ಕಲಬುರಗಿ : ದೇಶದಾದ್ಯಂತ ಹೆಚ್ಚಾಗುತ್ತಿರುವ ನಿರುದ್ಯೋಗ, ಬೆಲೆ ಏರಿಕೆ ಹಾಗೂ ಸಾಂಸ್ಕೃತಿಕ ಅವನತಿಗಳ ವಿರುದ್ಧದ ಹೋರಾಟವನ್ನು ವ್ಯಾಪಕವಾಗಿ ಬೆಳೆಸುವ ಸಲುವಾಗಿ ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವಜನ ಸಂಘಟನೆ (ಎಐಡಿವೈಓ) ವತಿಯಿಂದ ಡಿಸೆಂಬರ್ 11 ಮತ್ತು 12ರಂದು ಎರಡು ದಿನಗಳ ಕಾಲ ಜಾರ್ಖಂಡ್ ರಾಜ್ಯದ ಘಾಟಶಿಲಾದಲ್ಲಿ 3ನೇ ಅಖಿಲ ಭಾರತ ಯುವಜನ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಅಂಬಿಕಾ ಎಸ್. ಜಿ. ತಿಳಿಸಿದರು.
ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಭವಿಷ್ಯದ ಕ್ರಾತಿಕಾರಿ ಯುವಜನ ಚಳುವಳಿಯನ್ನು ರೂಪಿಸುವ ಸಲುವಾಗಿ ಈ ಸಮ್ಮೇಳನದಲ್ಲಿ ಭಾಗವಹಿಸಲು ದೇಶಾದ್ಯಂತ ವಿವಿಧ ರಾಜ್ಯಗಳಿಂದ ಪ್ರತಿನಿಧಿಗಳು ಜಾರ್ಖಖಂಡ್ ರಾಜ್ಯದ ಘಾಟಶಿಲಾಕ್ಕೆ ಬರುತ್ತಿದ್ದಾರೆ. ದೇಶದ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಪರಿಸ್ಥಿತಿ ದಿನೇ ದಿನೇ ಹದಗೆಡುತ್ತಿದ್ದು, ಇದರ ವಿರುದ್ಧ ಬಲಿಷ್ಠ ಚಳುವಳಿ ಹರಿಯಬಿಡಬೇಕಾಗಿದೆ. ಇದು ಇಂದಿನ ಯುವಕರ ಮುಂದಿರುವ ತುರ್ತು ಕೆಲಸವಾಗಿದೆ. ಆ ನಿಟ್ಟಿನಲ್ಲಿ ಯುವಜನತೆ ಸಕ್ರಿಯವಾಗಿ ಭಾಗವಹಿಸಲು ಆಗಮಿಸುವರು ಎಂದರು.
ಈ ಸಮ್ಮೇಳನವನ್ನು ಸೋಷಲಿಷ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್) ಪಕ್ಷದ ಕೇಂದ್ರ ಸಮಿತಿ ಸದಸ್ಯ ಅರುಣ ಕುಮಾರ್ ಸಿಂಗ್ ಉದ್ಘಾಟಿಸುವರು. ಎಐಡಿವೈಒ ರಾಷ್ಟ್ರೀಯ ಘಟಕದ ಅಧ್ಯಕ್ಷ ರಾಮಾಂಜನಪ್ಪ ಆಲ್ದಳ್ಳಿ, ಪ್ರಧಾನ ಕಾರ್ಯದರ್ಶಿ ಪ್ರತಿಭಾ ನಾಯಕ್ ಅವರು ಭಾಷಣಕಾರರಾಗಿ ಮಾತಾನಾಡುವರು.
ಎಸ್.ಯು.ಸಿ.ಐ(ಸಿ) ಪಾಲಿಟ್ ಬ್ಯೂರೋ ಸದಸ್ಯರಾದ ಕೆ.ರಾಧಾಕೃಷ್ಣ ಅವರು ಸಮಾರೋಪ ಭಾಷಣ ಮಾಡುವರು ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಜಗನ್ನಾಥ್ ಎಸ್. ಎಚ್. ತಿಳಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…