ಕಲಬುರಗಿ: ವಾರ್ಡ್ ನಂ.೫೪ರಲ್ಲಿ ಬರುವ ದರಿಯಾಪೂರ ಕೊಳಚೆ ಪ್ರದೇಶದ ೧೭೦ ಕುಟುಂಬಗಳಿಗೆ ಮನೆಗಳ ಹಕ್ಕು ಪತ್ರಗಳನ್ನು ವಿತರಿಸುವಂತೆ ಆಗ್ರಹಿಸಿ ಜೈಕನ್ನಡಿಗರ ಸೇನೆ ನೇತೃತ್ವದಲ್ಲಿ ನಗರದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಕಚೇರಿಯ ಎದುರು ಪ್ರತಿಭಟನಾ ಧರಣಿ ಸತ್ಯಾಗ್ರಹ ಕೈಗೊಳ್ಳಲಾಯಿತು.
ಈ ಬಡಾವಣೆಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕು, ಇಲ್ಲಿನ ೧೭೦ಜನ ಕೊಳಗೇರಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆಯಲ್ಲಿ ಆಗುತ್ತಿರುವ ವಿಳಂಭ ದೋರಣೆಯ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಲಾಗಿದ್ದು, ತಕ್ಷಣವೇ ಮಂಡಳಿಯಿಂದ ಹಕ್ಕು ಪತ್ರಗಳನ್ನು ವಿತರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆಯ ಮನವಿ ಪತ್ರವನ್ನು ಸೇನೆಯ ಅಧ್ಯಕ್ಷ ದತ್ತು ಎಚ್.ಭಾಸಗಿ ಅವರು ಮಂಡಿಯ ಅಧಿಕಾರಿಗೆ ಸಲ್ಲಿಸಿದರು. ಧರಣಿ ಸತ್ಯಾಗ್ರಹದಲ್ಲಿ ದೇವಿಂದ್ರ ಡಿ, ನಾಗಪ್ಪಾ ತೆಲಗೂರ, ನಾಗಪ್ಪಾ ಶೀವನೂರ ಸೇರಿದಂತೆ ದರಿಯಾಪೂರ ಕೊಳಗೇರಿ ನಿವಾಸಿಗಳು ಇದ್ದರು.
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…