ಬಿಸಿ ಬಿಸಿ ಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಶುಲ್ಕ ಹೆಚ್ಚಳ: ಎಐಡಿಎಸ್‌ಒ ಆಕ್ರೋಶ

ವಾಡಿ: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕವನ್ನು ಹೆಚ್ಚಿಸಿರುವ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕ್ರಮವನ್ನು ಆಲ್ ಇಂಡಿಯಾ ಡೆಮಾಕ್ರೇಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‌ಒ) ಖಂಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಎಐಡಿಎಸ್‌ಒ ನಗರ ಸಮಿತಿ ಅಧ್ಯಕ್ಷ ವೆಂಕಟೇಶ ದೇವದುರ್ಗ ಹಾಗೂ ಕಾರ್ಯದರ್ಶಿ ಗೋವಿಂದ ಯಳವಾರ, ಮಂಡಳಿಯ ತೀರ್ಮಾನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಅತಂತ್ರ ಸ್ಥಿತಿಯಲ್ಲಿದೆ. ತರಗತಿಗಳು ಸರಿಯಾಗಿ ನಡೆಯದೆ ಅಭ್ಯಾಸದ ದಿನಗಳು ಏರುಪೇರು ಅನುಭವಿಸಿವೆ.

ಭೀಕರ ಪ್ರವಾಹದಿಂದಾಗಿ ಶೇ.೭೦ ರಷ್ಟು ಕೃಷಿ ನಷ್ಟದ ತೆಕ್ಕೆಗೆ ಜಾರಿದೆ. ಬಡ ರೈತ ಮತ್ತು ಕೃಷಿ ಕೂಲಿಕಾರ್ಮಿಕರ ಕುಟುಂಬಗಳಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಬಡತನ, ಆರ್ಥಿಕ ಬಿಕ್ಕಟ್ಟು, ಕೋವಿಡ್‌ನಿಂದ ಎದುರಾದ ಸವಾಲುಗಳಿಂದ ಗ್ರಾಮೀಣ ಪೋಷಕರು ತತ್ತರಿಸಿದ್ದಾರೆ. ಇಂತಹ ಕುಟುಂಬಗಳ ಸಾವಿರಾರು ವಿದ್ಯಾರ್ಥಿಗಳು ಪ್ರಾಥಮಿಕ ಹಂತದಲ್ಲೇ ಶಿಕ್ಷಣಕ್ಕೆ ತಿಲಾಂಜಲಿ ಇಟ್ಟು ಉದ್ಯೋಗ ಅರಸಿ, ಮನೆ ನಡೆಸುವ ಜವಾಬ್ದಾರಿ ಹೆಗಲೇರಿಸಿಕೊಂಡಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇಂಥಹ ಕಷ್ಟದಾಯಕ ಪರಸ್ಥಿತಿಯಲ್ಲಿ ಸರಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿ ವೇತನ ಹೆಚ್ಚಿಸಬಹುದಾಗಿತ್ತು. ಸರಕಾರಿ ಶಾಲೆ-ಕಾಲೇಜುಗಳನ್ನು ಹೆಚ್ಚು ಸ್ಥಾಪಿಸಿ ಅಗತ್ಯ ಬೋಧಕರನ್ನು ನೇಮಿಸುವ ಮೂಲಕ ಸಿಕ್ಷಣ ಪಡೆಯಲು ಪೂರಕ ವಾತಾವರಣಕ್ಕೆ ಉತ್ತೇಜನ ನೀಡಬೇಕಿತ್ತು ಎಂದು ಸಲಹೆ ನೀಡಿರುವ ಎಐಡಿಎಸ್‌ಒ ಮುಖಂಡರು, ಸರಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಶೂಲ್ಕವನ್ನು ಏಕಾಏಕಿ ರೂ.೧೦೦ ಹೆಚ್ಚಿಸಿ ಬಡ ಮಕ್ಕಳ ಶಿಕ್ಷಣ ಭವಿಷ್ಯಕ್ಕೆ ಪೆಟ್ಟು ನೀಡಿದೆ ಎಂದು ಟೀಕಿಸಿದ್ದಾರೆ. ಕೂಡಲೇ ಶುಲ್ಕ ಹೆಚ್ಚಳದ ಈ ಶಿಕ್ಷಣ ವಿರೋಧಿ ನೀತಿಯನ್ನು ಕೈಬಿಡಬೇಕು. ನಿರ್ಲಕ್ಷ್ಯ ವಹಿಸಿದರೆ ವಿದ್ಯಾರ್ಥಿಗಳನ್ನು ಸಂಘಟಿಸಿ ಎಐಡಿಎಸ್‌ಒ ರಾಜ್ಯದಾಧ್ಯಂತ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

13 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

23 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

23 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

23 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago