ಬಿಸಿ ಬಿಸಿ ಸುದ್ದಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಶಾಂತಿಯುತ ಮತದಾನ

ಶಹಾಬಾದ: ಕಲಬುರಗಿ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ನಡೆದ ಮತದಾನ ಪ್ರಕ್ರಿಯೆ ಬಹುತೇಖ ಶಾಂತಿಯುತವಾಗಿ ನಡೆದಿದ್ದು, ಶೇ ೯೯.೧೪ರಷ್ಟು ಮತದಾನವಾಗಿದೆ.

ತಾಲೂಕಿನ ಐದು ಮತದಾನ ಕೇಂದ್ರದಗಳಾದ ಶಹಾಬಾದ ನಗರಸಭೆ, ಹೊನಗುಂಟಾ,ಮರತೂರ, ತೊನಸನಹಳ್ಳಿ(ಎಸ್),ಭಂಕೂರ ಗ್ರಾಮ ಪಂಚಾಯತಿಯ ಮತದಾನ ಕೇಂದ್ರದಲ್ಲಿ ಬೆಳಿಗ್ಗೆ ೭ಗಂಟೆಗೆ ಮತದಾನ ಪ್ರಾರಂಭಗೊಂಡಿತು. ಬೆಳಗಿನ ಸಮಯದಲ್ಲಿ ನಗರಸಭೆಯ ಹಾಗೂ ಗ್ರಾಪಂ ಸದಸ್ಯ ಮತದಾರರು ಶೇ೭೫ರಷ್ಟು ಬಂದು ಬಿರುಸಿನ ಮತ ಚಲಾಯಿಸಿದರು. ಮಧ್ಯಾಹ್ನ ಹೊತ್ತಿಗೆ ಮತದಾನ ನೀರಸ ಪ್ರಕ್ರಿಯೆ ಕಂಡುಬಂದಿತು. ನಂತರ ಉಳಿದ ಮತದಾರರು ೨ ಗಂಟೆಯ ಒಳಗಾಗಿ ಮತಚಲಾಯಿಸಿದರು. ನಗರಸಭೆಯ ಹಾಗೂ ಗ್ರಾಪಂ ಸದಸ್ಯರನ್ನು ಕರೆಯಿಸಿ ಮತದಾನ ಮಾಡಲು ವಿವಿಧ ರಾಜಕೀಯ ಪಕ್ಷಗಳು ಹರಸಾಹಸ ಪಟ್ಟರು.

ವಿವಿಧ ಪಕ್ಷದ ಮುಖಂಡರು ಮತದಾರರಿಗೆ ಕರೆ ಮಾಡಿ ಮತ ಚಲಾಯಿಸಲು ಹೇಳುತ್ತಿರುವುದು ಕಂಡು ಬಂದಿತು.ಅಲ್ಲದೇ ತಮ್ಮ ತಮ್ಮ ಅಭ್ಯರ್ಥಿಗಳ ಪರವಾಗಿ ಮತಗಟ್ಟೆಗೆ ಬರುತ್ತಿದ್ದ ಮತದಾರರನ್ನು ಸೆಳೆಯಲು ಕಸರತ್ತು ನಡೆಸುತ್ತಿದ್ದ ದೃಶ್ಯಗಳು ಕಂಡು ಬಂದವು. ಮತದಾನದ ವೇಳೆ ಮಾಸ್ಕ್ ಧರಿಸಲು ಹೇಳಿದಲ್ಲದೇ, ಸಾಮಾಜಿಕ ಅಂತರ ಕಾಪಾಡಿಕೊಂಡು ಮತ ಚಲಾಯಿಸಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿತ್ತು.ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.ಅಲ್ಲದೇ ತಹಸೀಲ್ದಾರ ಸುರೇಶ ವರ್ಮಾ ಹಾಗೂ ನಗರಸಬೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಮತದಾನ ಕೇಂದ್ರಗಳಿಗೆ ಬೇಟಿ ನೀಡಿ ಪರಿಶೀಲಿಸಿದರು. ಮತದಾನ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕೂಡ ಮಾಲಾಗಿತ್ತು.

ಒಟ್ಟು ೧೨೨ ಮತದಾರರಲ್ಲಿ ೧೨೧ ಮತದಾರರು ಮತ ಚಲಾಯಿಸಿದರು. ಅದರಲ್ಲಿ ೫೯ ಪುರುಷ ಮತದಾರರು ಮತ್ತು ೬೨ ಮಹಿಳಾ ಮತದಾರರು ಮತ ಚಲಾಯಿಸಿದರು.ಭಂಕೂರ ಗ್ರಾಪಂಯ ಸದಸ್ಯರೊಬ್ಬರೂ ಮಾತ್ರ ಮತದಾನವನ್ನು ಬಹಿಷ್ಕಾರ ಮಾಡಿರುವುದು ಕಂಡು ಬಂದಿತು.ಇವರೊಬ್ಬರು ಮತದಾನ ಮಾಡಿದ್ದರೇ ನೂರಕ್ಕೆ ನೂರರಷ್ಟು ಮತದಾನವಾಗುತ್ತಿತ್ತು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

17 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago