ಬಿಸಿ ಬಿಸಿ ಸುದ್ದಿ

ಡಾ.ಅಂಬೇಡ್ಕರ್ ಮನುಕುಲದ ಉದ್ಧಾರಕ: ಲೋಹಿತ್ ಕಟ್ಟಿ

ಶಹಾಬಾದ: ಭಾರತಕ್ಕೊಂದು ಸಂವಿಧಾನವನ್ನು ನಿರ್ಮಿಸಿ, ಆಡಳಿತವನ್ನು ಜನರ ಕೈಗೆ ಕೊಟ್ಟ ಕಾನೂನು ನಿರ್ಮಾಪಕ ಡಾ.ಅಂಬೇಡ್ಕರ್ ಮನುಕುಲದ ಉದ್ಧಾರಕ ಎಂದು ಸಾಮಾಜಿಕ ಚಿಂತಕ ಲೋಹಿತ್ ಕಟ್ಟಿ ಹೇಳಿದರು.

ಅವರು ಸೋಮವಾರ ನಗರದ ಹಳೆಶಹಾಬಾದ ವೀರಶೈವ ರುದ್ರಭೂಮಿಯಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಆಯೋಜಿಸಲಾದ ಡಾ|ಬಿ.ಆರ್.ಅಂಬೇಡ್ಕರ್ ರವರ ಮಹಾಪರಿನಿರ್ವಾಣ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ನಿಮಿತ್ತ ಜನರಲ್ಲಿ ಸ್ಮಶಾನದ ಕುರಿತು ಹೆದರಿಕೆ, ತಪ್ಪು ತಿಳುವಳಿಕೆ ನಿವಾರಣೆ ಮಾಡುವದು, ಸ್ಮಶಾನಕ್ಕೆ ಹೋಗಿ ಬಂದರೆ ಅದು ಮಾಡಬೇಕು, ಇದು ಮಾಡಬಾರದು ಮುಂತಾದವುಗಳ ಕುರಿತು ಇರುವ ತಪ್ಪು ತಿಳುವಳಿಕೆ ಹೋಗಲಾಡಿಸುವದಕ್ಕೆ ಮತ್ತು ಸ್ಮಶಾನದಲ್ಲಿ ಉಪಹಾರ ಸೇವಿಸಿದರೇ ಏನು ಆಗಲ್ಲ ಎಂಬ ವೈಜ್ಞಾನಿಕ ಸತ್ಯವನ್ನು ತಿಳಿಸುವುದಕ್ಕೆ ಈ ಕಾರ್ಯಕ್ರಮ ಆಯೋಜಿಸಿರುವುದು ಪ್ರಸ್ತುತ ಎಂದರು.

ಭೌದ್ಧ ಮಹಾಸಭಾದ ಅಧ್ಯಕ್ಷ ಸುರೇಶ ಮೆಂಗನ್ ಮಾತನಾಡಿ, ಚುನಾವಣೆಗೆ ಒಂದು ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಎಲ್ಲರೂ ದೇವಸ್ಥಾನ, ಜ್ಯೋತಿಷಿಗಳ ಬಳಿ ಹೋಗುತ್ತಾರೆ. ಎಲ್ಲರಿಗೂ ಗೆಲ್ಲುತ್ತೀರಿ ಎಂದೇ ಅವರು ಹೇಳಿರುತ್ತಾರೆ. ಸೋತ ನಂತರ ನೀವು ಮಾಡಿದ ಪೂಜೆಯಲ್ಲಿ ದೋ?ವಿದೆ ಎನ್ನುತ್ತಾರೆ. ಪೂಜೆ, ಪುನಸ್ಕಾರ, ಜ್ಯೋತಿ?ದಿಂದ ಗೆಲುವು ಸಾಧ್ಯವಿಲ್ಲ. ಜನರು ನಮ್ಮನ್ನು, ನಮ್ಮ ಕೆಲಸವನ್ನು ಮೆಚ್ಚಿ ಮತ ನೀಡಿದರೆ ಮಾತ್ರ ಗೆಲ್ಲಲು ಸಾಧ್ಯ ಎಂಬ ಅರಿವು ಬರಬೇಕು.ಅದನ್ನು ಬಿಟ್ಟು ಮೌಢ್ಯಕ್ಕೆ ದಾಸರಾಗಬಾರದು.ಮೌಢ್ಯದಿಂದ ಹೊರಬಂದಾಗ ಮಾತ್ರ ಸುಂದರ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದರು.

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಅಧ್ಯಕ್ಷ ಗಿರಿಮಲ್ಲಪ್ಪ ವಳಸಂಗ ಮಾತನಾಡಿ, ಅಂಬೇಡ್ಕರ್ ಅವರು ಕೇವಲ ದಲಿತರಿಗೆ ಮಾತ್ರ ನಾಯಕರಲ್ಲ. ಅವರು ಸಮಾಜದಲ್ಲಿ ಶೋಷಣೆಗೆ ಒಳಗಾದ ಎಲ್ಲಾ ವರ್ಗದ ಧೀಮಂತ ನಾಯಕ. ಇಂದು ನಮಗರ ಅನ್ಯಾಯದ ವಿರುದ್ಧ ಮಾತನಾಡುವ ಹಕ್ಕು ಹಾಗೂ ಮತದಾನದ ಹಕ್ಕು ಸಿಕ್ಕಿದೆ ಎಂದರೆ ಅದು ಅಂಬೇಡ್ಕರ್ ಬರೆ ಸಂವಿಧಾನದಿಂದಲೇ ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಪ್ರಧಾನ ಕಾರ್ಯದರ್ಶಿ ಮಲ್ಲಿನಾಥ ಪಾಟೀಲ, ಶರಣಗೌಡ ಪಾಟೀಲ, ಬಸವರಾಜ ಪಾಟೀಲ ನರಿಬೋಳಿ, ಮಲ್ಲಿಕಾರ್ಜುನ ಚಂದನಕೇರಿ, ರಮೇಶ ಜೋಗದನಕರ,ಬಸವರಾಜ ಮಯೂರ, ಬಸವರಾಜ ಮದ್ರಿಕಿ, ಕುರುಬ ಸಮಾಜದ ತಾಲೂಕಾಧ್ಯಕ್ಷ ಮಲ್ಕಣ್ಣ ಮುದ್ದಾ, ಬೆಳ್ಳಪ್ಪ ಕಣದಾಳ, ಬಸವರಾಜ ದಂಡಗುಲಕರ್, ವಿಜಯಕುಮಾರ ಕಂಠಿಕಾರ, ಚನ್ನಬಸಪ್ಪ ಸಿನ್ನೂರ್,ಗಿರಿರಾಜ ಪವಾರ,ಗಣೇಶ ಜಾಯಿ, ಶಿವಶಾಲಕುಮಾರ ಪಟ್ಟಣಕರ್, ಕುಪೇಂದ್ರ ತುಪ್ಪದ್, ರಮೇಶ ಮೀರಜಕರ್, ಲಾಲ ಅಹ್ಮದ್ ಸೇರಿದಂತೆ ಅನೇಕರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

9 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

19 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

19 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

19 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago