ಹರ್ನಾಜ್ ಕೌರ್ ಸಂಧು 2021ರ ನೂತನ ವಿಶ್ವ ಸುಂದರಿ

ದೆಹಲಿ: 2021ರ 70ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತದ ಹರ್ನಾಜ್ ಕೌರ್ ಸಂಧು ನೂತನ ವಿಶ್ವ ಸುಂದರಿ ಪಟ್ಟ ಅಲಂಕರಿಸಿದ್ದಾಳೆ. ಮಿಸ್ ಯೂನಿವರ್ಸ್ 2021 ಸ್ಪರ್ಧೆಯಲ್ಲಿ ನಟಿ ಮತ್ತು ಮಾಡೆಲ್ ಹರ್ನಾಜ್ ಕೌರ್ ಸಂಧು ಅವರನ್ನು ಸ್ಪರ್ಧೆಯ ವಿಜೇತೆ ಎಂದು ಘೋಷಿಸುತ್ತಿದ್ದಂತೆ ಭಾರತದ ತ್ರಿವರ್ಣವು ಎತ್ತರಕ್ಕೆ ಹಾರಾಡಿದೆ. ಇಸ್ರೇಲ್‌ನ ದಕ್ಷಿಣ ನಗರವಾದ ಇಲಾಟ್‌ನಲ್ಲಿ ಡಿಸೆಂಬರ್ 12(ಭಾನುವಾರ) ರಂದು ವಿಶ್ವ ಸುಂದರಿ ಸ್ಪರ್ಧೆ ನಡೆದಿದೆ. ಮಿಸ್ ಯೂನಿವರ್ಸ್ 2021 ಹರ್ನಾಜ್ ಸಂಧು ಪಂಜಾಬ್‌ನ ಚಂಡೀಗಢ ಮೂಲದವರು..!

ದೆಹಲಿ: 2021ರ 70ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತದ ಹರ್ನಾಜ್ ಕೌರ್ ಸಂಧು ನೂತನ ವಿಶ್ವ ಸುಂದರಿ ಪಟ್ಟ ಅಲಂಕರಿಸಿದ್ದಾಳೆ. ಮಿಸ್ ಯೂನಿವರ್ಸ್ 2021 ಸ್ಪರ್ಧೆಯಲ್ಲಿ ನಟಿ ಮತ್ತು ಮಾಡೆಲ್ ಹರ್ನಾಜ್ ಕೌರ್ ಸಂಧು ಅವರನ್ನು ಸ್ಪರ್ಧೆಯ ವಿಜೇತೆ ಎಂದು ಘೋಷಿಸುತ್ತಿದ್ದಂತೆ ಭಾರತದ ತ್ರಿವರ್ಣವು ಎತ್ತರಕ್ಕೆ ಹಾರಾಡಿದೆ.

ಇಸ್ರೇಲ್‌ನ ದಕ್ಷಿಣ ನಗರವಾದ ಇಲಾಟ್‌ನಲ್ಲಿ ಡಿಸೆಂಬರ್ 12(ಭಾನುವಾರ) ರಂದು ವಿಶ್ವ ಸುಂದರಿ ಸ್ಪರ್ಧೆ ನಡೆದಿದೆ. ಮಿಸ್ ಯೂನಿವರ್ಸ್ 2021 ಹರ್ನಾಜ್ ಸಂಧು ಪಂಜಾಬ್‌ನ ಚಂಡೀಗಢ ಮೂಲದ ಮಾಡೆಲ್ ಆಗಿದ್ದಾರೆ.ಭಾರತದ ಹರ್ನಾಜ್ ಸಂಧು ಹೊರತುಪಡಿಸಿ, ಪರುಗ್ವೆಯ ನಾಡಿಯಾ ಫೆರೇರಾ ಮೊದಲ ರನ್ನರ್ ಅಪ್, ದಕ್ಷಿಣ ಆಫ್ರಿಕಾದ ಲಲೆಲಾ ಮಸ್ವಾನೆ ಎರಡನೇ ರನ್ನರ್ ಅಪ್ ಎಂದು ಘೋಷಿಸಲಾಗಿದೆ. ಇದು ಪ್ರತಿಷ್ಠಿತ ವಾರ್ಷಿಕ ಕಾರ್ಯಕ್ರಮದ 70ನೇ ಆವೃತ್ತಿಯಾಗಿತ್ತು.2000ರಲ್ಲಿ ಲಾರಾ ದತ್ತಾ ಪ್ರಶಸ್ತಿಯನ್ನು ಗೆದ್ದ 21 ವರ್ಷಗಳ ನಂತರ ವಿಶ್ವ ಸುಂದರಿ ಕಿರೀಟವನ್ನು ಭಾರತಕ್ಕೆ ತಂದಿದ್ದಾರೆ.

ಅಕ್ಟೋಬರ್‌ನಲ್ಲಿ ಹರ್ನಾಜ್ ಸಂಧು ಮಿಸ್ ಯೂನಿವರ್ಸ್ ಇಂಡಿಯಾ 2021 ಕಿರೀಟವನ್ನು ಪಡೆದಿದ್ದರು. ಅವರು ಫೆಮಿನಾ ಮಿಸ್ ಇಂಡಿಯಾ ಪಂಜಾಬ್ 2019 ನಂತಹ ಅನೇಕ ಸ್ಪರ್ಧೆಯಯಲ್ಲಿ ಭಾಗವಹಿಸಿದ್ದಾರೆ. ಜೊತೆಗೆ ಪಂಜಾಬಿ ಚಿತ್ರಗಳಲ್ಲೂ ನಟಿಸಿದ್ದಾರೆ.

ಹರ್ನಾಜ್ ಕೌರ್ ಸಂಧು ಕುರಿತು:ವೃತ್ತಿಯಲ್ಲಿ ಮಾಡೆಲ್ ಆಗಿರುವ ಹರ್ನಾಜ್ ಕೌರ್ ಸಂಧು, ಪಂಜಾಬ್‌ನ ಚಂಡೀಗಢದಿAದ ಬಂದವರು. ಅವರು ತಮ್ಮ ಆರಂಭಿಕ ಶಿಕ್ಷಣವನ್ನು ಚಂಡೀಗಢದ ಶಿವಾಲಿಕ್ ಪಬ್ಲಿಕ್ ಸ್ಕೂಲ್‌ನಲ್ಲಿ ಮಾಡಿದ್ದಾರೆ. ಚಂಡೀಗಢದಲ್ಲಿಯೇ ಪದವಿ ಪಡೆದ ನಂತರ, ಹರ್ನಾಜ್ ಪ್ರಸ್ತುತ ಸ್ನಾತಕೋತ್ತರ ಪದವಿಯನ್ನು ಪಡೆಯುತ್ತಿದ್ದಾರೆ.ಕೇವಲ 21ನೇ ವಯಸ್ಸಿನಲ್ಲಿ ಸಂಧು ಅನೇಕ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ಆದರೆ ಇದರಹೊರತಾಗಿಯೂ, ಅವರು ತಮ್ಮ ಅಧ್ಯಯನವನ್ನು ಬಿಡಲಿಲ್ಲ.

2017ರಂದು ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮೊದಲ ಬಾರಿಗೆ ಪ್ರದರ್ಶನವನ್ನು ನೀಡಿದರು, ಅಂದಿನಿAದ ಅವರ ಮಾಡೆಲಿಂಗ್ ಪಯಣ ಆರಂಭವಾಯಿತು. ಸಂಧುಗೆ ಕುದುರೆ ಸವಾರಿ, ಈಜು ಮತ್ತು ಪ್ರವಾಸ ತುಂಬಾ ಇಷ್ಟವಾದ ಹವ್ಯಾಸಗಳು.

ಚಂಡೀಗಢದ ಮಾಡೆಲ್ ಹರ್ನಾಜ್ ಸಂಧು ತಮ್ಮ ವೃತ್ತಿಜೀವನದಲ್ಲಿ ಅನೇಕ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಇವುಗಳಲ್ಲಿ 2017ರಲ್ಲಿ ಟೈಮ್ಸ್ ಫ್ರೆಶ್ ಫೇಸ್ ಮಿಸ್ ಚಂಡೀಗಢ, 2018ರಲ್ಲಿ ಮಿಸ್ ಮ್ಯಾಕ್ಸ್ ಎಮರ್ಜಿಂಗ್ ಸ್ಟಾರ್, 2019 ರಲ್ಲಿ ಫೆಮಿನಾ ಮಿಸ್ ಇಂಡಿಯಾ ಪಂಜಾಬ್ ಮತ್ತು 2021 ರಲ್ಲಿ ಮಿಸ್ ಯೂನಿವರ್ಸ್ ಗರಿ..!

emedialine

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

14 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

14 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

14 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

14 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

14 hours ago

ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…

14 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420