ಬಿಸಿ ಬಿಸಿ ಸುದ್ದಿ

ಮೊಟ್ಟೆ ವಿತರಣೆ ವಿರೋಧಕ್ಕೆ ಸರ್ಕಾರ ಮಣಿಯಬಾರದು: ಎಸ್ಎಫ್ಐ

ರಾಯಚೂರು : ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಮೊಟ್ಟೆ ವಿತರಣೆ ಮಾಡುತ್ತಿರುವುದಕ್ಕೆ ಕೆಲವು ಸ್ವಾಮೀಜಿಗಳು ಮತ್ತು ಕೆಲ ಮತಾಂಧ ಶಕ್ತಿಗಳು ಮಾಡುತ್ತಿರುವ ವಿರೋಧಕ್ಕೆ ಸರ್ಕಾರ ಮಣಿಯದಿರಲು ಹಾಗೂ ಅಪೌಷ್ಟಿಕತೆ ನಿವಾರಣೆಗಾಗಿ ಮೊಟ್ಟೆ ಮತ್ತು ಬಾಳೆ ಹಣ್ಣಿನ ವಿತರಣೆ ಮುಂದುವರಿಸಲು ಆಗ್ರಹಿಸಿ ಎಸ್ಎಫ್ಐ ರಾಯಚೂರು ಜಿಲ್ಲಾ ಸಮಿತಿಯ ಕಾರ್ಯಕರ್ತರು ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಶಾಲಾ ಮಕ್ಕಳ ಅಪೌಷ್ಠಿಕತೆ ನಿವಾರಣೆಗಾಗಿ ಕಲ್ಯಾಣ ಕರ್ನಾಟಕದ ಕೊಪ್ಪಳ, ಬೀದರ್‌, ಯಾದಗಿರಿ, ಕಲಬುರಗಿ, ಬೀದರ್‌, ಬಳ್ಳಾರಿ, ರಾಯಚೂರು ಸೇರಿದಂತೆ ಬಿಜಾಪುರ ಜಿಲ್ಲೆಯಲ್ಲಿ 1 ರಿಂದ 8ನೇ ತರಗತಿವರೆಗೆ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳು ಅಪೌಷ್ಠಿಕತೆ ಮತ್ತು ರಕ್ತ ಹೀನತೆಯಿಂದ ಬಳಲುತ್ತಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಮೀಕ್ಷಾ ವರದಿಯ ಹಿನ್ನೆಲೆಯಲ್ಲಿ ಮಕ್ಕಳಿಗೆ ಅಪೌಷ್ಠಿಕತೆ ನಿವಾರಣೆಗಾಗಿ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದೊಂದಿಗೆ ವಾರದಲ್ಲಿ 3 ದಿನಗಳ ಕಾಲ ಮೊಟ್ಟೆ ಮತ್ತು ಬಾಳೇಹಣ್ಣು ವಿತರಣೆ ಮಾಡುವ ರಾಜ್ಯ ಸರ್ಕಾರದ ಆದೇಶವನ್ನು ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್‌ಎಫ್‌ಐ) ರಾಯಚೂರು ಜಿಲ್ಲಾ ಸಮಿತಿ ಸ್ವಾಗತಿಸುತ್ತದೆ.

ವಾರದಲ್ಲಿ 3 ದಿನಗಳ ಕಾಲ ಮೊಟ್ಟೆ ಮತ್ತು ಬಾಳೇಹಣ್ಣು ವಿತರಣೆ ಮಾಡುವ ಬಗ್ಗೆ ಕೆಲವು ಮಠದ ಸ್ವಾಮೀಜಿಗಳು ಜಾತಿ ಮತ್ತು ಧಾರ್ಮೀಕತೆ, ನಂಬಿಕೆಯ ಹೆಸರಿನಲ್ಲಿ ಸರ್ಕಾರದ ಆದೇಶವನ್ನು ವಾಪಸ್ಸು ಪಡೆಯಬೇಕೆಂದು ರಾಜ್ಯದ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹಾಕುತ್ತಿರುವುದು ಸರಿಯಲ್ಲ,
ಮೊಟ್ಟೆಯನ್ನು ತಿನ್ನುವುದು ಹಾಗೂ ತಿನ್ನದಿರುವುದನ್ನು ಮಕ್ಕಳ ಆಯ್ಕೆಯಾಗಿರುತ್ತದೆ ಇದನ್ನೇ ತಿನ್ನಬೇಕು, ಇದನ್ನೇ ತಿನ್ನಬಾರದೆಂದು ಆಹಾರದ ಹಕ್ಕಿನ ಮೇಲೆ ಸ್ವಾಮೀಜಿಗಳು ದಾಳಿ ಮಾಡುವುದನ್ನು ಭಾರತ ವಿದ್ಯಾರ್ಥಿ ಫೆಡರೇಷನ್‌(ಎಸ್‌ಎಫ್‌ಐ) ಸಂಘಟನೆಯು ತೀವ್ರವಾಗಿ ಖಂಡಿಸುತ್ತೇವೆ.

ರಾಜ್ಯದ ಅತೀ ಹಿಂದುಳಿದ ಪ್ರದೇಶವಾದ ಹೈದ್ರಾಬಾದ್‌ ಕರ್ನಾಟಕದ ಈಗೀನ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಮಕ್ಕಳ ಅಪೌಷ್ಠಿಕತೆಯ ಪ್ರಮಾಣ ಯಾದಗಿರಿ- ಶೇ. 74, ಕಲಬುರಗಿ- ಶೇ. 72.4, ಬಳ್ಳಾರಿ- ಶೇ. 72.3, ಕೊಪ್ಪಳ- ಶೇ. 70.7, ರಾಯಚೂರು- ಶೇ. 70.6, ಬೀದರ್-‌ ಶೇ. 69.1, ಬಿಜಾಪುರ- ಶೇ. 68ರಷ್ಟು ಈ ರೀತಿಯಲ್ಲಿದೆ, ಈ ಸಮಸ್ಯೆ ನಿವಾರಣೆಗೆ ಸ್ವಾಮೀಜಿಗಳು ಶ್ರಮವಹಿಸಲಿ ಅದನ್ನು ಬಿಟ್ಟು ಜಾತಿ, ಧರ್ಮದ ಹೆಸರಿನಲ್ಲಿ, ಸಮಾಜದಲ್ಲಿ ಅಶಾಂತಿಯನ್ನು ಸೃಷ್ಠಿ ಮಾಡುವ ಸ್ವಾಮೀಜಿಗಳ ಕ್ಷುಲ್ಲಕ ಮನಸ್ಥಿತಿಯನ್ನು ಎಸ್‌ಎಫ್‌ಐ ಸಂಘಟನೆ ವಿರೋಧಿಸುತ್ತದೆ.

ಅಲ್ಲದೇ, ಮೊಟ್ಟೆ ಮತ್ತು ಬಾಳೇಹಣ್ಣು ವಿತರಣೆ ನಂತರ ಇದೇ ತಿಂಗಳಲ್ಲಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿಯಲ್ಲಿ ಶೇ.10 ರಿಂದ 12ರಷ್ಟು ಏರಿಕೆ ಕಂಡುಬಂದಿದೆ. 80ರಷ್ಟು ಮಕ್ಕಳು ಮೊಟ್ಟೆ ಬೇಕೆಂದು ಬೇಡಿಕೆ ಇಟ್ಟಿದ್ದಾರೆ ಸುಮಾರು 14,44,000 ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಮೊಟ್ಟೆ ಸಹಾಯವಾಗಲಿದೆ ಶೇಕಡ 20ರಷ್ಟು ಮಕ್ಕಳಿಗೆ ಬಾಳೇಹಣ್ಣು ವಿತರಣೆ ಮಾಡುವುದರಿಂದ ಯಾವುದೇ ವಿದ್ಯಾರ್ಥಿಗಳಿಗೆ ಬೇಧಭಾವ ತಾರತಮ್ಯ ಮಾಡುವ ಅವಕಾಶವಿರುವುದಿಲ್ಲ ಇದನ್ನು ಸ್ವಾಮೀಜಿಗಳು ಅರ್ಥ ಮಾಡಿಕೊಳ್ಳಲಿ,

ಅಲ್ಲದೇ, ರಾಜ್ಯದ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ವಿವಿಧ ಜಾತಿ-ಧರ್ಮದ ತುಳಿತಕ್ಕೆ ಒಳಗಾದ ಸಮುದಾಯದ, ಬಡವರ, ಹಿಂದುಳಿದ ವರ್ಗ ಸಮುದಾಯದ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ರಾಜ್ಯದ ಎಲ್ಲಾ ಶಾಲೆಗಳಿಗೂ ಅಪೌಷ್ಠಿಕತೆ ನಿವಾರಣೆಗಾಗಿ ಮೊಟ್ಟೆ ಮತ್ತು ಬಾಳೇಹಣ್ಣನ್ನು ವಿತರಣೆ ಮಾಡಲು ಸರ್ಕಾರ ಮುಂದಾಗಬೇಕು ಹಾಗೂ ಸೈಕಲ್ ವಿತರಣೆ ಯನ್ನು ಮಾಡಬೇಕೆಂದು ಎಸ್‌ಎಫ್‌ಐ ಸಂಘಟನೆ ಪ್ರತಿಭಟನೆ ಮನವಿ ಮೂಲಕ ರಾಜ್ಯ ಸರಕಾರವನ್ನು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಸ್ಎಫ್ಐ ರಾಜ್ಯ ಉಪಾಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ, ರಾಜ್ಯ ಜಂಟಿ ಕಾರ್ಯದರ್ಶಿ ಭೀಮನಗೌಡ ಸುಂಕೇಶ್ವರಾಳ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ದೀನಸಮುದ್ರ, ಮುಖಂಡರಾದ ಚಿದಾನಂದ ಕರಿಗೂಳಿ, ಮೌನೇಶ ಬುಳ್ಳಾಪುರ, ಸವರಪ್ಪ ರಾಯಚೂರು, ಐಶ್ವರ್ಯ, ಯಶಸ್ಸ್, ದೇವರಾಜ ಸೇರಿದಂತೆ ಅನೇಕರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

13 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

23 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

23 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

23 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago