ಬಿಸಿ ಬಿಸಿ ಸುದ್ದಿ

ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷರ ಭೇಟಿ ಮಾಡಿದ ಅರ್ಷದ್ ದಖನಿ

ಸುರಪುರ: ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷರಾದ ಎಮ್.ಡಿ ಶಫಿ ಸಅದಿ ಅವರನ್ನು ಟಿಪ್ಪು ಸುಲ್ತಾನ್ ಯುವಕ ಸಂಘದ ರಾಷ್ಟ್ರೀಯ ಅಧ್ಯಕ್ಷ ಅರ್ಷದ ದಖನಿ ಬೆಂಗಳೂರಿನಲ್ಲಿ ಭೇಟಿ ಮಾಡಿ ವಕ್ಫ್ ಆಸ್ತಿ ರಕ್ಷಣೆಯ ಕುರಿತು ಕ್ರಮಕ್ಕಾಗಿ ಮೌಖಿಕವಾಗಿ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಸುರಪುರ ಇತಿಹಾಸದ ಕುರಿತಾದ ಕೃತಿಯನ್ನು ನೀಡಿ ಸನ್ಮಾನಿಸಿ ಗೌರವಿಸಿದರು.ನಂತರ ಮಾತನಾಡಿ,ರಾಜ್ಯದಲ್ಲಿನ ಹಲವಾರು ರಾಜರು ತಮ್ಮ ಸಾಮ್ರಾಜ್ಯವನ್ನು ಉಳಿಸಿಕೊಳ್ಳಲು ಹೋರಾಟವನ್ನು ಮಾಡಿದ್ದಾರೆ.

ಆದರೆ ಸುರಪುರ ಅರಸರು ಅದರಲ್ಲಿ ಮುಖ್ಯವಾಗಿ ನಾಲ್ವಡಿ ರಾಜಾ ವೆಂಕಟಪ್ಪ ನಾಯಕರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟವನ್ನು ಮಾಡಿದರು.೧೮೫೭ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಮೊದಲಿಗೆ ಆರಂಭವಾಗಿದ್ದು ಸುರಪುರ ಅರಸರಿಂದ ಅಂತಹ ಅರಸರ ಕುರಿತಾದ ಇತಿಹಾಸದ ಕೃತಿಗಳು ಎಲ್ಲರು ಓದಿ ತಿಳಿಯಬೇಕಿದೆ. ಅದಕ್ಕಾಗಿ ಮುಂದಿನ ದಿನಗಳಲ್ಲಿ ಎಲ್ಲಾ ಇಲಾಖೆಯ ಕಚೇರಿಗಳಿಗೂ ಸುರಪುರ ಇತಿಹಾಸದ ಕೃತಿಗಳನ್ನು ವಿತರಿಸಲಾಗುವುದು ಎಂದರು.

ಅಲ್ಲದೆ ಇಂತಹ ಭವ್ಯವಾದ ಇತಿಹಾಸವನ್ನು ಹೊಂದಿರುವ ಸುರಪುರಕ್ಕೆ ಒಮ್ಮೆ ಭೇಟಿ ನೀಡುವಂತೆ ವಕ್ಫ್ ಅಧ್ಯಕ್ಷರಿಗೆ ಮನವಿ ಮಾಡಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

11 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

21 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

21 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

21 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago