ಕಲಬುರಗಿ: ನಗರದ ಕನ್ನಡ ಭವನಕ್ಕೆ ಭೆಟ್ಟಿ ನೀಡಿದ ಹಾರಕೂಡದ ಶ್ರೀ ಡಾ.ಚನ್ನವೀರ ಶಿವಾಚಾರ್ಯ ಮಹಾಸ್ವಾಮಿಜೀ ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗೆ ಅಧ್ಯಕ್ಷರಾಗಿ ಆಯ್ಕೆಯಾದ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರನ್ನು ವಿಶೇಷವಾಗಿ ಸತ್ಕರಿಸಿ ಆಶೀರ್ವದಿಸಿದರು.
ನಂತರ ಮಾತನಾಡಿದ ಶ್ರೀ ಡಾ.ಚನ್ನವೀರ ಶಿವಾಚಾರ್ಯರು, ಯಾವುದೇ ಪಕ್ಷ, ಜಾತಿ, ಧರ್ಮ ಮರೆತು ಎಲ್ಲರನ್ನೂ ಒಗ್ಗೂಡಿಸುವ ಸಾಮರ್ಥ್ಯ ಕನ್ನಡ ಭಾಷೆಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನವರು ಕನ್ನಡ ಭಾಷೆ ಮತ್ತು ಸಂಸ್ಕೃತಿ ಬೆಳವಣಿಗೆಗೆ ಶ್ರಮಿಸಲಿ ಎಂದು ಹಾರೈಸಿದರು.
ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಕನ್ನಡ ನಾಡು-ನುಡಿ, ನೆಲ-ಜಲದ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ ಆಗಿದೆ. ಹಾಗಾಗಿ, ಪರಿಷತ್ತಿನ ಘನತೆ ಉಳಿಸುವ ಮತ್ತು ಬೆಳೆಸುವ ಕಾರ್ಯ ಸದಾ ಕಾಲ ಮಾಡುತ್ತೇವೆ ಎಂದರು. ಇದಕ್ಕೆ ಸಾಹಿತಿಗಳು, ಕವಿ-ಕಲಾವಿದರು, ಶಿಕ್ಷಕರ ಸಹಕಾರ ಅಗತ್ಯವಿದೆ ಎಂದರು.
ಗೌರವ ಕಾರ್ಯದರ್ಶಿಗಳಾದ ಸುರೇಶ ಬಡಿಗೇರ, ಶಿವರಾಜ ಅಂಡಗಿ, ಗೌರವ ಕೋಶಾಧ್ಯಕ್ಷ ಡಾ.ಶರಣರಾಜ್ ಛಪ್ಪರಬಂದಿ, ಪ್ರಮುಖರಾದ ಪ್ರಭುಲಿಂಗ ಮೂಲಗೆ, ರವೀಂದ್ರಕುಮಾರ ಭಂಟನಳ್ಳಿ, ಜಗದೀಶ ಮರಪಳ್ಳಿ, ರಾಜೇಂದ್ರ ಮಾಡಬೂಳಕರ್, ವಿಶ್ವನಾಥ ತೊಟ್ನಳ್ಳಿ, ಬಸವರಜ ತೋಟದ, ವಿನೋದ ಜೇನವೇರಿ, ಎಂ.ಎಸ್.ಪಾಟೀಲ ನರಿಬೋಳ, ಡಾ.ಬಾಬುರಾವ ಶೇರಿಕಾರ, ಮಂಜುನಾಥ ಕಂಬಾಳಿಮಠ, ಸಂತೋಷ ಕುಡಳ್ಳಿ, ಧರ್ಮಣ್ಣ ಧನ್ನಿ, ವಿದ್ಯಾಸಾಗರ ದೇಶಮುಖ, ಈರಣ್ಣಾ ನಾವಿ, ಹೆಚ್.ಎಸ್.ಬರಗಾಲಿ, ಬಿ.ಎಂ.ಪಾಟೀಲ ಕಲ್ಲೂರ, ಶ್ರೀಕಾಂತ ಪಾಟೀಲ ತಿಳಗೂಳ, ನಾಗೇಂದ್ರಪ್ಪ ಮಾಡ್ಯಾಳೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…