12 ರಿಂದ ಕನ್ನಡ ಸಾಹಿತ್ಯ ಪರಿಷತ್ ಬೃಹತ್ ಸದಸ್ಯತ್ವ ಅಭಿಯಾನ: ವಿಜಯಕುಮಾರ ತೇಗಲತಿಪ್ಪಿ

ಕಲಬುರಗಿ: ಜಿಲ್ಲೆಯಾದ್ಯಂತ ವರ್ಷವಿಡೀ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಕಾರ್ಯ ಚಟುವಟಿಕೆಗಳಿಗೆ ಹಾಗೂ ಬೃಹತ್ ಸದಸ್ಯತ್ವ ಅಭಿಯಾನಕ್ಕೆ ೧೨ ರಂದು ಬೆಳಗ್ಗೆ ೧೦.೩೦ ಕ್ಕೆ ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಕೋವಿಡ್ ನಿಯಮಗಳು ಅನುಸರಿಸುವುದರ ಮೂಲಕ ಚಾಲನೆ ಸಿಗಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ನೂತನ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದರು.

ನಗರದ ಕನ್ನಡ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ತೇಗಲತಿಪ್ಪಿ ಅವರು, ಕನ್ನಡ ನಾಡಿನ ಸಂಸ್ಕೃತಿ, ಆಚಾರ, ವಿಚಾರಗಳನ್ನು ಇಂದಿನ ವಿದ್ಯಾರ್ಥಿ ಮತ್ತು ಯುವ ಜನತೆಗೆ ತಲುಪಿಸುವ ನಿಟ್ಟಿನಲ್ಲಿ ಕನ್ನಡ ಭವನದ ಅಂಗಳದಲ್ಲಿ ಸಾಹಿತ್ಯ, ಕಾವ್ಯ ಕಮ್ಮಟ, ವಿಚಾರ ಸಂಕಿರಣ, ಸಂಗೀತ, ಭರತನಾಟ್ಯ, ಚಿತ್ರ ಸಂತೆ, ಚಿತ್ರಕಲೆ ಸ್ಪರ್ಧೆ ಮತ್ತು ಪ್ರದರ್ಶನಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲು ಈಗಾಗಲೇ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಕನ್ನಡ ಕಟ್ಟುವ ಎಲ್ಲ ಸಂಸ್ಥೆಗಳಿಗೆ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ ಗುರುವಿನ ಸ್ಥಾನದಲ್ಲಿ ನಿಂತು ಕಾರ್ಯ ಮಾಡಲಿದೆ ಎಂದರು.

ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್‌ನ ಸದಸ್ಯರು ಕನ್ನಡದ ಸೇವೆ ಮಾಡುವ ಜವಾಬ್ದಾರಿ ನಮಗೆ ವಹಿಸಿಕೊಟ್ಟಿದ್ದಾರೆ. ನಿರೀಕ್ಷೆ ಮೀರಿ ಬೆಂಬಲ ನೀಡಿದ್ದಾರೆ. ಅವರ ವಿಶ್ವಾಸಕ್ಕೆ ಚ್ಯುತಿ ಬರದಂತೆ ಕೆಲಸ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಉದಯೋನ್ಮುಖ ಲೇಖಕರ ಪುಸ್ತಕಗಳ ಪ್ರಕಟಣೆ, ಯುವ ಸಾಹಿತಿಗಳಿಗಾಗಿ ಕಥೆ, ಕಾವ್ಯ ಕಮ್ಮಟ, ಕಾರ್ಯಾಗಾರ, ವಿಚಾರ ಸಂಕಿರಣ ಆಯೋಜಿಸಲಾಗುವುದು.ಜತೆಗೆ ವಿದ್ಯಾರ್ಥಿಗಳು, ಜನಸಾಮಾನ್ಯರ ಪಾಲ್ಗೊಳ್ಳುವಿಕೆ ಹೆಚ್ಚಿಸುವ ವಿವಿಧ ಕಾರ್ಯಕ್ರಮಗಳು ಸಂಘಟಿಸುವುದಾಗಿ ಹೇಳಿದರು.

ಕನ್ನಡ ಭವನದಲ್ಲಿನ ಬಾಪುಗೌಡ ದರ್ಶನಾಪೂರ ರಂಗಮಂದಿರದ ಪುನಶ್ಚೇತನಕ್ಕೆ ಇನ್ನೂ ಬಹಳಷ್ಟು ಕಾರ್ಯ ಮಾಡಬೇಕಾಗಿರುವುದರಿಂದ ಅದಕ್ಕಾಗಿ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ದತ್ತಾತ್ರೇಯ ಪಾಟೀಲ ರೇವೂರ ಅವರೊಂದಿಗೆ ಈಗಾಗಲೇ ಚರ್ಚಿಸಲಾಗಿದ್ದು, ಅದಕ್ಕೆ ಬೇಕಾದ ಸವಲತ್ತುಗಳು ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಆ ಕಾರ್ಯ ಜಾರಿಗೆ ಬರಲಿದೆ. ಕಲಬುರಗಿಯ ಕನ್ನಡ ಭವನಕ್ಕೆ ಹೊಸ ಕಳೆ ತಂದು ಕೊಡುವ ನಿಟ್ಟಿನಲ್ಲಿ ಪರಿಷತ್ತಿನ ಹೊಸ ಪದಾಧಿಕಾರಿಗಳು ಉತ್ತಮ ಕಾರ್ಯ ಮಾಡಲಿದ್ದಾರೆ ಎಂದು ವಿಶ್ವಾಸವೂ ಇದೆ.

ಸಾರ್ವಜನಿಕರ ಸಹಭಾಗಿತ್ವದಲ್ಲಿ ಕನ್ನಡ ಭವನದ ಅಂಗಳದಲ್ಲಿ ಬಯಲು ರಂಗಮಂದಿರದ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು. ಆ ಮೂಲಕ ರಂಗ ಪ್ರಯೋಗಗಳು ನಡೆಯುವುದು. ಡಿ.೧೨ ರ ಬೆಳಗ್ಗೆ ೧೦.೩೦ ಕ್ಕೆ ಜರುಗಲಿರುವ ಕಾರ್ಯಕ್ರಮಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಚಾಲನೆ ನೀಡಲಿದ್ದು, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಸುರೇಶ ಬಡಿಗೇರ, ಶಿವರಾಜ್ ಅಂಡಗಿ, ಗೌರವ ಕೋಶಾಧ್ಯಕ್ಷ ಶರಣರಾಜ್ ಛಪ್ಪರಬಂದಿ ವೇದಿಕೆ ಮೇಲೆ ಉಪಸ್ಥಿತರಿರುವರು.

ಶಾಲು, ಹೂವಿನ ಹಾರ ಬದಲಾಗಿ ಕನ್ನಡ ಪುಸ್ತಕ ಕೊಡಿ: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಈಗಾಗಲೇ ಘೋಷಿಸಿಕೊಂಡಂತೆ ಅಂದಿನ ಕಾರ್ಯಕ್ರಮದಲ್ಲಿ ಶಾಲು-ಹೂವಿನ ಹಾರಗಳ ಬದಲಾಗಿ ಕನ್ನಡದ ಪುಸ್ತಕಗಳು ನೀಡಿ ಗೌರವಿಸಬೇಕೆಂದು ಇದೇ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.

ಪರಿಷತ್ತಿನ ಸೇವಾ ಕಾರ್ಯ: ಕೋವಿಡ್‌ನಿಂದ ಸಮಾಜ ಮುಕ್ತಗೊಳಸಲಿಕ್ಕಾಗಿ ಪರಿಷತ್ ಕೂಡ ಸಾಮಾಜಿಕ ಸೇವಾ ಕಾರ್ಯಕ್ಕೆ ಕೈ ಹಾಕಿದ್ದು, ಒಂದು ತಿಂಗಳ ವರೆಗೆ ಪ್ರತಿ ಸೋಮವಾರ, ಮಂಗಳವಾರ ಮತ್ತು ಶುಕ್ರವಾರದಂದು ಕನ್ನಡ ಭವನದಲ್ಲಿ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ನೀಡುವ ವಿಶೇಷ ಸಮಾಜಮುಖಿ ಕಾರ್ಯಕ್ರಮವೊಂದು ರೂಪಿಸಲಾಗಿದೆ. ಸದುಪಯೋಗಪಡಿಸಿಕೊಳ್ಳಲು ಕೋರಿದ್ದಾರೆ.

emedialine

Recent Posts

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

51 mins ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

12 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

14 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

15 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

15 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420