ಭಾಲ್ಕಿ: ಶ್ರೀ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜು ಕರಡ್ಯಾಳ ಮಕ್ಕಳ ಸಾಧನೆಯನ್ನು ಕರ್ನಾಟಕ ಘನ ಸರಕಾರದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಅವರು ಶ್ಲಾಘೀಸಿದ್ದಾರೆ. ಗಡಿಭಾಗದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಇರುವ ಮಕ್ಕಳಿಗೆ ಭಾಲ್ಕಿ ಹಿರೇಮಠದ ಪೂಜ್ಯರಾದ ಡಾ.ಬಸವಲಿಂಗ ಪಟ್ಟದ್ದೇವರು ಒಳ್ಳೆಯ ಸಂಸ್ಕಾರ ಸಹಿತ ಶಿಕ್ಷಣವನ್ನು ನೀಡುತ್ತಿರುವುದು ಅಭಿನಂದನಾರ್ಹವಾಗಿದೆ. ಪೂಜ್ಯರು ಗಡಿಭಾಗದಲ್ಲಿ ನಾಡು ಮತ್ತು ರಾಷ್ಟ್ರ ಕಟ್ಟುವ ಕೆಲಸವನ್ನು ಅತ್ಯಂತ ನಿಷ್ಠೆಯಿಂದ ಮಾಡುತ್ತಿದ್ದಾರೆ. ಪೂಜ್ಯರ ಶೈಕ್ಷಣಿಕ ಸೇವೆಗೆ ನಮ್ಮ ಸರಕಾರದಿಂದ ಸಾವಿರ ಸಾವಿರ ಅಭಿನಂದನೆಯನ್ನು ಸಲ್ಲಿಸುತ್ತೇವೆ ಎಂದು ನುಡಿದರು.
ಪರಮಪೂಜ್ಯ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರ ಸಾನಿಧ್ಯ ವಹಿಸಿದ್ದರು. ಪರಮಪೂಜ್ಯ ಶ್ರೀ ಗುರುಬಸವ ಪಟ್ಟದ್ದೇವರು ನೇತೃತ್ವ ವಹಿಸಿದ್ದರು. ಕೇಂದ್ರ ರಾಜ್ಯ ಸಚಿವರಾದ ಭಗವಂತ ಖೂಬಾ, ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ, ನಗರ ಸಭೆ ಅಧ್ಯಕ್ಷರು, ಬಸವರಾಜ ವಂಕೆ, ಕಾಲೇಜಿನ ಪ್ರಾಚಾರ್ಯ ಬಸವರಾಜ ಮೋಳಕೆರೆ ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…