ಬಿಸಿ ಬಿಸಿ ಸುದ್ದಿ

ಪ್ರಜಾಪ್ರಭುತ್ವ, ಸಂವಿಧಾನದ ಉಳಿವಿಗಾಗಿ ಕಾಂಗ್ರೆಸ್ ಗೆ ಬೆಂಬಲಿಸಿ: ಡಾ.ರಶೀದ್

ಶಹಾಬಾದ:ಪಕ್ಷ ಸಂಘಟನೆಗೆ ಮಹತ್ವದ ಘಟ್ಟ ಎಂದು ಭಾವಿಸಲಾದ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ತಾಲೂಕಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ ನೇತೃತ್ವದಲ್ಲಿ ಶನಿವಾರ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್, ದೇಶ, ಸಮಾಜ, ಪ್ರಜಾಪ್ರಭುತ್ವ, ಸಂವಿಧಾನದ ಉಳಿವಿಗಾಗಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ. ಆದ್ದರಿಂದ ಎಲ್ಲರೂ ಕಾಂಗ್ರೆಸ್ ಸದಸ್ಯತ್ವವನ್ನು ಪಡೆದುಕೊಳ್ಳಬೇಕೆಂದರು. ಕೋಮುವಾದಿ ಬಿಜೆಪಿಯಿಂದ ದೇಶದ ಐಕ್ಯತೆ ಉಳಿಸಲು ಸಾಧ್ಯವಿಲ್ಲ. ಹೀಗಾಗಿ ಕಾಂಗ್ರೆಸ್‌ಗೆ ಹೊಸ ರಕ್ತದ ಜೊತೆಗೆ ಹೊಸ ಚಿಂತನೆಗಳು ಬರಬೇಕು. ಬದ್ಧತೆ ಇರಬೇಕು.

ಇದಕ್ಕಾಗಿ ಹೊಸಬರನ್ನು ಪಕ್ಷಕ್ಕೆ ಸೇರಿಸಬೇಕು.ಅದಕ್ಕಾಗಿ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಂಡಿದ್ದೆವೆ.ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು, ರೈತ-ಕಾರ್ಮಿಕರು, ವಿದ್ಯಾರ್ಥಿ-ಯುವ ಜನರು ಕಾಂಗ್ರೆಸ್ ಸೇರಬೇಕು’ ಎಂದುಪ್ರಸ್ತುತ ಆಡಳಿತ ನಡೆಸುತ್ತಿರುವ ರಾಜ್ಯ ಹಾಗೂ ಕೇಂದ್ರ ಸರಕಾರ ಅಭಿವೃದ್ಧಿ ವಿಚಾರವಾಗಿ ಸಂಪೂರ್ಣವಾಗಿ ವಿಫಲವೆಂದು ತೋರಿಸಿದೆ. ಬಿಜೆಪಿ ಸರ್ಕಾರದ ಬೆಲೆ ಏರಿಕೆಯಿಂದ ಜನರು ಬೇಸತ್ತು ಹೋಗಿದ್ದಾರೆ.ಅಲ್ಲದೇ ಕಾಂಗ್ರೆಸ್ ಪಕ್ಷದ ಜನಪರವಾದ ಕೊಡುಗೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿ, ಕಾಂಗ್ರೆಸ್ ಕಡೆಗೆ ಜನರು ಮುಖಮಾಡುತ್ತಿದ್ದಾರೆ.ಪಕ್ಷವನ್ನು ಬಲಿಷ್ಠಗೊಳಿಸಲು ಈ ಅಭಿಯಾನವನ್ನು ಹಮ್ಮಿಕೊಂಡಿದ್ದೆವೆ ಎಂದರು.

ಪ್ರಧಾನ ಕಾರ್ಯದರ್ಶಿ ಮೃತ್ಯುಂಜಯ್ ಹಿರೇಮಠ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಕಿರಣ ಚವ್ಹಾಣ ಮಾತನಾಡಿ,ಬಿಜೆಪಿ ಬೆಲೆ ಏರಿಕೆ ಸೇರಿದಂತೆ ಬಿಟ್ ಕಾಯಿನ್ ಹಗರಣ ಸರಕಾರದ ವೈಫಲ್ಯವನ್ನು ಎತ್ತಿ ತೋರಿಸಿದೆ.ದೇಶದ ನಿರ್ಮಾಣದಲ್ಲಿ ಕಾಂಗ್ರೆಸ್ ಪಾತ್ರ, ಪ್ರಸ್ತುತ ಸಂದರ್ಭದಲ್ಲಿ ದೇಶಕ್ಕೆ ಕಾಂಗ್ರೆಸ್ ಅನಿವಾರ್ಯತೆ ಇದೆ. ಕಾಂಗ್ರೆಸ್ ಅನ್ನೋದೇ ಒಂದು ಸಿದ್ದಾಂತ. ಕಾಂಗ್ರೆಸ್ ಪಕ್ಷಕ್ಕೆ ಇತಿಹಾಸ ಇದೆ.

ಹೋರಾಟದ ಹಿನ್ನೆಲೆ ಇದೆ. ದೇಶದ ಬಲವರ್ಧನೆಗೆ ಕಾಂಗ್ರೆಸ್ ಪಕ್ಷ ತೆಗೆದುಕೊಂಡ ನಿರ್ಧಾರ, ಅನೇಕ ಕೊಡುಗೆ ನೀಡಿದೆ. ಸ್ವಾತಂತ್ರ್ಯ ಸಿಕ್ಕ ಮೇಲೆ ೭೫ ವ? ತುಂಬಿದ್ದು, ಭಾರತವನ್ನ ಅಭಿವೃದ್ಧಿ ಶೀಲ ರಾ? ಮಾಡಲಾಗಿದೆ. ಸರ್ವರಿಗೂ ಸಮಪಾಲು ಸಮಬಾಳು ಅಂತ ಅಂಬೇಡ್ಕರ್ ಮೂಲಕ ಸಂವಿಧಾನ ಕೊಡಲಾಗಿದೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರಿಗೆ ಮಾತ್ರವಲ್ಲದೆ, ಸ್ವಾಭಿಮಾನದಿಂದ ಬದುಕುವಂತೆ ಮಾಡಿದ್ದು ಕಾಂಗ್ರೆಸ್ ಪಕ್ಷ.ಅದಕ್ಕಾಗಿ ಕಾಂಗ್ರೆಸ್ ಪಕ್ಷದ ಸದಸ್ಯತ್ವವನ್ನು ಜನರು ಪಡೆದುಕೊಳ್ಳುತ್ತಿದ್ದಾರೆ ಎಂದರು.

ಮುಖಂಡರಾದ ಗಿರೀಶ ಕಂಬಾಣೂರ, ಶರಣು ಪಗಲಾಪೂರ,ಸೂರ್ಯಕಾಂತ ಕೋಬಾಳ, ನಾಗಣ್ಣ ರಾಂಪೂರೆ,ಮಲ್ಲಿಕಾರ್ಜುನ ವಾಲಿ,ನಾಗರಾಜ ಕರಣಿಕ್,ಜಹೀರ ಅಹಮ್ದ್, ಸಯ್ಯದ್ ಜಹೀರ್,ರಮೇಶ ಪವಾರ,ಸ್ನೇಹಲ್ ಜಾಯಿ,ಮಹ್ಮದ್ ಅಜರೋದ್ದಿನ್,ಮಹ್ಮದ್ ಇಮ್ರಾನ್, ಸಾಜಿದ್ ಗುತ್ತೆದಾರ,ರಾಕೇಶ ಪವಾರ ಸೇರಿದಂತೆ ಅನೇಕರು ಇದ್ದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

7 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

7 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

9 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

9 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

9 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

9 hours ago