲಕ ಡಾ. ಸುರೇಶ್ ಜಂಗೆ ಹೇಳಿದರು.
ಗುಲ್ಬರ್ಗ ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ 65ನೇ ಮಹಾಪರಿನಿಬ್ಬಾಣ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಂಬೇಡ್ಕರ್ ಅವರನ್ನು ಪೂಜಿಸಿದರೆ ಸಾಲದು ಅವರ ತತ್ವಗಳು, ಚಿಂತನೆಗಳನ್ನು ಪಾಲಿಸಬೇಕು.
ಅಂಬೇಡ್ಕರ್ ಎಂಬ ಆ ಮಹಾನ್ ದೇಶಪ್ರೇಮಿಯ ಅಂತಹ ದೇಶಪ್ರೇಮದ ಸಾಂಧರ್ಭಿಕ ನಿಲುವುಗಳಿಂದ ಭಾರತ ದೇಶ ಸಧ್ಯ ಇಂದು ಇಡೀ ವಿಶ್ವದ ಅತ್ಯಂತ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಮೈದಳೆದಿದೆ. ಈ ನಿಟ್ಟಿನಲಿ ಅಂಬೇಡ್ಕರರ ದೇಶಪ್ರೇಮ ಸದಾ ಪ್ರಾತಃಸ್ಮರಣೀಯ. . ಬಾಬಾಸಾಹೇಬ್ ಅಂಬೇಡ್ಕರ್. ಈ ಹೆಸರೇ ಕೋಟ್ಯಂತರ ಜನರಿಗೆ ಸ್ಪೂರ್ತಿ. ದಮನಿತರ ದನಿಯಾಗಿ, ಶೋಷಿತರಿಗೆ ಕಿವಿಯಾಗಿ, ಅವರೆಲ್ಲರಿಗೂ ಸ್ವಾಭಿಮಾನ ಬದುಕಿನ ದಾರಿ ತೋರಿಸಿದ ಧೀಮಂತ ನಾಯಕ ಆಗಿದ್ದಾರೆ.
ಅನ್ಯಾಯ, ಅಸಮಾನತೆ ಹಾಗೂ ಶೋಷಣೆಗಳ ವಿರುದ್ಧದ ಎಲ್ಲ ಚಳವಳಿಗಳಿಗೆ ಇಂದಿಗೂ ಡಾ. ಅಂಬೇಡ್ಕರ್ ಅವರ ಚಿಂತನೆಗಳೇ ಬಳುವಳಿ. ಬಾಬಾಸಾಹೇಬ್ ರವರ ಸ್ವಂತ ಗ್ರಂಥಾಲಯವಾದ ” ರಾಜಗ್ರಿಹ” ಸುಮಾರು 50,000ಕ್ಕೂ ಸಂಖ್ಯೆಗಿಂತ ಅಧಿಕ ಪುಸ್ತಕಗಳನ್ನು ಹೊಂದಿದ್ದು, ಇಡೀ ವಿಶ್ವದ ಅತಿ ದೊಡ್ಡ ಖಾಸಗಿ ಗ್ರಂಥಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಗ್ರಂಥಾಲಯನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.
ಡಾ. ಖೇಮಣ್ಣ ಅಲ್ದಿ, ಡಾ. ಪ್ರವೀಣ್ ಕುಮಾರ್ ಕುಂಬಾರ, ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಡಾ. ರಾಜಕುಮಾರ ಎಂ. ದಣ್ಣೂರ ನಿಂಗಪ್ಪ ಕರನಾಳ ಮತ್ತು ಗ್ರಂಥಾಲಯ ಸಿಬ್ಬಂದಿ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…